Advertisement
ಸೋಮವಾರ ನಗರದ ರಥಬೀದಿಯ ಸರಕಾರಿ ಪ.ಪೂ. ಕಾಲೇಜಿನಲ್ಲಿ ನಡೆದ 15ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡುವ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
Related Articles
ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಮಾತನಾಡಿ, ಬೆಂಗಳೂರು ಹೊರತುಪಡಿಸಿ ಅತೀ ಹೆಚ್ಚು ಆಕ್ಸಿಜನ್ ಘಟಕಗಳು ದ.ಕ. ದಲ್ಲಿವೆ. ವೆನ್ಲಾಕ್ ನಲ್ಲೇ 3 ಘಟಕಗಳಿವೆ. ಸದ್ಯ ಐಸಿಯುಗೆ ದ್ರವ ರೂಪದ ಆಕ್ಸಿಜನ್ ಮಾತ್ರ ಹೊರಗಡೆಯಿಂದ ತರಬೇಕು. ಉಳಿದಂತೆ ನಾವು ಸ್ವಾವಲಂಬಿಗಳಾಗಿದ್ದೇವೆ. ಸರಕಾರಿ ಮಟ್ಟದ ಗಂಟಲ ದ್ರವ ಮಾದರಿ ಪರೀಕ್ಷೆ ಪ್ರಯೋಗಾಲಯ ಸದ್ಯ ಮಂಗಳೂರಿನಲ್ಲಿ ಮಾತ್ರ ಇದ್ದು, ಸುಳ್ಯದಲ್ಲಿ ಸರಕಾರಿ ಪ್ರಯೋ ಗಾಲಯ ಸ್ಥಾಪನೆಗೆ ಯೋಜನೆ ರೂಪಿಸ ಲಾಗುತ್ತಿದೆ. ಬಳಿಕ ಮಂಗಳೂರಿನಲ್ಲಿ ಒತ್ತಡ ಕಡಿಮೆಯಾಗಲಿದೆ. ಪ್ರತೀ ದಿನ 15,000 ಕೋವಿಡ್ ಪರೀಕ್ಷೆ ನಡೆಸಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಂಡಿದೆ. ಒಮಿಕ್ರಾನ್ ವೇಗವಾಗಿ ಹರಡುತ್ತಿದ್ದು, ಪ್ರತಿಯೊಬ್ಬರೂ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡಬೇಕು ಎಂದು ತಿಳಿಸಿದರು.
Advertisement
ಅಧ್ಯಕ್ಷತೆ ವಹಿಸಿದ್ದ ಶಾಸಕ ಡಿ. ವೇದವ್ಯಾಸ ಕಾಮತ್, ಕೋವಿಡ್ ತಡೆಯುವ ನಿಟ್ಟಿನಲ್ಲಿ ಸಾರ್ವಜನಿಕರ ಸಹಕಾರ ಮುಖ್ಯ ಎಂದರು.
ಮೇಯರ್ ಪ್ರೇಮಾನಂದ ಶೆಟ್ಟಿ, ಡಿಎಚ್‌ಒ ಡಾ| ಕಿಶೋರ್, ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ರಾಜೇಶ್, ಪ.ಪೂ. ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ಡಿ. ಜಯಣ್ಣ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುಧಾಕರ್, ಮಂಗಳೂರು ಟಿಎಚ್‌ಒ ಡಾ| ಸುಜಯ್, ಪಾಲಿಕೆ ಕೋವಿಡ್ ನೋಡಲ್ ಅಧಿಕಾರಿ ಡಾ| ಅಣ್ಣಯ್ಯ ಕುಲಾಲ್, ಬಂದರು ಪ್ರಾ. ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಚಂದ್ರಪ್ರಭಾ, ಮಾಜಿ ಮೇಯರ್ ದಿವಾಕರ ಪಾಂಡೇಶ್ವರ, ಮನಪಾ ಸದಸ್ಯರಾದ ಜೀನತ್, ಪೂರ್ಣಿಮಾ ಉಪಸ್ಥಿತರಿದ್ದರು.
ರಥಬೀದಿ ಸ.ಪ.ಪೂ. ಕಾಲೆಜು ಪ್ರಾಂಶುಪಾಲೆ ಭಾರತಿ ಬಾೖ ಕೆ. ಸ್ವಾಗತಿಸಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಜ್ಯೋತಿಕೆ. ಉಳೆಪ್ಪಾಡಿ ವಂದಿಸಿದರು. ರಥಬೀದಿಸ.ಪ.ಪೂ. ಕಾಲೇಜು ಉಪನ್ಯಾಸಕಿ ಡಾ| ಸರೋಜಿನಿ ಆಚಾರಿ ನಿರೂಪಿಸಿದರು. ಜ. 10ರಿಂದ ಬೂಸ್ಟರ್ ಡೋಸ್
ದ.ಕ.ದಲ್ಲಿ 60 ವರ್ಷ ಮೇಲ್ಪಟ್ಟವರಿಗೆ 3ನೇ ಡೋಸ್ ಲಸಿಕೆ ನೀಡುವ ಅಭಿಯಾನಕ್ಕೆ ಜ. 10ರಂದು ಚಾಲನೆ ನೀಡಲಾಗುವುದು. ಈವರೆಗೆ 16 ಲಕ್ಷ ಮಂದಿಗೆ ಮೊದಲ ಡೋಸ್ ಸಂಪೂರ್ಣವಾಗಿದ್ದು, ಶೇ. 94ರಷ್ಟು ಸಾಧನೆ ಮಾಡಲಾಗಿದೆ. ಶೇ. 80ರಷ್ಟು ಮಂದಿ 2ನೇ ಡೋಸ್ ಪಡೆದಿದ್ದಾರೆ. ಸುಮಾರು 1 ಲಕ್ಷ ಮಂದಿ ಲಸಿಕೆ ಪಡೆಯಲು ಬಾಕಿ ಇದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಹೇಳಿದರು. ಮೊದಲ ದಿನ 21,026 ವಿದ್ಯಾರ್ಥಿಗಳಿಗೆ ಲಸಿಕೆ
ದ.ಕ.ದಲ್ಲಿ ಸೋಮವಾರ 21,016 ವಿದ್ಯಾರ್ಥಿಗಳಿಗೆ ಕೋವಿಡ್ ನಿರೋಧಕ ಲಸಿಕೆ ನೀಡಲಾಗಿದೆ. ಮಂಗಳೂರಿನಲ್ಲಿ ಅತೀ ಹೆಚ್ಚು 7063 ವಿದ್ಯಾರ್ಥಿಗಳು, ಬಂಟ್ವಾಳ ತಾಲೂಕಿನಲ್ಲಿ 3,438, ಬೆಳ್ತಂಗಡಿಯಲ್ಲಿ 4,583, ಪುತ್ತೂರಿನಲ್ಲಿ 2,580 ಮತ್ತು ಸುಳ್ಯ ತಾಲೂಕಿನಲ್ಲಿ 3,362 ಮಂದಿ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ಉಡುಪಿ: ಮೊದಲ ದಿನ 14,500 ಮಕ್ಕಳಿಗೆ ಲಸಿಕೆ
ಉಡುಪಿ: ನಿಟ್ಟೂರು ಪ್ರೌಢಶಾಲೆಯಲ್ಲಿ ಸೋಮವಾರ 15ರಿಂದ 18 ವರ್ಷಗೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಶಾಸಕ ಕೆ. ರಘುಪತಿ ಭಟ್ ಚಾಲನೆ ನೀಡಿದರು. ಜಿಲ್ಲೆಯಲ್ಲಿ ಒಟ್ಟು 14,500ಕ್ಕೂ ಅಧಿಕ ಮಂದಿ ಮಕ್ಕಳು ಲಸಿಕೆ ಪಡೆದುಕೊಂಡರು.
ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ., ಜಿ.ಪಂ. ಸಿಇಒ ಡಾ| ನವೀನ್ ಭಟ್, ನಗರಸಭಾ ಸದಸ್ಯ ಗಿರಿಧರ ಆಚಾರ್ಯ, ಡಿಡಿಪಿಯು ಮಾರುತಿ, ಡಿಡಿಪಿಐ ಮಲ್ಲೇಸ್ವಾಮಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್, ನಿಟ್ಟೂರು ಪ್ರೌಢಶಾಲೆಯ ಪ್ರಾಂಶುಪಾಲೆ ಅನುಸೂಯಾ, ಡಿಎಚ್‌ಒ ಡಾ| ನಾಗಭೂಷಣ ಉಡುಪ ಉಪಸ್ಥಿತರಿದ್ದರು.