Advertisement
ಇಲ್ಲಿ ವಿದೇಶಗಳಲ್ಲಿ ವ್ಯಾಸಂಗ ಹಾಗೂ ಉದ್ಯೋಗ ಮಾಡುತ್ತಿರುವ ಬೆಂಗಳೂರಿಗರಿಗಾಗಿ ಮಂಗಳವಾರದಿಂದ ವಿಶೇಷ ಲಸಿಕೆ ಅಭಿಯಾನವನ್ನು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿದೆ.
Related Articles
Advertisement
“ಯಾವ ಸಣ್ಣ ಸಮಸ್ಯೆಯೂ ಇಲ್ಲದೆ ಇಲ್ಲಿ ಲಸಿಕೀಕರಣ ನಡೆಯುತ್ತಿದ್ದು, ವಿವಿ ಮತ್ತು ಪಾಲಿಕೆ ಸಿಬ್ಬಂದಿಯ ಚೆನ್ನಾಗಿ ವ್ಯವಸ್ಥೆ ಮಾಡಿದ್ದಾರೆ. ನಮಗೆ ಆದಷ್ಟು ಬೇಗ ಲಸಿಕೆ ಕೊಡಿ ಎಂದು ವಿವಿಧ ದೇಶಗಳಲ್ಲಿ ಕೆಲಸ ಮಾಡುತ್ತಿರುವವರು, ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳು ಬೇಡಿಕೆ ಇಡುತ್ತಿದ್ದರು. ಅವರ ಮನವಿಗೆ ಪುರಸ್ಕಾರ ಕೊಟ್ಟು ಈ ಶಿಬಿರವನ್ನು ನಡೆಸಲಾಗುತ್ತಿದೆ. ಮಂಗಳವಾರ 275 ಜನ ಲಸಿಕೆ ಪಡೆದಿದ್ದರು. ಇವತ್ತು ಕೂಡ 200ಕ್ಕೂ ಹೆಚ್ಚು ಜನರು ಪಡೆದಿದ್ದಾರೆ” ಎಂದು ಡಿಸಿಎಂ ಡಾ.ಅಶ್ವತ್ಥನಾರಾಯಣ ಮಾಹಿತಿ ನೀಡಿದರು.
ಇವರಿಗೆ ಕೋವಿಶೀಲ್ಡ್:
ಲಸಿಕೆ ಪಡೆಯದೇ ಇವರು ವಿದೇಶಕ್ಕೆ ಹೋಗಲು ಆಗುವುದಿಲ್ಲ. ಹೀಗಾಗಿ ಇವರೆಲ್ಲರಿಗೂ ಆದ್ಯತಾ ಗುಂಪಿನ ಕೋಟಾದಲ್ಲಿ ಲಸಿಕೆ ಕೊಡಲಾಗುತ್ತಿದೆ. ಆರು ವಾರಗಳ ಅಂತರದಲ್ಲಿ ಇವರಿಗೆ ಎರಡನೇ ಡೋಸ್ ನೀಡಿ, ವ್ಯಾಕ್ಸಿನ್ ಪಡೆದ ಬಗ್ಗೆ ಅಧಿಕೃತ ʼಸರ್ಟಿಫಿಕೇಟ್ʼ ನೀಡಲಾಗುವುದು. ಎಲ್ಲರಿಗೂ ವಿಶ್ವ ಆರೋಗ್ಯ ಸಂಸ್ಥೆ (WHO) ಮಾನ್ಯತೆ ನೀಡಿರುವ ʼಕೋವಿಶೀಲ್ಡ್ʼ ಲಸಿಕೆ ಕೊಡಲಾಗುತ್ತಿದೆ ಎಂದು ಡಿಸಿಎಂ ತಿಳಿಸಿದರು.