Advertisement
ಹೊಸದಿಲ್ಲಿ ಪ್ರವಾಸದಲ್ಲಿದ್ದ ಸಚಿವರು ಕೆಎಫ್‌ಡಿ ಲಸಿಕೆ ಕುರಿತು ಭಾರತೀಯ ವೈದ್ಯಕೀಯ ಸಂಶೋಧನ ಮಂಡಳಿ (ಐಸಿಎಂಆರ್) ನಿರ್ದೇಶಕರನ್ನು ಭೇಟಿ ಮಾಡಿ ಚರ್ಚೆ ನಡೆಸಿ, ಈಗಾಗಲೇ ಮೊದಲ ಹಂತದ ಪ್ರಯೋಗದಲ್ಲಿ ಕೆಎಫ್‌ಡಿ ಲಸಿಕೆ ಭರವಸೆ ಮೂಡಿಸಿದೆ. ರಾಜ್ಯದ ಕೆಎಫ್‌ಡಿ ಪೀಡಿತ ಪ್ರದೇಶಕ್ಕೆ ಕಾಲಮಿತಿಯೊಳಗೆ ಲಸಿಕೆ ಲಭ್ಯತೆ ಅಗತ್ಯವಿದೆ. ಎರಡನೇ ಹಂತದ ಪ್ರಯೋಗ ಶೀಘ್ರದಲ್ಲಿ ಪ್ರಾರಂಭಿಸಲಾಗುತ್ತದೆ ಎಂದರು.
ಇದೇ ವೇಳೆ ರಾಜ್ಯದ ಅನಿಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಗೆ ಐಸಿಎಂಆರ್ ನಿರ್ದೇಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ವಿಶೇಷವಾಗಿ ಸರಕಾರಿ ಶಾಲಾ ಕಾಲೇಜು ಮಕ್ಕಳನ್ನು ರಕ್ತಹೀನತೆ ತಪಾಸಣೆಗೆ ಒಳಪಡಿಸುತ್ತಿರುವುದು ಉತ್ತಮ ಯೋಜನೆ ಎಂದಿದ್ದಾರೆ. ಅಲ್ಲದೇ ಭಾರತ ಸರಕಾರದ ರಕ್ತ ಹೀನತೆ ಮುಕ್ತ ಭಾರತ್ 2.ಒ ಯೋಜನೆಗೆ ಅನುಗುಣವಾಗಿ ಯೋಜನೆ ವಿಸ್ತರಿಸುವಂತೆ ಸಚಿವರಲ್ಲಿ ವಿನಂತಿಸಿದರು. ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ರಾಜ್ಯ ಆರೋಗ್ಯ ಇಲಾಖೆ ಕೈಗೊಂಡ ನವೀನ ತಂತ್ರಜ್ಞಾನವನ್ನು ದೇಶದ ಇತರ ರಾಜ್ಯಗಳಲ್ಲಿ ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ಐಸಿಎಂಆರ್ ನಿರ್ದೇಶಕರು ತಿಳಿಸಿದ್ದಾರೆ ಎಂದು ಮಾಹಿತಿ ನೀಡಿದರು.