Advertisement
ಇಂದು ಬೆಂಗಳೂರು ನಗರದ ಶ್ವಾಸ ಯೋಗ ಕೇಂದ್ರದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಪ್ರಮುಖ ಸಮುದಾಯಗಳಲ್ಲಿ ಒಂದಾಗಿರುವ ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎನ್ನುವುದರ ಹೋರಾಟದ ಹಿಂದೆ 3 ದಶಕಗಳ ಇತಿಹಾಸವಿದೆ. ಹಂತಹಂತಗಳಲ್ಲಿ ನಡೆಸಿದ ಹೋರಾಟ ಅಂತಿಮ ಹಂತಕ್ಕೆ ಬಂದು ಸೇರಿದೆ. 2 ಡಿ ಹಾಗೂ 2 ಸಿ ಮೀಸಲಾತಿಯನ್ನು ಘೋಷಣೆ ಮಾಡಿದ್ದನ್ನು ನಾವು ಸ್ವಾಗತಿಸುವುದಾಗಲಿ ಅಥವಾ ತಿರಸ್ಕರಿಸುವುದಾಗಲಿ ಮಾಡಿರಲಿಲ್ಲ. ಈ ಘೋಷಣೆಯಲ್ಲಿ ಸ್ಪಷ್ಟತೆಯ ಅಗತ್ಯತೆಯನ್ನು ಒತ್ತಿ ಹೇಳಿದ್ದೇವು. ಈ ಹಿನ್ನಲೆಯಲ್ಲಿ ರಾಜ್ಯ ಸರಕಾರ ಹಿಂದುಳಿದ ಆಯೋಗದ ಮಧ್ಯಂತರ ವರದಿಯನ್ನು ಪಡೆದುಕೊಂಡಿದೆ. ಮಧ್ಯಂತರ ವರದಿಯನ್ನ ಸಮಗ್ರವಾಗಿ ಪರಿಶೀಲಿಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಭರವಸೆಯನ್ನು ನೀಡಿದ್ದಾರೆ. ಪ್ರವರ್ಗ ಯಾವುದಾರೂ ಇರಲಿ ಆದರೆ ನಮ್ಮ ಸಮುದಾಯಕ್ಕೆ ಮೀಸಲಾತಿ ದೊರೆಯುವುದು ಬಹಳ ಅಗತ್ಯ. ಅದಕ್ಕೆ ಬೇಕಾದಂತಹ ಪೂರಕ ವಾತಾವರಣ ಈಗ ಸಿದ್ದವಾಗಿದೆ. ಆಯೋಗದ ಮಧ್ಯಂತರ ವರದಿ ಹಾಗೂ ಇಂದಿನ ಹೈಕೋರ್ಟ್‌ನಲ್ಲಿನ ಪಿಐಎಲ್ ಕುರಿತ ತೀರ್ಪು ಬಹುದೊಡ್ಡ ಬೆಳವಣಿಗೆಗಳಾಗಿವೆ ಎಂದರು.
Advertisement
ನಾಳೆ ರಾಜ್ಯ ಸರಕಾರದಿಂದ ಪಂಚಮಸಾಲಿ ಸಮುದಾಯಕ್ಕೆ ಕೊಡುಗೆ: ವಚನಾನಂದ ಸ್ವಾಮೀಜಿ ವಿಶ್ವಾಸ
01:18 PM Mar 23, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.