ಮಂಗಳೂರು: ಏಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಕಾರ್ಯಕ್ರಮ ಹಮ್ಮಿ ಕೊಂಡಿರುವ ಕಾರಣ, 2000 ಹೆಚ್ಚುವರಿ ಲಸಿಕಾ ಕೇಂದ್ರಗಳನ್ನು ಆರಂಭಿಸಲು ಸರ್ಕಾರ ವ್ಯವಸ್ಥೆ ಮಾಡಿದೆ ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದರು
ಕುಡುಪು (ವಾಮಂಜೂರು) ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರ ಜತೆ ಮಾತನಾಡಿದರು.
ಈಗಾಗಲೇ 3000 ಕ್ಕಿಂತ ಹೆಚ್ಚು ಲಸಿಕಾ ಕೇಂದ್ರಗಳು ಕಾರ್ಯನಿರ್ವಹಿಸುತ್ತಿದೆ. ಇದೀಗ 2000 ಕೇಂದ್ರ ಹೆಚ್ಚುವರಿಯಾಗಿ ತೆರೆಯಲಾಗುವುದು. ಹೀಗೆ ಒಟ್ಟು 5000 ಹೆಚ್ಚು ಕೇಂದ್ರಗಳಲ್ಲಿ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗುವುದು ಎಂದರು.
ಇದನ್ನೂ ಓದಿ: ಕೋವಿಡ್ ನಿಯಂತ್ರಣ : ಮಾರ್ಕೆಟ್ ಪ್ರವೇಶಿಸಲು ಇಲ್ಲಿ ಶುಲ್ಕ ಪಾವತಿಸಬೇಕು..!
ಕೋವಿಡ್ ಮಾರ್ಗಸೂಚಿಗಳಿಗೆ ಸಂಬಂಧಿಸಿ, 2 ದಿನಗಳ ಹಿಂದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೊರಡಿಸಿದ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆ ಎಂದರು.