ಬೆಂಗಳೂರು:ಮಾಜಿ ಪ್ರಧಾನಿ ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮ ಶ್ರೀರಂಗಪಟ್ಟಣ ಸಮೀಪದ ಕಾವೇರಿ ನದಿಯ ತ್ರಿವೇಣಿ ಸಂಗಮದಲ್ಲಿ ವಿಸರ್ಜನೆ ಮಾಡಲಾಯಿತು.
ಇದಕ್ಕೂ ಮುನ್ನ ನಗರದ ಬಿಜೆಪಿ ಕಚೇರಿಯಿಂದ ತೆರೆದ ಜೀಪಿನಲ್ಲಿ ಚಿತಾಭಸ್ಮ ಕಳಶ ನವರಂಗ್ ವೃತ್ತ, ವಿಜಯನಗರ, ಗಾಳಿ ಆಂಜನೇಯ ದೇವಸ್ಥಾನ, ರಾಜರಾಜೇಶ್ವರಿ ನಗರ ವೃತ್ತ, ಕೆಂಗೇರಿ ಮೂಲಕ ಮೆರವಣಿಗೆಯಲ್ಲಿ ಸಾಗಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಅನಂತಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಆರ್.ಅಶೋಕ್, ಸಂಸದೆ ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು.
ಸಹಸ್ರಾರು ಕಾರ್ಯಕರ್ತರು, ಅಭಿಮಾನಿಗಳು ಚಿತಾಭಸ್ಮಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸೂಚಿಸಿದರು. ಅಟಲ್ ಜೀ ಆಮರ್ ರಹೇ ಎಂಬ ಘೋಷಣೆ ಹಾಕಿದರು.
ಕೆಂಗೇರಿಯಿಂದ ಹೊರಟ ಕಳಶವನ್ನು ಬಿಡದಿಯಲ್ಲಿ ನಂತರ ರಾಮನಗರ, ಚೆನ್ನಪಟ್ಟಣ, ಮದ್ದೂರು, ಮಂಡ್ಯ ಮೂಲಕ ಶ್ರೀರಂಗಪಟ್ಟಣಕ್ಕೆ ತಲುಪಿ ಪಶ್ಚಿಮ ವಾಹಿನಿಯಲ್ಲಿ ವಿಸರ್ಜನೆ ಮಾಡಲಾಯಿತು.
ಆ.25 ರಂದು ನೇತ್ರಾವತಿ, ಮಲಪ್ರಭಾ, ಕೃಷ್ಣಾ , ಕಾರಂಜಾ, ತುಂಗಭದ್ರಾ, ಶರಾವತಿ , ತುಂಗಾ ನದಿಯಲ್ಲಿ ಅಸ್ಥಿ ವಿಸರ್ಜನೆ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.