Advertisement

ವರ್ಷಾಂತ್ಯದಿಂದ ವಿದೇಶಗಳಿಗೆ ಲಸಿಕೆ ರಫ್ತು; ಕೇಂದ್ರ ಸರ್ಕಾರದ ಘೋಷಣೆ

08:54 PM Oct 25, 2021 | Team Udayavani |

ನವದೆಹಲಿ: ವರ್ಷಾಂತ್ಯದಿಂದ ಇತರ ದೇಶಗಳಿಗೆ ಕೋವಿಡ್‌ ಲಸಿಕೆ ರಫ್ತು ಮಾಡಲಾಗುತ್ತದೆ. ಆದರೆ, ದೇಶದಲ್ಲಿ ಎಲ್ಲರಿಗೂ ಲಸಿಕೆ ಹಾಕುವ ಅಗತ್ಯವನ್ನು ಗಮನದಲ್ಲಿ ಇರಿಸಿಕೊಂಡು ಈ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಸರ್ಕಾರ ಸೋಮವಾರ ತಿಳಿಸಿದೆ.

Advertisement

ಈ ವರ್ಷದ ಏಪ್ರಿಲ್‌ನಿಂದ ಇತರ ದೇಶಗಳಿಗೆ ಲಸಿಕೆ ರಫ್ತು ಮಾಡುವುದನ್ನು ಸ್ಥಗಿತಗೊಳಿಸಿತ್ತು. ಸದ್ಯ 18 ವರ್ಷದಿಂದ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವುದು ಕೇಂದ್ರ ಆದ್ಯತೆಯಾಗಿದೆ ಎಂದು ಆ ಅಧಿಕಾರಿ ತಿಳಿಸಿದ್ದಾರೆ.

ಸಕ್ರಿಯ ಕೇಸು ಇಳಿಕೆ:
ದೇಶದಲ್ಲಿ ಭಾನುವಾರದಿಂದ ಸೋಮವಾರದ ಅವಧಿಯಲ್ಲಿ 14,306 ಹೊಸ ಸೋಂಕು ಪ್ರಕರಣ ದೃಢಪಟ್ಟಿದೆ. 443 ಮಂದಿ ಸೋಂಕಿನಿಂದಾಗಿ ಅಸುನೀಗಿದ್ದಾರೆ. ಹೀಗಾಗಿ, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4,54,712 ಮಂದಿ ಅಸುನೀಗಿದ್ದಾರೆ. ಕೇರಳದಲ್ಲಿ 24 ಗಂಟೆಗಳಲ್ಲಿ 71 ಮಂದಿ ಅಸುನೀಗಿದ್ದಾರೆ ಮತ್ತು ಈ ಹಿಂದೆ ಅಸುನೀಗಿದ್ದ 363 ಮಂದಿಯ ವಿವರವನ್ನೂ ಪರಿಷ್ಕರಿಸಿದೆ. ಸಕ್ರಿಯ ಸೋಂಕು ಸಂಖ್ಯೆ 1,67,695ಕ್ಕೆ ಇಳಿಕೆಯಾಗಿದೆ.

ಇದನ್ನೂ ಓದಿ:ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

ಉ.ಪ್ರ.ಕ್ಕೆ ತಂಡ:
ಝಿಕಾ ವೈರಸ್‌ ಪತ್ತೆಯಾಗಿರುವ ಉತ್ತರ ಪ್ರದೇಶದ ಕಾನ್ಪುರ ಜಿಲ್ಲೆಗೆ ಕೇಂದ್ರ ಸರ್ಕಾರ ಹಲವು ಕ್ಷೇತ್ರಗಳ ತಜ್ಞರು ಇರುವ ತಂಡವನ್ನು ಕಳುಹಿಸಿಕೊಟ್ಟಿದೆ. ಭಾನುವಾರ 57 ವರ್ಷ ವಯಸ್ಸಿನ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next