Advertisement
ವಿಧಾನಸೌಧದಲ್ಲಿ ಕೇಂದ್ರ ಆರೋಗ್ಯ ಸಚಿವರ ವಿಡಿಯೋ ಸಂವಾದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಲಸಿಕೆಯ ವಿತರಣೆಗೆ ಸಿದ್ಧತೆ, ಕೇಂದ್ರ ಸರ್ಕಾರದಿಂದ ಬೇಕಿರುವ ಸಹಾಯದ ಬಗ್ಗೆ ಗುರುವಾರ ನಡೆದ ಕೇಂದ್ರ ಆರೋಗ್ಯ ಸಚಿವರೊಂದಿಗೆ ನಡೆದ ಸಭೆಯಲ್ಲಿ ಚರ್ಚೆಯಾಗಿದೆ. ಲಸಿಕೆ ಬಂದ ಬಳಿಕ ವಿತರಣೆಯ ಕಾರ್ಯ ಜನಾಂದೋಲನದಂತೆ ನಡೆಯಬೇಕಿದೆ. ಇದಕ್ಕಾಗಿಯೇ ಸಿಬ್ಬಂದಿಗೆ ಹೆಚ್ಚಿನ ತರಬೇತಿ ನೀಡಲಾಗುತ್ತಿದೆ. ಜನವರಿ 8 ರಂದು ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಮೂರು ಕಡೆ ಲಸಿಕೆ ವಿತರಣೆಯ ತಾಲೀಮು ನಡೆಯಬೇಕಿತ್ತು. ಆದರೆ, ನಮ್ಮ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಏಳು ವ್ಯವಸ್ಥೆಯಲ್ಲಿ ತಯಾರಿ ಮಾಡಿಕೊಂಡು 263 ಪ್ರದೇಶಗಳಲ್ಲಿ ಲಸಿಕೆಯ ವಿತರಣೆ ನಡೆಯಲಿದೆ ಎಂದರು.
Related Articles
ಜನವರಿ 17 ರಂದು ಪೊಲಿಯೋ ಲಸಿಕೆ ವಿತರಣೆ ಕಾರ್ಯ ನಡೆಯಲಿದೆ. ಒಟ್ಟು 65 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಉದ್ದೇಶವಿದೆ. ಈ ಕುರಿತು ಎಲ್ಲಾ ತಯಾರಿ ನಡೆಸಲಾಗಿದೆ. ಕೊರೊನಾ ಲಸಿಕೆಯಿಂದ ಯಾವುದೇ ಅಪಾಯವಿಲ್ಲ. ಇದರಿಂದಾಗಿ ಜನರಿಗೆ ಅನುಕೂಲವಾಗುತ್ತದೆ. ಎಲ್ಲರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
Advertisement
ಹಕ್ಕಿಜ್ವರ ಭೀತಿ ಬೇಡಲಕ್ಷಾಂತರ ಮಕ್ಕಳು ಶಾಲೆಗೆ ಹೋಗುತ್ತಿರುವ ಸಮಯದಲ್ಲಿ ಕೊರೊನಾ ಬಗ್ಗೆ ವಿನಾಕಾರಣ ಭೀತಿ ಮೂಡಿಸಬಾರದು. ಸರ್ಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿದೆ. ದಕ್ಷಿಣ ಕನ್ನಡದಲ್ಲಿ 6 ಕಾಗೆಗಳು ಸಾವನ್ನಪ್ಪಿದ್ದು, ಪರೀಕ್ಷೆಗೆ ಕಳುಹಿಸಲಾಗಿದೆ. ಹಕ್ಕಿಜ್ವರ ಬಾರದಂತೆ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.