Advertisement

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

02:57 PM Nov 27, 2024 | Team Udayavani |

ಕತ್ರಾ/ಜಮ್ಮು: ಜಮ್ಮು ಮತ್ತು ಕಾಶ್ಮೀರದ ವೈಷ್ಣೋದೇವಿ ದೇಗುಲಕ್ಕೆ ಚಾರಣ ಮಾರ್ಗದಲ್ಲಿ ರೋಪ್‌ವೇ ಯೋಜನೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ರಿಯಾಸಿ ಜಿಲ್ಲೆಯ ಇಬ್ಬರು ಕಾರ್ಮಿಕರು ಮತ್ತು ಅಂಗಡಿ ಮಾಲಿಕರ ಪ್ರತಿನಿಧಿಗಳನ್ನು ಬುಧವಾರ(ನ27) ಕತ್ರಾ ಬೇಸ್ ಕ್ಯಾಂಪ್‌ನಲ್ಲಿ ವಶಕ್ಕೆ ಪಡೆಯಲಾಗಿದೆ.

Advertisement

ಕತ್ರಾದಲ್ಲಿ ಹಿಂಸಾತ್ಮಕ ಪ್ರತಿಭಟನೆಯ ಒಂದು ದಿನದ ನಂತರ ಮಂಗಳವಾರ ಎಂಟು ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ, ಇದರಲ್ಲಿ ಓರ್ವ ಪೊಲೀಸ್ ಗಾಯಗೊಂಡಿದ್ದಾರೆ. ಪೊಲೀಸರು ಪ್ರತಿಭಟನಾ ನಿರತರನ್ನು ಮುಂದೆ ಸಾಗದಂತೆ ತಡೆದ ಬಳಿಕ ಘರ್ಷಣೆ ಉಂಟಾಯಿತು.

ದೇಗುಲ ಮಂಡಳಿ ಅಧಿಕಾರಿಗಳು ಸೇರಿದಂತೆ ವಿವಿಧ ಭಾಗೀದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಜಿಲ್ಲಾಡಳಿತ ಪ್ರತಿಭಟನಾಕಾರರಿಗೆ ಭರವಸೆ ನೀಡಿದ ನಂತರ ಧರಣಿ ಹಿಂಪಡೆಯಲಾಗಿದೆ. ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು, ಪ್ರಸ್ತಾವಿತ ರೋಪ್‌ವೇ ಯೋಜನೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಜನರ ಪರ ಕಾಳಜಿ ವಹಿಸಿ ಸಮಸ್ಯೆ ಪರಿಹರಿಸಲಾಗುವುದು ಎಂದು ಸೋಮವಾರ ಹೇಳಿಕೆ ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next