Advertisement

ದೇವೇಗೌಡರಿಗೆ ವಾಲ್ಮೀಕಿ ಪ್ರಶಸ್ತಿ

06:00 AM Oct 24, 2018 | Team Udayavani |

ಬೆಂಗಳೂರು: ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರನ್ನು ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್‌.ನಾಗಮೋಹನ್‌ದಾಸ್‌ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯು ದೇವೇಗೌಡರ ಹೆಸರನ್ನು ಪ್ರಶಸ್ತಿಗಾಗಿ ಶಿಫಾರಸು ಮಾಡಿದೆ. ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿ ಸಂದರ್ಭದಲ್ಲಿ ಪರಿಶಿಷ್ಟ ವರ್ಗಗಳ
ಜನಸಮುದಾಯದ ಅಭಿವೃದ್ಧಿಗಾಗಿ ಗಣನೀಯ ಸೇವೆ ಸಲ್ಲಿಸಿರುವ ವ್ಯಕ್ತಿಯೊಬ್ಬರಿಗೆ ವಾಲ್ಮೀಕಿ ಪ್ರಶಸ್ತಿ ನೀಡಲಾಗುತ್ತಿದೆ.

Advertisement

ಬುಧವಾರ ವಿಧಾನಸೌಧದ ಬಾಂಕ್ವೆಂಟ್‌ ಸಭಾಂಗಣದಲ್ಲಿ ಆಯೋಜಿಸಿರುವ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರು ದೇವೇಗೌಡರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮಂಗಳವಾರ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ, ಪ್ರಶಸ್ತಿ ಸಮಾರಂಭಕ್ಕೆಆಗಮಿಸಿ ಪ್ರಶಸ್ತಿ ಸ್ವೀಕರಿಸುವಂತೆ ಮನವಿ ಮಾಡಿದರು. 

ಲಂಡನ್‌ನಲ್ಲಿ ಬಸವೇಶ್ವರ ಪುತ್ಥಳಿಗೆ ನಮನ: ಗ್ಲೋಬಲ್‌ ಅಚೀವರ್ ಸಮ್ಮಿಟ್‌ನಲ್ಲಿ ಪಾಲ್ಗೊಳ್ಳಲು ಲಂಡನ್‌ಗೆ ತೆರಳಲಿರುವ ಮಾಜಿ ಪ್ರಧಾನಿ ದೇವೇಗೌಡರು, ಲ್ಯಾಂಬೆತ್‌ ನಗರದಲ್ಲಿರುವ ಬಸವೇಶ್ವರ ಪುತ್ಥಳಿಗೆ ನಮನ ಸಲ್ಲಿಸಲಿದ್ದಾರೆ. ಅ.24 ರಂದು ಲಂಡನ್‌ಗೆ ತೆರಳಲಿರುವ ಗೌಡರು, 25 ರಂದು ನಡೆಯಲಿರುವ ಗ್ಲೋಬಲ್‌ ಅಚೀವರ್ ಸಮ್ಮಿಟ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ಅ.26ರಂದು
ಲ್ಯಾಂಬೆತ್‌ ನಗರಕ್ಕೆ ಭೇಟಿ ನೀಡಿ ಬಸವೇಶ್ವರ ಪುತ್ಥಳಿಗೆ ಗೌರವ ಸಲ್ಲಿಸಲಿದ್ದಾರೆ. ಬಸವೇಶ್ವರ ಪ್ರತಿಷ್ಠಾನದ ಪದಾಧಿಕಾರಿಗಳು ಹಾಗೂ ಲಂಡನ್‌ನಲ್ಲಿರುವ ಕನ್ನಡಿಗರ ಸಂಘದಿಂದ ದೇವೇಗೌಡ ಅವರನ್ನು ಸ್ವಾಗತಿಸಲಾಗುವುದು ಎಂದು ಮಾಜಿ ಮೇಯರ್‌ ಡಾ.ನೀರಜ್‌ ಪಾಟೀಲ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next