Advertisement

ಜುಲೈನೊಳಗೆ 30 ಕೋಟಿ ಮಂದಿಗೆ ಲಸಿಕೆ

01:46 AM Nov 26, 2020 | mahesh |

ಹೊಸದಿಲ್ಲಿ: ದೇಶಾದ್ಯಂತ “ಆಪರೇಷನ್‌ ಲಸಿಕೆ’ ಪ್ರಕ್ರಿಯೆಗೆ ಸಿದ್ಧತೆ ನಡೆದಿದ್ದು, ಮುಂದಿನ ಜುಲೈ ತಿಂಗಳೊಳಗೆ 3 ಕೋಟಿ ಆರೋಗ್ಯ ಸೇವಾ ಹಾಗೂ ಮುಂಚೂಣಿ ಕಾರ್ಯಕರ್ತರು ಸೇರಿದಂತೆ ಕನಿಷ್ಠ 25-30 ಕೋಟಿ ಮಂದಿಗೆ ಕೊರೊನಾ ಲಸಿಕೆ ನೀಡಲು ಕೇಂದ್ರ ಸರಕಾರ ನಿರ್ಧರಿಸಿದೆ. ಅದಕ್ಕಾಗಿ, ಲಸಿಕೆಯ 50-60 ಕೋಟಿ ಡೋಸ್‌ಗಳನ್ನು ಖರೀದಿಸಲಿದೆ ಎಂದು ಮೂಲಗಳು ತಿಳಿಸಿವೆ.

Advertisement

ಮುಂದಿನ ವರ್ಷದ ಮೊದಲ ತ್ತೈಮಾಸಿಕದಲ್ಲೇ ಲಸಿಕೆ ವಿತರಣೆ ಆರಂಭವಾಗುವ ಸಾಧ್ಯತೆಯಿದ್ದು, ಈಗಲೇ ಎಲ್ಲ ಸಿದ್ಧತೆ ನಡೆಸಿಕೊಳ್ಳುವಂತೆ ರಾಜ್ಯಗಳಿಗೂ ಕೇಂದ್ರ ಸರಕಾರ ಸೂಚಿಸಿದೆ. ಲಸಿಕೆ ವೇಳೆ ಯಾರಿಗೆ ಹೆಚ್ಚು ಆದ್ಯತೆ ನೀಡಬೇಕು ಎಂಬ ನಿಟ್ಟಿನಲ್ಲಿ ವಿವಿಧ ಕೆಟಗರಿಗಳನ್ನೂ ಮಾಡಲಾಗುತ್ತಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಮಾಸ್ಕ್ ಧರಿಸಿದ್ರೆ ತಡೆ ಸಾಧ್ಯ: ಕನಿಷ್ಠ ಶೇ.70ರಷ್ಟು ಜನರು ನಿರಂತರವಾಗಿ ಮಾಸ್ಕ್ ಧರಿಸಿದರೆ ಕೊರೊನಾ ಸೋಂಕನ್ನು ತಡೆಗಟ್ಟಲು ಸಾಧ್ಯ ಎಂದು ಫಿಸಿಕ್ಸ್‌ ಆಫ್ ಫ್ಲ್ಯೂಯೆಡ್ಸ್‌ ಎಂಬ ನಿಯತಕಾಲಿಕೆಯಲ್ಲಿ ಪ್ರಕಟವಾಗಿರುವ ಅಧ್ಯಯನ ವರದಿಗಳ ವಿಮರ್ಶೆಯಲ್ಲಿ ಹೇಳಲಾಗಿದೆ.

ಪಂಜಾಬ್‌ನಲ್ಲಿ ರಾತ್ರಿ ಕರ್ಫ್ಯೂ: ಪಂಜಾಬ್‌ನಲ್ಲೂ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಬುಧವಾರ ಸರಕಾರ ಹಲವು ಕ್ರಮಗಳನ್ನು ಘೋಷಿಸಿದೆ. ಡಿ.1ರಿಂದ ರಾತ್ರಿ ಕರ್ಫ್ಯೂ ಜಾರಿಯಲ್ಲಿರಲಿದ್ದು, ರಾತ್ರಿ 10ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಘೋಷಿಸಿ ಕ್ಯಾ.ಅಮರೀಂದರ್‌ ಸರಕಾರ ಆದೇಶ ಹೊರಡಿಸಿದೆ. ಜತೆಗೆ, ಮಾಸ್ಕ್ ಧರಿಸದೇ ಇರುವವರು ಮತ್ತು ಸಾಮಾಜಿಕ ಅಂತರ ಪಾಲಿಸದೇ ಇರುವವರಿಗೆ ವಿಧಿಸಲಾಗುವ ದಂಡದ ಮೊತ್ತವನ್ನು ಈಗಿರುವ 500ರೂ.ಗಳಿಂದ 1,000 ರೂ.ಗಳಿಗೆ ಏರಿಸಲಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next