Advertisement
ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ಜ.3ರಿಂದ 15 ರಿಂದ 17 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿಯೂ ಸಮಾರೋಪಾದಿಯಲ್ಲಿ ಕೈಗೆತ್ತಿಕೊಳ್ಳಲಾಗಿತ್ತು. 65,545 ಮಕ್ಕಳ ಪೈಕಿ 39,050 ಮಂದಿಗೆ ಕೊರೊನಾ ಲಸಿಕೆ ನೀಡಿದ್ದು, ಶೇ.60 ಸಾಧನೆ ಮಾಡಿ, ರಾಜ್ಯ ಮಟ್ಟದ ಪಟ್ಟಿಯಲ್ಲಿ ಪ್ರಥಮ ಸ್ಥಾನ ಗಳಿಸಿರುವುದಕ್ಕೆ ಜಿಲ್ಲಾಧಿಕಾರಿ ಹರ್ಷ ವ್ಯಕ್ತಪಡಿಸಿದರು.
Related Articles
Advertisement
ಸಚಿವರಿಂದ ಉತ್ತಮ ಸ್ಪಂದನೆ: ಜಿಲ್ಲೆಯಲ್ಲಿ ಲಸಿಕಾ ಉತ್ಸವ, ಅಭಿಯಾನ, ಮೇಳಗಳಲ್ಲಿ ಚಿಕ್ಕಬಳ್ಳಾಪುರ ಜನರು ಸದಾ ಸ್ಪಂದನಾಶೀಲರು ಎಂಬುದನ್ನು ಈ ಹಿಂದೆ ನಡೆದ ಮೇಳಗಳಲ್ಲಿ ತೋರಿಸಿಕೊಟ್ಟು ರಾಜ್ಯ ಮಟ್ಟದಲ್ಲಿ ಹಲವು ಬಾರಿ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನ ಗಳಿಸಲು ಕಾರಣಕರ್ತರಾಗಿದ್ದಾರೆ. ಅದೇ ರೀತಿಯಲ್ಲಿ 15ರಿಂದ 18 ರ ವಯೋಮಾನದ ಜಿಲ್ಲೆಯ ಮಕ್ಕಳು ಸ್ಪಂದನಾಶೀಲರೆಂದು ತೋರಿಸಿಕೊಟ್ಟಿದ್ದಾರೆ ಎಂದರು.
ಹಾಗೆಯೇ ಜಿಲ್ಲೆಯ ಸಮಸ್ತ ಜನರು ಮುಂದಿನ ದಿನಗಳಲ್ಲೂ ಸಹಕಾರ ನೀಡಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಕೋವಿಡ್ ನಿಯಂತ್ರಣಾ ಮಾರ್ಗಸೂಚಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಕೋವಿಡ್ 3ನೇ ಅಲೆ ಬರದಂತೆ ಸಹಕಾರ ನಿಡಬೇಕೆಂದು ಜಿಲ್ಲಾಧಿಕಾರಿಗಳು ಜನರಲ್ಲಿ ಮನವಿ ಮಾಡಿದರು.