Advertisement

ಕಾಲೇಜುಗಳಿಗೆ ತೆರಳಿ ಲಸಿಕೆ ಪಡೆದ ವಿದ್ಯಾರ್ಥಿಗಳು

04:56 PM Jun 29, 2021 | Team Udayavani |

ಮೈಸೂರು: ಜಿಲ್ಲಾದ್ಯಂತ 18 ವರ್ಷ ಮೇಲ್ಪಟ್ಟ ಕಾಲೇಜು ವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಅಭಿಯಾನ ಸೋಮವಾರದಿಂದ ಆರಂಭವಾಯಿತು.

Advertisement

ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ಜಿಲ್ಲೆಯ ಏಳು ತಾಲೂಕುಗಳಲ್ಲಿರುವಕಾಲೇಜು ಹಾಗೂ ನಗರದ ಪ್ರಮುಖ ಕಾಲೇಜುಗಳಲ್ಲಿ ಸೋಮವಾರ ಕಾಲೇಜುವಿದ್ಯಾರ್ಥಿಗಳಿಗೆ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಮೊದಲ ದಿನವೇ4 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು.

ವಿದ್ಯಾರ್ಥಿಗಳು ತಮ್ಮ ತಮ್ಮ ಭಾಗದ ಕಾಲೇಜುಗಳಿಗೆ ತೆರಳಿ, ಆರ್‌ಎಟಿ (ರ್ಯಾಟ್‌) ಟೆಸ್ಟ್‌ಗೆ ಒಳಪಟ್ಟು ಕೋವಿಡ್‌ ನೆಗೆಟಿವ್‌ ವರದಿ ಬಂದ ಬಳಿಕ ಲಸಿಕೆ ಪಡೆದುಕೊಂಡರು.

ಕಾಲೇಜುಗಳನ್ನು ಪುನಾರಂಭಿಸುವ ಉದ್ದೇಶದಿಂದ ವಿದ್ಯಾರ್ಥಿಗಳಿಗೆ ಎರಡು ಹಂತದ ಲಸಿಕೆ ನೀಡುವ ಸಲುವಾಗಿ ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲವಿದ್ಯಾರ್ಥಿಗಳನ್ನು ಗುರುತಿಸಲಾಗಿದೆ. ಸೋಮವಾರದಿಂದ ಲಸಿಕೆ ಹಾಕುವಕಾರ್ಯ ನಡೆಸಲಾಯಿತು. ಮಂಗಳವಾರಮತ್ತಷ್ಟು ಕಾಲೇಜುಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಸಿಬ್ಬಂದಿ ಹಾಗೂ ವೈದ್ಯರು ಲಸಿಕೆ ನೀಡಲಿದ್ದಾರೆ ಎಂದು ಆರೋಗ್ಯಾಧಿಕಾರಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next