ಸಿಂಧನೂರು: ಕೋವಿಡ್ ಮುಕ್ತ ಭಾರತ ಮಾಡಲು ಪ್ರತಿಯೊಬ್ಬರೂ ಸಂಕಲ್ಪ ತೊಡಬೇಕು. ಇದಕ್ಕಾಗಿ ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳುವುದರ ಜೊತೆಗೆ ಕೋವಿಡ್ ನಿಯಮ ಪಾಲಿಸಬೇಕು ಎಂದು ತಹಶೀಲ್ದಾರ್ ಮಂಜುನಾಥ ಬೋಗಾವತಿ ಹೇಳಿದರು. ಇಲ್ಲಿನ ನೌಕರರ ಭವನದಲ್ಲಿ ತಾಲೂಕು ಸರಕಾರಿ ನೌಕರರ ಸಂಘ, ಆರೋಗ್ಯ ಇಲಾಖೆ ಸಹಭಾಗಿತ್ವದಲ್ಲಿ ನೌಕರರಿಗಾಗಿ ಹಮ್ಮಿಕೊಂಡಿದ್ದ ಲಸಿಕಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೋವಿಡ್ ಸಂದರ್ಭ ಸರಕಾರಿ ನೌಕರರು ಕೊರೊನಾ ವಾರಿಯರ್ ಗಳಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿಯೊಬ್ಬ ಸರಕಾರಿ ನೌಕರರಿಗೆ ಹಾಗೂ ನೌಕರರ ಕುಟುಂಬ ಸದಸ್ಯರಿಗೆ ಲಸಿಕೆ ಹಾಕಿಸಬೇಕು ಎಂದು ನೌಕರರ ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ವ್ಯವಸ್ಥೆ
ಕಲ್ಪಿಸಲಾಗಿದೆ ಎಂದರು.
ಸಂಘದ ಅಧ್ಯಕ್ಷ ಚಂದ್ರಶೇಖರ ಹಿರೇಮಠ ಮಾತನಾಡಿದರು. ತಾಪಂ ಇಒ ಪವನ್‌ಕುಮಾರ, ಕ್ಷೇತ್ರ ಶಿಕ್ಷಣಾ ಧಿಕಾರಿ ಶರಣಪ್ಪ ವಟಗಲ್, ಕೋವಿಡ್ ನೋಡಲ್ ಅಧಿಕಾರಿ ಡಾ| ಜೀವನೇಶ್ವರಯ್ಯ, ಸಂಘದ ಪದಾಧಿಕಾರಿಗಳಾದ ಶಾಂತಕುಮಾರ ಅಗಸಬಾಳ, ಶಶಿಧರ ಹಳ್ಳಿ, ಭರತ್ ಕುಮಾರ್, ಹನುಮಂತಪ್ಪ ನಾಯಕ, ಶಿವಕುಮಾರ್ ಸೇರಿದಂತೆ ಇತರರು ಇದ್ದರು.