Advertisement

ಶ್ರೀ ವಡಭಾಂಡ ಬಲರಾಮ ದೇವಸ್ಥಾನ; ಜನರು ದೇಗುಲಗಳಿಗೆ ನಿತ್ಯ ಬರುವಂತಾಗಬೇಕು: ಕಾಣಿಯೂರು ಶ್ರೀ

12:45 AM Mar 24, 2024 | Team Udayavani |

ಮಲ್ಪೆ: ನಮ್ಮ ಯಾವುದೇ ಪ್ರಯತ್ನ ಫಲಿಸದಿದ್ದಾಗ, ಬದುಕಿನಲ್ಲಿ ಸಮಸ್ಯೆಗಳು ಎದುರಾದಾಗ ಮಾತ್ರ ನಮಗೆ ದೇವರ ನೆನಪಾಗುತ್ತದೆ. ಹಾಗಾಗ ಕೂಡದು, ಜನರು ದೇವಸ್ಥಾನಗಳಿಗೆ ನಿತ್ಯ ಬರುವಂತಾಗಬೇಕು. ದೇವಸ್ಥಾನಗಳು ಶಾಂತಿ ನೆಮ್ಮದಿಯ ಪ್ರತೀಕವಾಗಿ ಇರುವಂತದ್ದು ಎಂದು ಉಡುಪಿ ಕಾಣಿಯೂರು ಮಠದ ವಿದ್ಯಾವಲ್ಲಭ ತೀರ್ಥ ಶ್ರೀಪಾದರು ನುಡಿದರು.

Advertisement

ಅವರು ಶನಿವಾರ ವಡಭಾಂಡೇಶ್ವರ ಶ್ರೀ ವಡಭಾಂಡ ಬಲರಾಮ ದೇವಸ್ಥಾನದ ಪುನಃ ಪ್ರತಿಷ್ಠೆ, ಅಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ನಾವು ದೇವರ ನಂಬಿಕೆಯಲ್ಲಿ ಸಾಗಿದಾಗ ಕರ್ಮದ ಫಲ ಜಾಸ್ತಿ ಸಿಗುತ್ತದೆ ಎಂದು ಭೀಮನಕಟ್ಟೆ ಮಠದ ಶ್ರೀ ರಘುವರೇಂದ್ರ ತೀರ್ಥ ಶ್ರೀಪಾದರು ನುಡಿದರು.

ಪಂಜ ಭಾಸ್ಕರ್‌ ಭಟ್‌ ಅವರಿಂದ ಧಾರ್ಮಿಕ ಪ್ರವಚನ ನಡೆಯಿತು. ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಸಾಧು ಸಾಲ್ಯಾನ್‌, ಜ್ಯೋತಿಷಿ ಹಯವದನ ಭಟ್‌, ಧರ್ಮಸ್ಥಳ ಎಸ್‌ಕೆಡಿಆರ್‌ಡಿಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ಮಲ್ಪೆ ಪಸೀìನ್‌ ಮೀನುಗಾರರ ಸಂಘದ ಅಧ್ಯಕ್ಷ ನಾಗರಾಜ್‌ ಸುವರ್ಣ, ಉಡುಪಿ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಪ್ರಶಾಂತ್‌ ಕುಮಾರ್‌ ಶೆಟ್ಟಿ, ಮಣಿಪಾಲ ಎಂಐಟಿಯ ಪ್ರಾಧ್ಯಾಪಕ ಉದಯ ಕುಮಾರ್‌ ಶೆಟ್ಟಿ, ಕೊಡವೂರು ಗ್ರಾಮ ಆಡಳಿತಾಧಿಕಾರಿ ಕಾರ್ತಿಕೇಯ ಭಟ್‌, ನಗರಸಭಾ ಸದಸ್ಯ ಶ್ರೀಶ ಭಟ್‌ ಕೊಡವೂರು, ಬಿ.ಪಿ. ರಮೇಶ್‌ ಪೂಜಾರಿ ಬಡಾನಿಡಿಯೂರು, ಕೊಲ್ಲೂರು ವ್ಯವಸ್ಥಾಪನ ಸಮಿತಿಯ ಮಾಜಿ ಸದಸ್ಯೆ ಸಂಧ್ಯಾ ರಮೇಶ್‌, ದೇಗುಲದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ನಾಗರಾಜ ಮೂಲಿಗಾರ್‌, ಗೌರವಾಧ್ಯಕ್ಷ ಶ್ರೀಶ ಭಟ್‌ ಕಡೆಕಾರು ಮೊದಲಾದವರು ಉಪಸ್ಥಿತರಿದ್ದರು.

ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಕಾಶ್‌ ಜಿ. ಕೊಡವೂರು ಸ್ವಾಗತಿಸಿದರು, ಪೂರ್ಣಿಮಾ ಜನಾರ್ದನ್‌ ನಿರೂಪಿಸಿ ವಂದಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next