Advertisement

“ಈ ವರ್ಷ ಒಂದು ಹಂತದಲ್ಲಿ ಮಾತ್ರ ಲಸಿಕೆ’

01:00 AM Mar 11, 2019 | Team Udayavani |

ಗಂಗೊಳ್ಳಿ: ಪ್ರಾಥಮಿಕ ಆರೋಗ್ಯ ಕೇಂದ್ರ ಗಂಗೊಳ್ಳಿ, ಗ್ರಾ.ಪಂ. ಗಂಗೊಳ್ಳಿ ಸಂಯುಕ್ತ ಆಶ್ರಯದಲ್ಲಿ ರೋಟರಿ ಕ್ಲಬ್‌ ಗಂಗೊಳ್ಳಿಯ ಸಹಯೋಗದೊಂದಿಗೆ ಇಲ್ಲಿನ ಪ್ರಾಥಮಿಕ ಆರೋಗ್ಯದ ವಠಾರದಲ್ಲಿ ರವಿವಾರ ನಡೆದ ಪಲ್ಸ್‌ ಪೋಲಿಯೋ ಲಸಿಕಾ ಅಭಿಯಾನವನ್ನು ಗಂಗೊಳ್ಳಿ ಗ್ರಾ. ಪಂ. ಅಧ್ಯಕ್ಷ ಶ್ರೀನಿವಾಸ ಖಾರ್ವಿ ಉದ್ಘಾಟಿಸಿದರು.

Advertisement

ಗಂಗೊಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಶ್ವೇತಾ ಮಾತನಾಡಿ, ನಮ್ಮ ದೇಶದ ನೆರೆಯ ಪಾಕಿಸ್ಥಾನ, ಆಫ್ಘಾನಿಸ್ಥಾನ, ನೈಜಿರೀಯಾ ಮೊದಲಾದ ದೇಶಗಳಲ್ಲಿ ಪೋಲಿಯೋ ಪೀಡಿತರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಈ ದೇಶದಿಂದ ನಮ್ಮ ದೇಶಕ್ಕೆ ಅನೇಕ ಜನರು ವಲಸೆ ಬರುತ್ತಿದ್ದಾರೆ. 2014ರಲ್ಲಿ ವಿಶ್ವ ಆರೋಗ್ಯ ಸಂಸ್ಥೆಯು ಭಾರತವನ್ನು ಪೊಲಿಯೋ ಮುಕ್ತ ದೇಶ ಎಂದು ಘೋಷಣೆ ಮಾಡಿದ್ದರೂ, ದೇಶದಲ್ಲಿ ಪೋಲಿಯೋ ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಈ ವರ್ಷ ಒಂದು ಹಂತದಲ್ಲಿ ಮಾತ್ರ ಲಸಿಕೆ ಹಾಕಲಾಗುತ್ತಿದೆ ಎಂದರು. 
ಗಂಗೊಳ್ಳಿ ವ್ಯಾಪ್ತಿಯಲ್ಲಿ ಒಟ್ಟು 409 ಮಂದಿ ಮಕ್ಕಳಿಗೆ ಲಸಿಕೆಗೆ ಅರ್ಹರಾಗಿದ್ದು, ಈ ಪೈಕಿ ಹೆಚ್ಚಿನ ಎಲ್ಲ ಮಕ್ಕಳಿಗೆ ಲಸಿಕೆ ಹಾಕಲಾಯಿತು.  

ಗಂಗೊಳ್ಳಿ ರೋಟರಿ ಕ್ಲಬ್‌ ಅಧ್ಯಕ್ಷ ಕೆ.ರಾಮನಾಥ ನಾಯಕ್‌ ಶುಭ, ಗ್ರಾ.ಪಂ. ಸದಸ್ಯ ರಾಘವೇಂದ್ರ ಪೈ, ಹಿರಿಯ ಆರೋಗ್ಯ ಸಹಾಯಕಿ ಶೋಭಾ ಮತ್ತಿತರರು ಉಪಸ್ಥಿತರಿದ್ದರು. ಕಿರಿಯ ಆರೋಗ್ಯ ಸಹಾಯಕಿ ಪ್ರಜ್ವಲಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.  

Advertisement

Udayavani is now on Telegram. Click here to join our channel and stay updated with the latest news.

Next