Advertisement

ಪಶು ಇಲಾಖೆ ಸಿಬ್ಬಂದಿಗೆ ಲಸಿಕಾಕರಣ

07:51 PM May 31, 2021 | Team Udayavani |

ಬೀದರ: ಪಶು ಪಾಲನೆ ಹಾಗೂ ಪಶು ವೈದ್ಯಕೀಯ ಸೇವಾ ಇಲಾಖೆಯ ಸಿಬ್ಬಂದಿಗೆ ನೀಡಲಾಗುತ್ತಿರುವ ಕೋವಿಡ್‌ ಲಸಿಕಾಕರಣ ಕಾರ್ಯಕ್ರಮಕ್ಕೆ ಇಲಾಖೆ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ಚಾಲನೆ ನೀಡಿದರು.

Advertisement

ಜಿಲ್ಲೆಯಲ್ಲಿ ಪಸುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಒಟ್ಟು 403 ಜನ ಸಿಬ್ಬಂದಿಗಳಿದ್ದು, 27 ಜನ ಸಿಬ್ಬಂದಿಗೆ ಸಾಂಕೇತಿಕವಾಗಿ ಲಸಿಕೆ ನೀಡಲಾಯಿತು. ಈ ವೇಳೆ ಮಾತನಾಡಿದ ಸಚಿವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಮಯೋಚಿತ ನಿರ್ಧಾರಗಳು, ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯ ಪ್ರಯತ್ನ ಹಾಗೂ ಎಲ್ಲರ ಸಹಕಾರದಿಂದ ಜಿಲ್ಲೆಯಲ್ಲಿ ಕೋವಿಡ್‌ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದೆ.

ದಯವಿಟ್ಟು ಎಲ್ಲರೂ ತಪ್ಪದೇ ಲಸಿಕೆ ಪಡೆದುಕೊಳ್ಳಬೇಕು. ಕೋವಿಡ್‌ ಮಾರ್ಗಸೂಚಿಗಳನ್ನು ಎಲ್ಲರೂ ಪಾಲಿಸಬೇಕು. ಬೀದರ ಜಿಲ್ಲೆಯನ್ನು ಕೋವಿಡ್‌ ಮುಕ್ತವಾಗಿಸಬೇಕು ಎಂದು ತಿಳಿಸಿದರು. ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಎಲ್ಲ ವೈದ್ಯಾಧಿ ಕಾರಿಗಳು ಮತ್ತು ಸಿಬ್ಬಂದಿಗೆ ಲಸಿಕೆ ಹಾಕಿಸಬೇಕು.

ಈ ವಿಷಯದಲ್ಲಿ ನಿರ್ಲಕ್ಷ ಬೇಡ ಎಂದು ಸಿಬ್ಬಂದಿಗೆ ಸಚಿವರು ನಿರ್ದೇಶನ ನೀಡಿದರು. ಈ ಸಂದರ್ಭದಲ್ಲಿ ಶಾಸಕ ರಾಜಶೇಖರ ಪಾಟೀಲ, ಬೀದರ ನಗರಭಿವೃದ್ಧಿ ಪ್ರಾಧಿ ಕಾರದ ಅಧ್ಯಕ್ಷ ಬಾಬು ವಾಲಿ, ತಹಶೀಲ್ದಾರ್‌ ಎಚ್‌. ಗಂಗಾದೇವಿ, ಇಲಾಖೆಯ ಉಪ ನಿರ್ದೇಶಕ ಡಾ| ರವೀಂದ್ರ ಭುರೆ, ಡಾ| ಗೌತಮ ಅರಳಿ, ಡಾ| ನರಸಪ್ಪ, ಡಾ| ರಘುವೀರ ಪ್ರಸಾದ, ಯಲಗೌಡ, ಡಾ| ಸಂಗಮೇಶ, ಡಾ| ನೀಲಕಂಠ ಚೆನ್ನಶೆಟ್ಟಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next