Advertisement
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮೇಲುಕೋಟೆಯ ವೈರಮುಡಿ ಬ್ರಹ್ಮೋತ್ಸವ ಆಚರಣೆಯ ಪೂರ್ವಭಾವಿ ಸಬೆಯಲ್ಲಿ ಮಾತನಾಡಿದ ಅವರು, ಮಾ.19ರಿಂದ 31ರವರೆಗೆ ವಿಶ್ವ ವಿಖ್ಯಾತಿ ಮೇಲುಕೋಟೆ ವೈರಮುಡಿ ಉತ್ಸವ ನಡೆಯಲಿದ್ದು, 24ರಂದು ಶ್ರೀ ಚಲುವನಾರಾಯಣಸ್ವಾಮಿಯ ವೈರಮುಡಿ ಕಿರೀಟಧಾರಣೆ ಮಹೋತ್ಸವ ನಡೆಯಲಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗವಹಿಸುವುದರಿಂದ ಮಾ.12ರ ಸರ್ಕಾರದ ಆದೇಶದಂತೆ ಕೋವಿಡ್-19 ವೈರಸ್ ಹರಡುವಿಕೆ ನಿಯಂತ್ರಿಸುವ ನಿಟ್ಟಿನಲ್ಲಿ ನಿಯಮಗಳನ್ನು ಸೂಚಿಸಲಾಗಿದೆ ಎಂದರು.
ಭಕ್ತಾಧಿಗಳ ದರ್ಶನಕ್ಕೆ ದೇವಸ್ಥಾನದ ಎರಡು ಪ್ರವೇಶ ದ್ವಾರದಲ್ಲಿ ಅವಕಾಶ ಮಾಡಿಕೊಡಲಾಗಿದೆ. ಪ್ರವೇಶದ್ವಾರದಲ್ಲಿಯೇ ಕೋವಿಡ್-19 ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಲಾಗುವುದು. ಅಲ್ಲದೆ, ನೆಗೆಟಿವ್ ವರದಿ ಬಂದವರಿಗೆ ಸೀಲ್ ಹಾಕಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು ಎಂದರು. 2 ಸಾವಿರ ಭಕ್ತರಿಗೆ ಅವಕಾಶ:
ಉತ್ಸವದಲ್ಲಿ ಕೇವಲ 2 ಸಾವಿರ ಹೆಚ್ಚಿನ ಭಕ್ತಾಧಿಗಳು ಸೇರದಂತೆ ವ್ಯವಸ್ಥೆ ಮಾಡಲಾಗಿದ್ದು, ದೇವಸ್ಥಾನದ ಪ್ರಾಂಗಣದೊಳಗೆ ಒಂದು ಬಾರಿಗೆ ನೂರಕ್ಕಿಂತ ಹೆಚ್ಚು ಜನರಿಗೆ ಪ್ರವೇಶವಿಲ್ಲ. ದೇವಸ್ಥಾನದಲ್ಲಿ ನಿಯೋಜಿಸಿರುವ ಅರ್ಚಕರು ಹಾಗೂ ಸರ್ಕಾರಿ ಸಿಬ್ಬಂದಿಗಳನ್ನು ಹೊರತುಪಡಿಸಿ, ಹೆಚ್ಚುವರಿ ಅರ್ಚಕರು ಮತ್ತು ಸಿಬ್ಬಂದಿಗಳಿಗೆ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ದೇವಾಲಯದ ಆವರಣದಲ್ಲಿ ಗುಂಪುಗೂಡುವುದನ್ನು ಹಾಗೂ ರಾತ್ರಿ ವೇಳೆಯಲ್ಲಿ ತಂಗುವಿಕೆಯನ್ನು ನಿಷೇಧಿಸಲಾಗಿದೆ ಎಂದರು.
Related Articles
Advertisement
ಪ್ರಸಾದ ವಿತರಣೆ ಇಲ್ಲ:ಒಳ ಮತ್ತು ಹೊರ ಆವರಣದಲ್ಲಿ ಯಾವುದೇ ರೀತಿಯ ಸಾಮೂಹಿಕ ಭೋಜನ ವ್ಯವಸ್ಥೆ, ಪ್ರಸಾದ ವಿತರಣೆ ಇರುವುದಿಲ್ಲ. ಸುತ್ತಮುತ್ತಲಿನ ಹೊಟೇಟ್‌ಳನ್ನು ತೆರೆಯದಂತೆ ಆದೇಶಿಸಲಾಗಿದೆ ಎಂದರು. 24ರoದು ಬ್ರಹ್ಮೋತ್ಸವ ಮಧ್ಯಾಹ್ನ 3 ಗಂಟೆಯಿoದ ಸಂಜೆ 4 ಗಂಟೆಯವರೆಗೆ ನಡೆಯಲಿದ್ದು, ರಾತ್ರಿ 12 ಗಂಟೆಯೊಳಗೆ ಮುಗಿಯುವಂತೆ ಕ್ರಮ ವಹಿಸಲಾಗಿದೆ. ಸರಳ ಆಚರಣೆಗೆ ಸಾರ್ವಜನಿಕರು ಸಹಕರಿಸಿ, ಸ್ಥಳದಲ್ಲಿ ಮಾಸ್ಕ್ ಧರಿಸಿ, ನಿಯೋಜಿಸಿರುವ ಸ್ಯಾನಿಟೈಸರ್ ಬಳಸಿ ಹಾಗೂ 3.25 ಚ.ಮೀ ದೈಹಿಕ ಅಂತರ ಕಾಪಾಡಿಕೊಂಡು ದರ್ಶನ ಪಡೆಯಬೇಕು ಎಂದರು.
ಪಾoಡವಪುರದ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ಪೊಲೀಸ್ ವರಿಷ್ಠಾಧಿಕಾರಿ ಡಾ.ಎಂ.ಅಶ್ವಿನಿ, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಪಿ.ಮಂಚೇಗೌಡ, ವಾರ್ತಾಧಿಕಾರಿ ಟಿ.ಕೆ.ಹರೀಶ್, ಪಾಂಡವಪುರ ತಹಶಿಲ್ದಾರ್ ಪ್ರಮೋದ್ ಎಲ್.ಪಾಟೀಲ್ ಸೇರಿದಂತೆ ಮತ್ತಿತರರಿದ್ದರು.