Advertisement

Vaccination Campaign: 6ನೇ ಸುತ್ತಿನ ಕಾಲುಬಾಯಿ ಜ್ವರ ಲಸಿಕಾ ಅಭಿಯಾನ ಆರಂಭ: ಜಿಪಂ ಸಿಇಒ

02:20 AM Oct 22, 2024 | Team Udayavani |

ಮಂಗಳೂರು: ರಾಷ್ಟ್ರೀಯ ರೋಗ ನಿಯಂತ್ರಣ ಕಾರ್ಯಕ್ರಮದಡಿ 6ನೇ ಸುತ್ತಿನ ಕಾಲು ಬಾಯಿ ಜ್ವರದ ಲಸಿಕಾ ಕಾರ್ಯಕ್ರಮವನ್ನು ಜಿಲ್ಲಾದ್ಯಂತ ಅ.21ರಿಂದ ನ. 20ರ ತನಕ ಹಮ್ಮಿಕೊಳ್ಳಲಾಗಿದ್ದು, ಈ ಲಸಿಕಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ|ಆನಂದ್‌ ಕೆ. ಸೂಚಿಸಿದ್ದಾರೆ.

Advertisement

ಈ ಕುರಿತು ಜಿಲ್ಲಾ ಮಟ್ಟದ ನಿರ್ವಹಣ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಲಸಿಕಾ ಅಭಿಯಾನವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಸಲಹೆ ನೀಡಿದರು. ಪ್ರತಿ ಬಾರಿಯಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಕೆ.ಎಂ.ಎಫ್‌. ಲಸಿಕೆದಾರರು ಪ್ರತಿ ಮನೆ ಮನೆಗೂ ತೆರಳಿ ರೈತರ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ. ಕಾಲು ಬಾಯಿ ಜ್ವರ ರೋಗವು ವೈರಸ್‌ನಿಂದ ಹರಡುವ ಸಾಂಕ್ರಾಮಿಕ ಕಾಯಿಲೆಯಾಗಿದ್ದು, ಇದನ್ನು ತಡೆಗಟ್ಟಲು ಲಸಿಕೆ ನೀಡುವುದೊಂದೇ ಪರಿಣಾಮಕಾರಿ ವಿಧಾನವಾಗಿದೆ ಎಂದರು.

ಈ ಹಿಂದೆ ರೈತರು ತಮ್ಮ ಜಾನುವಾರುಗಳಿಗೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಪ್ರತಿಯೊಂದು ಸುತ್ತಿನಲ್ಲಿ ಲಸಿಕೆ ಹಾಕಿಸುವುದು ರೋಗ ನಿಯಂತ್ರಣಕ್ಕೆ ಅವಶ್ಯವಾಗಿರುತ್ತದೆ. ಜಿಲ್ಲೆಯಲ್ಲಿ ಸುಮಾರು 2.15 ಲಕ್ಷ ಜಾನುವಾರುಗಳಿದ್ದು, ಕಾಲು ಬಾಯಿ ಜ್ವರ ರೋಗದ ಲಸಿಕೆ ಹಾಕಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸರ್ವಸನ್ನದ್ದವಾಗಿದ್ದು, ರೈತರು ಹತ್ತಿರದ ಪಶು ವೈದ್ಯಕೀಯ ಸಂಸ್ಥೆ/ಹಾಲು ಉತ್ಪಾದಕರ ಸಹಕಾರಿ ಸಂಘಗಳ ಮೂಲಕ ನಿಗದಿತ ದಿನದಂದು ಜಾನುವಾರುಗಳನ್ನು ಮನೆಯಲ್ಲಿ ಕಟ್ಟಿ ಹಾಕಿ, ಲಸಿಕೆ ಹಾಕಲು ಬರುವ ಸಿಬಂದಿಯೊಡನೆ ಸಹಕರಿಸಿಬೇಕು ಎಂದು ಹೇಳಿದರು.

ಪಶುಪಾಲನ ಇಲಾಖೆಯ ಉಪನಿರ್ದೇಶಕ ಡಾ| ಅರುಣ್‌ ಕುಮಾರ್‌ ಶೆಟ್ಟಿ ಎನ್‌. ಹಾಗೂ ಇತರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next