ಚಳ್ಳಕೆರೆ: ಕೇಂದ್ರ ಸರ್ಕಾರ ಕೋವಿಡ್-19 ನಿಯಂತ್ರಣ ಹಿನ್ನೆಲೆಯಲ್ಲಿ ಮೊದಲ ಹಂತದಲ್ಲಿ ಆರೋಗ್ಯ ಇಲಾಖೆ, ಖಾಸಗಿ ವೈದ್ಯಕೀಯ ಸಿಬ್ಬಂದಿ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದೆ. ಎರಡನೇ ಹಂತದ ಲಸಿಕೆ ವಿತರಣೆಯಲ್ಲಿ ಪೊಲೀಸ್, ಪೌರ ಕಾರ್ಮಿಕ ಮತ್ತು ಕಂದಾಯ ಇಲಾಖೆ ನೌಕರರಿಗೆ ಲಸಿಕೆ ವಿತರಣೆ ಮಾಡಲಾಗುತ್ತಿದೆ ಎಲ್ಲರೂ ಲಸಿಕೆಯನ್ನು ಪಡೆದು ಕೋವಿಡ್ ವೈರಾಣುವಿನಿಂದ ರಕ್ಷಣೆ ಪಡೆಯುವಂತೆ ಶಾಸಕ ಟಿ. ರಘುಮೂರ್ತಿ ಕರೆ ನೀಡಿದರು.
ಸೋಮವಾರ ಇಲ್ಲಿನ ಸರ್ಕಾರಿ ಆಸ್ಪತ್ರೆಯ ಕೋವಿಡ್ ಕೇಂದ್ರದಲ್ಲಿ ಎರಡನೇ ಹಂತದ ಉಚಿತ ಲಸಿಕಾ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಈಗಾಗಲೇ ಮೊದಲ ಹಂತದ ಲಸಿಕಾ ವಿತರಣೆಯಲ್ಲಿ ಉತ್ತಮ ಯಶಸ್ಸು ಸಾ ಧಿಸಿದೆ. ಈ ಹಿನ್ನೆಲೆಯಲ್ಲಿ ದ್ವಿತೀಯ ಹಂತದ ಲಸಿಕಾ ವಿತರಣಾ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಆದಷ್ಟು ಬೇಗ ಜನಸಾಮಾನ್ಯರಿಗೂ ಸಹ ಉಚಿತ ಲಸಿಕೆ ನೀಡುವಂತಹ ಕಾರ್ಯ ಆಗಬೇಕಿದೆ.
ಪ್ರತಿಯೊಬ್ಬರೂ ಯಾವುದೇ ರೀತಿಯ ಆತಂಕಕ್ಕೆ ಒಳಗಾಗದೆ ಲಸಿಕೆಯನ್ನು ಪಡೆಯಬೇಕು. ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇದುವರೆಗೂ ಲಸಿಕೆ ಪಡೆದ ಪ್ರತಿಯೊಬ್ಬರೂ ಆರೋಗ್ಯವಂತರಾಗಿದ್ದು,ಯಾವುದೇ ವ್ಯತಿರಿಕ್ತ ಪರಿಣಾಮ ಉಂಟಾದ ಬಗ್ಗೆ ಎಲ್ಲೂ ಮಾಹಿತಿ ಇಲ್ಲ. ಆದ್ದರಿಂದ ಪ್ರತಿಯೊಬ್ಬರೂ ಲಸಿಕೆಯನ್ನು ಆತ್ಮವಿಶ್ವಾಸದಿಂದ ಪಡೆಯಬೇಕೆಂದರು. ತಾಲೂಕು ಆರೋಗ್ಯಾ ಧಿಕಾರಿ ಡಾ| ಎನ್. ಪ್ರೇಮಸುಧಾ ಮಾತನಾಡಿ, ಫೆ. 8 ರಿಂದ 12ರ ತನಕ ಚಳ್ಳಕೆರೆಯ ಸರ್ಕಾರಿ ಆಸ್ಪತ್ರೆ ಆವರಣದ ಕೋವಿಡ್ ಕೇಂದ್ರ, ನಾಯಕನಹಟ್ಟಿ, ಪರಶುರಾಮಪುರ ಆರೋಗ್ಯ ಸಮುದಾಯ ಕೇಂದ್ರಗಳಲ್ಲಿ ಲಸಿಕೆ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ:ನರೇಗಾ ಹಣ ದುರ್ಬಳಕೆ: ಕ್ರಮಕ್ಕೆ ವೈ.ಎನ್. ಆಗ್ರಹ
ಸುಮಾರು 1500ಕ್ಕೂ ಹೆಚ್ಚು ಜನರು ಲಸಿಕೆಪಡೆಯಲಿದ್ದಾರೆ. ಪ್ರತಿಯೊಬ್ಬರೂ ಈ ಲಸಿಕೆಯನ್ನು ತಪ್ಪದೇ ಪಡೆಯುವಂತೆ ಮನವಿ ಮಾಡಿದರು. ತಹಶೀಲ್ದಾರ್ ಎಂ. ಮಲ್ಲಿಕಾರ್ಜುನ್, ನಗರಸಭೆ ಪೌರಾಯುಕ್ತ ಪಿ. ಪಾಲಯ್ಯ, ಪೊಲೀಸ್ ಇನ್ ಪೆಕ್ಟರ್ ಜೆ.ಸಿ. ತಿಪ್ಪೇಸ್ವಾಮಿ, ಕಂದಾಯ ಇಲಾಖೆ ನೌಕರರು ಹಾಗೂ ಪೌರ ಕಾರ್ಮಿಕರು ಉಚಿತ ಲಸಿಕೆ ಪಡೆದುಕೊಂಡರು. ನಗರಸಭೆ ಅಧ್ಯಕ್ಷೆ ಸಿ.ಬಿ. ಜಯಲಕ್ಷ್ಮೀ ಕೃಷ್ಣಮೂರ್ತಿ, ಉಪಾಧ್ಯಕ್ಷೆ ಜೈತುಂಬಿ, ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಟಿ. ರಮೇಶ್ ಗೌಡ ಇದ್ದರು.