ದಾವಣಗೆರೆ: ಬೆಳಗಾವಿಯಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ಸಂದರ್ಭದಲ್ಲಿ ನಡೆದ ಅಹಿತಕರ ಘಟನೆಯನ್ನು ತೀವ್ರವಾಗಿ ಖಂಡಿಸುತ್ತೇವೆ. ಇಡೀ ಘಟನೆಯ ಬಗ್ಗೆ ಸರ್ಕಾರ ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಹೋರಾಟಗಾರರ ವಿರುದ್ದದ ಎಲ್ಲ ಪ್ರಕರಣಗಳ ರದ್ಧುಪಡಿಸಬೇಕು ಎಂದು ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಶ್ರೀ ವಚನಾನಂದ ಸ್ವಾಮೀಜಿ ಆಗ್ರಹಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಘಟನೆಯಿಂದ ಇಡೀ ಸಮಾಜಕ್ಕೆ ಅಪಾರ ನೋವಾಗಿದೆ. ನ್ಯಾಯಯತ ಬೇಡಿಕೆ ಈಡೇರಿಸುವಂತೆ ಒತ್ತಾಯ ಮಾಡಲು ಬಂದವರು. ಅಂತಹವರ ಮೇಲೆ ಲಾಠಿ ಚಾರ್ಜ್ ನಡೆಸಿರುವುದು ಖಂಡನೀಯ. ಬೆಳಗಾವಿಯಲ್ಲಿ ಮಂಗಳವಾರ ನಡೆದ ಹೋರಾಟದ ಸಂದರ್ಭ ದಲ್ಲಿ ಯಾರೋ ಕಿಡಿಗೇಡಿಗಳು ಕಲ್ಲು ತೂರುವ ಮೂಲಕ ಹೋರಾಟದ ದಿಕ್ಕು ತಪ್ಪಿಸುವ ಮತ್ತು ಸಮಾಜಕ್ಕೆ ಕಪ್ಪು ಚುಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದರು.
ರಾಜ್ಯ ಸರ್ಕಾರ ಪ್ರಮಾಣ ಹೆಚ್ಚಿಸುವ ಮೂಲಕ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಘೋಷಣೆ ಮಾಡ ಬೇಕು. ಈಗಾಗಲೇ ಕೇಂದ್ರದ ಹಿಂದುಳಿದ ವರ್ಗಗಳ ಆಯೋಗ ರಾಜ್ಯ ಸರ್ಕಾರಕ್ಕೆ ಬರೆದಿರುವ ಪತ್ರದ ಆಧಾರ ದಲ್ಲಿ ಪಂಚಮಸಾಲಿ ಸಮಾಜವನ್ನ ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಲು ಶಿಫಾರಸು ಮಾಡಬೇಕು ಎಂದು ಆಗ್ರ ಹಿಸಿದರು.
ಸಮಾಜಕ್ಕೆ ಸಂಬಂಧಿಸಿದ ಯಾವುದೇ ಹೋರಾಟ ರಾಜಕೀಯೇತರವಾಗಿ ಇರಬೇಕು. ಹರಿಹರ ಪೀಠಕ್ಕೆ ನಾವು ಬಂದಿರುವುದೇ ಮೀಸಲಾತಿ ಕೊಡಿಸಲು. ಹಾಗಾಗಿ ನಾವು ಮೀಸಲಾತಿ ವಿಚಾರವಾಗಿ ಸಮಾಜಕ್ಕೆ ಸದಾ ಬದ್ದ. ಮೀಸಲಾತಿ ಪಡೆಯುವ ನಿಟ್ಟಿನಲ್ಲಿ ನಿರಂತರವಾಗಿ ಕಾನೂನಾತ್ಮಕ ಹೋರಾಟ ನಡೆಸುತ್ತಿದ್ದೇವೆ ಎಂದು ತಿಳಿಸಿದರು.
ಬೆಳಗಾವಿ ಘಟನೆಯಲ್ಲಿ ಗಾಯಗೊಂಡವರಿಗೆ ಸರ್ಕಾರವೇ ಚಿಕಿತ್ಸೆ ವ್ಯವಸ್ಥೆ ಮಾಡಬೇಕು. ಪೊಲೀಸರು ನಮ್ಮವರೇ ಅವರಿಗೂ ಸರ್ಕಾರವೇ ಎಲ್ಲ ವ್ಯವಸ್ಥೆ ಮಾಡಬೇಕು. ಘಟನೆಯಲ್ಲಿ ಗಾಯಗೊಂಡಂತಹ ಕೆಲವರೊಂದಿಗೆ ನಾವು ಮಾತನಾಡಿದ್ದೇವೆ. ಸಂಬಂಽತರೊಂದಿಗೂ ಮಾತನಾಡಿದ್ದೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಇದನ್ನೂ ಓದಿ: Madikeri: ವಧುವಿನ ಕೊಠಡಿಯಿಂದ ಚಿನ್ನಾಭರಣ ಕಳವು ಮಾಡಿದ ಆರೋಪಿಗಳ ಹೆಡೆಮುರಿ ಕಟ್ಟಿದ ಪೊಲೀಸರು