Advertisement
ಆರೋಗ್ಯ ನಂದನ ಕಾರ್ಯಕ್ರಮದಡಿ ಮಕ್ಕಳ ಮಾಹಿತಿ ಕಲೆ ಹಾಕಲಾಗಿದೆ. ಎಷ್ಟು ಡೋಸ್‌ಗಳು ಲಭ್ಯವಾಗುತ್ತವೆ ಎಂಬ ಆಧಾರದಲ್ಲಿ ಈ ಲಸಿಕೆಯನ್ನು 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ನೀಡಲಾಗುತ್ತಿದೆ. ಮುಂದಿನ ವಾರದಿಂದ ರಾಜ್ಯದಲ್ಲಿ ಮಕ್ಕಳಿಗೆ ವಿತರಿಸುವ ನಿರೀಕ್ಷೆಯಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಶೇ. 89ರಷ್ಟು ಮಂದಿಗೆ ಲಸಿಕೆಯ ಮೊದಲ ಡೋಸ್ ನೀಡಲಾಗಿದೆ. ಅದರಲ್ಲಿ ಶೇ.48 ರಷ್ಟು ಮಂದಿ ಎರಡನೇ ಡೋಸ್ ಹಾಕಿಸಿಕೊಂಡಿದ್ದಾರೆ. ಕೋವಿಡ್ ನಿಯಂತ್ರಣಕ್ಕೆ ಬಂದಿದೆ ಅಂದುಕೊಂಡು ಲಸಿಕೆ ಪಡೆಯಲು ಜನರು ಹಿಂದೇಟು ಹಾಕಬಾರದು. ಎರಡನೇ ಡೋಸ್ ಲಸಿಕೆಯನ್ನು ಪಡೆದುಕೊಳ್ಳಲು ಮುಂದೆ ಬರಬೇಕು ಎಂದು ಸಚಿವರು ಮನವಿ ಮಾಡಿದರು.
Related Articles
Advertisement