Advertisement

ವಾರಿಯರ್ಸ್ ಗೆ ಮೊದಲ ಹಂತದಲ್ಲಿ ಲಸಿಕೆ

05:42 PM Dec 18, 2020 | Suhan S |

ಯಾದಗಿರಿ: ರಾಜ್ಯದಲ್ಲಿ ಕೋವಿಡ್‌-19 ವ್ಯಾಕ್ಸಿನ್‌ ಲಸಿಕೆ ಯಶಸ್ವಿಯಾಗಲಿದ್ದು, ಜಿಲ್ಲೆಯಲ್ಲಿ ಕೋವಿಡ್‌-19 ಲಸಿಕೆ ವಿತರಣೆಗೆ ಎಲ್ಲಾ ಬಗೆಯ ಸಿದ್ಧತೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್‌. ಹೇಳಿದರು.

Advertisement

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬಕಲ್ಯಾಣ ಇಲಾಖೆಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಇಲಾಖೆಗಳ ಸಂಯೋಗದಲ್ಲಿ ನಡೆದ ಕೋವಿಡ್‌ 19 ಲಸಿಕೆಯ ಬಗ್ಗೆ ಪೂರ್ವ ತಯಾರಿ ಹಾಗೂ ರಾಷ್ಟ್ರೀಯ ಪಲ್ಸ್‌ ಪೋಲಿಯೋ ಕಾರ್ಯಕ್ರಮದತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಕೋವಿಡ್‌ 19 ಸಾಂಕ್ರಾಮಿಕ ರೋಗ ಹರಡುವ ಸಂದರ್ಭದಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸ್‌ ಇಲಾಖೆಯ ಸಿಬ್ಬಂದಿ ಸೇರಿದಂತೆ ಇತರ ಇಲಾಖೆಯವರ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಮೊದಲ ಹಂತದ ಲಸಿಕೆಯನ್ನು ಕೋವಿಡ್‌ ವಾರಿಯರ್ಸ್‌ಗೆ ಪ್ರಾಯೋಗಿಕವಾಗಿನೀಡಲು ನಿರ್ಧರಿಸಲಾಗಿದೆ. ಲಸಿಕೆ ನೀಡುವಸಮಯದಲ್ಲಿ ಊಹಾಪೋಹಗಳು ಕೇಳಿ ಬರುತ್ತವೆ.ಆದರೆ ಇದಕ್ಕೆ ಯಾರು ಕಿವಿಗೊಡಬಾರದು ಎಂದು ಹೇಳಿದರು.

ಕೋವಿಡ್‌ ಲಸಿಕೆ ಅಗತ್ಯವಿರುವವರು ಕೂಡಲೇ ಹತ್ತಿರದ ಕೋವಿಡ್‌ ಸೆಂಟರ್‌ಗಳಿಗೆ ಭೇಟಿ ನೀಡಿನೋಂದಣಿ ಮಾಡಿ ಲಸಿಕೆ ಪಡೆಯಲು ಅವಕಾಶಕಲ್ಪಿಸಲಾಗಿದೆ. ಲಸಿಕೆ ದೊರೆತ ಬಳಿಕ ಹೆಚ್ಚು ಜನರಿಗೆನೀಡಲಾಗುವುದು. ಕೊರೊನಾ ನಿಯಂತ್ರಣಕ್ಕಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಮೊದಲ ಹಂತದ ಲಸಿಕೆ ನೀಡಲಾಗುವುದು. ನಂತರ 50 ವರ್ಷ ಮೇಲ್ಪಟ್ಟವರಿಗೆ ನೀಡಲಾಗುವುದು ಎಂದರು.

ಜಿಪಂ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಇಂದುಮತಿ ಪಾಟೀಲ್‌, ಆರ್‌.ಸಿ.ಎಚ್‌ಡಾ.ಸೂರ್ಯ ಪ್ರಕಾಶ್‌ ಕಂದಕೂರ, ಐಎಂಎ ಅಧ್ಯಕ್ಷ ಡಾ.ಸಿ.ಎಂ. ಪಾಟೀಲ್‌, ಎಸ್‌.ಎಂ.ಒ ಡಾ.ಅನಿಲ್‌ ಜಾರಕೋಳಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಡಾ.ಲಕ್ಷ್ಮೀಕಾಂತ ಸೇರಿದಂತೆ ಇತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next