Advertisement

ಭಾರೀ ಮಳೆ, ಪ್ರವಾಹ ಹಿನ್ನೆಲೆ : ವೈಷ್ಣೋ ದೇವಿ ಯಾತ್ರೆ ತಾತ್ಕಾಲಿಕ ಸ್ಥಗಿತ

08:26 AM Aug 20, 2022 | Team Udayavani |

ಜಮ್ಮು: ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ತ್ರಿಕೂಟ ಬೆಟ್ಟಗಳ ತಪ್ಪಲಲ್ಲಿರುವ ಪ್ರಸಿದ್ಧ ಮಾತಾ ವೈಷ್ಣೋದೇವಿ ದೇಗುಲ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಯಾವುದೇ ಸಾವು-ನೋವು ಅಥವಾ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಮಾತಾ ವೈಷ್ಣೋ ದೇವಿ ದೇಗುಲ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನ್ಶುಲ್ ಗಾರ್ಗ್ ತಿಳಿಸಿದ್ದಾರೆ.

ಪೂಜ್ಯ ದೇಗುಲಕ್ಕೆ ಭೇಟಿ ನೀಡುವ ಯಾತ್ರಾರ್ಥಿಗಳ ಮೂಲ ಶಿಬಿರವಾದ ಕತ್ರಾದಲ್ಲಿ ಶುಕ್ರವಾರ ಸಂಜೆಯಿಂದಲೇ ಭಾರೀ ಮಳೆ ಸುರಿದಿದ್ದು, ಶನಿವಾರ ಬೆಳಿಗ್ಗೆ 5 ಗಂಟೆಯವರೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಯಾತ್ರೆಯನ್ನು ಸ್ಥಗಿತಗೊಳಿಸುವಂತೆ ಸೂಚಿಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ : ಭೀಕರ ರಸ್ತೆ ಅಪಘಾತ ; ತೀರ್ಥಯಾತ್ರೆಗೆ ತೆರಳಿದ್ದ 7 ಮಂದಿ ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

Advertisement

Udayavani is now on Telegram. Click here to join our channel and stay updated with the latest news.

Next