Advertisement

ದಕ್ಷಿಣಕನ್ನಡ ಜಿಲ್ಲೆಯ 6 ಕೇಂದ್ರಗಳಲ್ಲಿ ನಾಳೆಯಿಂದ ಲಸಿಕೆ ವಿತರಣೆ: ಜಿಲ್ಲಾಧಿಕಾರಿ ಮಾಹಿತಿ

06:42 PM Jan 15, 2021 | Team Udayavani |

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಈಗಾಗಲೇ 24,500 ಡೋಸ್ ಲಸಿಕೆ ಸರಬರಾಜಾಗಿದ್ದು, ಜ.16ರಂದು (ಶನಿವಾರ) ಜಿಲ್ಲೆಯ 6 ಕೇಂದ್ರಗಳಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ  ತಿಳಿಸಿದ್ದಾರೆ.

Advertisement

ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು- ಆಯುಶ್ ವಿಭಾಗ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಸುರತ್ಕಲ್, ತಾಲೂಕು ಆಸ್ಪತ್ರೆ ಬಂಟ್ವಾಳ, ತಾಲೂಕು ಆಸ್ಪತ್ರೆ ಬೆಳ್ತಂಗಡಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಪುತ್ತೂರು ಹಾಗೂ ತಾಲೂಕು ಆಸ್ಪತ್ರೆ ಸುಳ್ಯ ಕೇಂದ್ರದಲ್ಲಿ ಲಸಿಕೆ ನೀಡಲಾಗುತ್ತದೆ.

ಒಂದು ಲಸಿಕಾ ಶಿಬಿರದಲ್ಲಿ ಒಂದು ದಿನಕ್ಕೆ 100 ಮಂದಿಗೆ ಮಾತ್ರ ಲಸಿಕೆ ನೀಡಲಾಗುತ್ತದೆ. ಈಗಾಗಲೇ COWIN website ನಲ್ಲಿ ನೋಂದಾವಣೆಯಾದ ಫಲಾನುಭವಿಗಳಿಗೆ ಮಾತ್ರ ಲಸಿಕೆ ನೀಡಲಾಗುತ್ತದೆ. ಶಿಬಿರದಲ್ಲಿ ನೋಂದಾವಣಿಗೆ ಅವಕಾಶವಿಲ್ಲ. ಲಸಿಕೆಯ ನಂತರ ಅಡ್ಡ ಪರಿಣಾಮ ಕಾಣಿಸಿಕೊಂಡಲ್ಲಿ ವೈದ್ಯಕೀಯ ತಂಡದ ಮೂಲಕ ಚಿಕಿತ್ಸೆಗೆ ಎಲ್ಲಾ ಮಾದರಿಯಲ್ಲೂ ತಯಾರಿ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ಇದನ್ನೂ ಓದಿ:  ಉಳ್ಳಾಲ: ಪ್ರವಾಸಿಗರನ್ನು ಕರೆತಂದು ಸಮುದ್ರಪಾಲಾದ ಕ್ಯಾಬ್ ಚಾಲಕ

Advertisement

Udayavani is now on Telegram. Click here to join our channel and stay updated with the latest news.

Next