Advertisement

ಖಾಸಗಿ ಆಸ್ಪತ್ರೆಯಲ್ಲಿ ಶುಲ್ಕ ಸಹಿತ ಲಸಿಕೆ

09:18 PM Jul 17, 2021 | Team Udayavani |

ಹಾವೇರಿ: ಜಿಲ್ಲೆಯ ಆಯ್ದ ಖಾಸಗಿ ಆಸ್ಪತ್ರೆಗಳಲ್ಲಿ ನಿಗದಿತ ಶುಲ್ಕ ಪಾವತಿಸಿ ಕೋವಿಡ್‌ ಲಸಿಕೆ ಪಡೆಯುವ ವ್ಯವಸ್ಥೆಗೆ ಅನುಮತಿ ನೀಡಲಾಗಿದೆ. ಸಾರ್ವಜನಿಕರು ನಿಗ ದಿತ ಶುಲ್ಕ ಪಾವತಿಸಿ ಲಸಿಕೆ ಪಡೆಯಬಹುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಕೋವಿಡ್‌ ಲಸಿಕೆ ನೀಡುವ ಕಾರ್ಯಕ್ರಮ ಮುಂದುವರೆಯಲಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು.

Advertisement

ನಗರದ ಜಿಲ್ಲಾ ಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ “ವಾತ್ಸಲ್ಯ’ ಮಕ್ಕಳ ಆರೋಗ್ಯ ತಪಾಸಣೆ ಯೋಜನೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅವರು ಮಾತನಾಡಿದರು. ಕೋವಿಡ್‌ ಲಸಿಕೆ ಉತ್ಪಾದನಾ ಕಂಪನಿಯಿಂದ ನೇರವಾಗಿ ಖರೀದಿ ಮಾಡಿ ಬಳಕೆ ಮಾಡಲು ಜಿಲ್ಲೆಯ ಐದು ಖಾಸಗಿ ಆಸ್ಪತ್ರೆಗಳಿಗೆ ಅನುಮತಿ ನೀಡಲಾಗಿದೆ. ಕೋವ್ಯಾಕ್ಸಿನ್‌ ಲಸಿಕೆಗೆ 1,410 ರೂ. ಹಾಗೂ ಕೋವಿಶಿಲ್ಡ್‌ ಲಸಿಕೆಗೆ 780 ರೂ. ದರ ನಿಗ ದಿ ಮಾಡಲಾಗಿದೆ. ಜಿಲ್ಲೆಯ ವೀರಾಪುರ ಆಸ್ಪತ್ರೆ, ಮಾಗಾವಿ ಆಸ್ಪತ್ರೆ, ಹೆಗ್ಗೇರಿ ಆಸ್ಪತ್ರೆ, ಓಂ ಆಸ್ಪತ್ರೆ ಹಾಗೂ ಸಾಯಿ ಆಸ್ಪತ್ರೆಗೆ ಲಸಿಕೆ ಹಾಕಲು ಅನುಮತಿ ನೀಡಲಾಗಿದೆ ಎಂದು ತಿಳಿಸಿದರು.

ವಾತ್ಸಲ್ಯ ಯೋಜನೆಯಡಿ ಮೊದಲ ಸುತ್ತಿನ ತಪಾಸಣೆಯಲ್ಲಿ ಕೈಬಿಟ್ಟು ಹೋದ ಮಕ್ಕಳನ್ನು ಪುನಃ ಅಂಗನವಾಡಿ ಶಾಲೆಗಳಿಗೆ ಭೇಟಿ ತಪಾಸಣೆ ನಡೆಸಬೇಕು. ಈಗಾಗಲೇ ತಪಾಸಣೆ ಸಂದರ್ಭದಲ್ಲಿ ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ಮಕ್ಕಳಿಗೆ ಸೂಕ್ತ ಪೌಷ್ಟಿಕ ಆಹಾರ, ಔಷ ಧ, ನ್ಯೂಟ್ರಿಷಿಯನ್‌ ಪೌಡರ್‌ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಅಧಿ  ಕಾರಿಗಳಿಗೆ ಸೂಚನೆ ನೀಡಿದರು.

ಜಿಪಂ ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಮಹಮ್ಮದ ರೋಷನ್‌ ಮಾತನಾಡಿ, ವಿವಿಧ ಆರೋಗ್ಯ ಸಮಸ್ಯೆ, ನಿರೀಕ್ಷಿತ ಪ್ರಮಾಣದಲ್ಲಿ ಬೆಳವಣಿಗೆ ಇಲ್ಲದ ಮಕ್ಕಳನ್ನು ವರ್ಗವಾರು ವಿಂಗಡಿಸಿ ಸೂಕ್ತ ಚಿಕಿತ್ಸೆಗೆ ಕ್ರಮ ವಹಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿರುವ ಡೇ ಕೇರ್‌ಗಳಲ್ಲಿ ಆ ಮಕ್ಕಳಿಗೆ ಮೊಟ್ಟೆ, ಪೌಷ್ಟಿಕ ಆಹಾರ ನೀಡಬೇಕು. ತೀವ್ರ ಆರೋಗ್ಯ ಸಮಸ್ಯೆ ಇರುವ ಮಕ್ಕಳನ್ನು ಆಸ್ಪತ್ರೆಗಳಿಗೆ ದಾಖಲಿಸಬೇಕು. ಈ ಮಕ್ಕಳಿಗೆ ಆರೋಗ್ಯ ಸುರûಾ ಟ್ರಸ್ಟ್‌ ಯೋಜನೆಯಡಿ ವೈದ್ಯಕೀಯ ವೆಚ್ಚ ಭರಿಸಲು ಸಾಧ್ಯವೇ ಎಂದು ಪರಿಶೀಲಿಸಿ ಅಗತ್ಯ ಕ್ರಮ ವಹಿಸಬೇಕು ಎಂದರು.

ಕೋವಿಡ್‌ ಲಕ್ಷಣವುಳ್ಳ ಮಕ್ಕಳಿಗೆ ಈಗಾಗಲೇ ಚಿಕಿತ್ಸೆ ನೀಡಲಾಗಿದೆ. ಈ ಮಕ್ಕಳಲ್ಲಿ ಟಿಬಿ ತಪಾಸಣೆ ಕೈಗೊಳ್ಳಬೇಕು. ಗುರುತಿಸಲಾದ ಮಕ್ಕಳಿಗೆ ಸಪ್ಲಿಮೆಂಟರಿ ಔಷಧಗಳ ಖರೀದಿಗೆ ಕ್ರಮ ವಹಿಸಬೇಕು. ಶಿಶು ಅಭಿವೃದ್ಧಿ ಅ ಧಿಕಾರಿಗಳು, ತಾಲೂಕು ಆರೋಗ್ಯಾಧಿ ಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ವಾತ್ಸಲ್ಯ ಕಾರ್ಯಕ್ರಮದ ಉದ್ದೇಶ ಅರಿತು ಕಾರ್ಯನಿರ್ವಹಿಸುವಂತೆ ಸೂಚನೆ ನೀಡಿದರು. ಖಾಸಗಿ ಶಾಲಾ ಮಕ್ಕಳು ಸೇರಿದಂತೆ ಒಟ್ಟಾರೆ 4,07,373 ಮಕ್ಕಳ ಆರೋಗ್ಯ ತಪಾಸಣೆ ಎದುರು 3,14,361 ಮಕ್ಕಳ ತಪಾಸಣೆ ನಡೆಸಲಾಗಿದೆ. ಈ ಪೈಕಿ 17,230 ಮಕ್ಕಳಲ್ಲಿ ವಿವಿಧ ಆರೋಗ್ಯ ಸಮಸ್ಯೆ ಕಂಡುಬಂದಿದೆ ಎಂದು ಆರ್‌ಸಿಎಚ್‌ ಅಧಿ ಕಾರಿ ಡಾ|ಜಯಾನಂದ ಮಾಹಿತಿ ನೀಡಿದರು.

Advertisement

ಅಪರ ಜಿಲ್ಲಾ ಧಿಕಾರಿ ಎಸ್‌.ಯೋಗೇಶ್ವರ, ಉಪವಿಭಾಗಾಧಿ ಕಾರಿಗಳಾದ ಶಿವಾನಂದ ಉಳ್ಳಾಗಡ್ಡಿ, ಅನ್ನಪೂರ್ಣ ಮುದಕಣ್ಣನವರ, ಡಿಎಚ್‌ಒ ಡಾ|ಎಚ್‌. ಎಸ್‌.ರಾಘವೇಂದ್ರಸ್ವಾಮಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ|ಪಿ. ಆರ್‌.ಹಾವನೂರ, ಮಹಿಳಾ ಮತ್ತು ಮಕ್ಕಳ ಕಲ್ಯಾOಧಿಾಕಾರಿ ಶ್ರೀನಿವಾಸ ಆಲದರ್ತಿ, ತಾಲೂಕು ಶಿಕ್ಷಣಾಧಿಕಾರಿಗಳು, ಶಿಶು ಅಭಿವೃದ್ಧಿ ಅಧಿ ಕಾರಿಗಳು, ತಾಲೂಕು ಆರೋಗ್ಯಾ ಧಿಕಾರಿಗಳು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next