Advertisement

ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡದಿದ್ದರೆ ವಿಧಾನಸೌಧ ಚಲೋ: ಪ್ರಸನ್ನಾನಂದ ಸ್ವಾಮಿಜೀ

09:09 PM Oct 11, 2020 | sudhir |

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ವಾಲ್ಮೀಕಿ ಸಮಾಜಕ್ಕೆ ಶೇ.7.5 ಮೀಸಲಾತಿ ಸೌಲಭ್ಯವನ್ನು ಜಾರಿಗೊಳಿಸದಿದ್ದ ಪಕ್ಷದಲ್ಲಿ ಅಕ್ಟೋಬರ್31 ರಂದು ನಡೆಯುವ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಬಹಿಷ್ಕರಿಸಿ ವಿಧಾನಸೌಧ ಚಲೋ ಹೋರಾಟ ನಡೆಸಲಾಗುವುದೆಂದು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮಿಜೀ ಎಚ್ಚರಿಕೆ ನೀಡಿದರು.

Advertisement

ಚಿಕ್ಕಬಳ್ಳಾಪುರ ನಗರದಲ್ಲಿ ವಾಲ್ಮೀಕಿ ಸಮುದಾಯಗಳ ವಿದ್ಯಾರ್ಥಿನಿಲಯದಲ್ಲಿ ನಡೆದ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದ ಸ್ವಾಮಿಜೀ ಶೈಕ್ಷಣಿಕವಾಗಿ,ಸಾಮಾಜಿಕ,ರಾಜಕೀಯ ಹಾಗೂ ಆರ್ಥಿಕವಾಗಿ ಹಿಂದುಳಿದ ವಾಲ್ಮೀಕಿ ಸಮಾಜವನ್ನು ಮತಬ್ಯಾಂಕ್ ಮಾಡಿಕೊಂಡಿದ್ದಾರೆ ಸಮುದಾಯದ ಜನರು ಜಾಗೃತರಾಗಿದ್ದಾರೆ ಈ ಹಿಂದಿನ ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ಸಮಿಶ್ರ ಸರ್ಕಾರ ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ನೀಡುವ ಸಂಬಂಧ ನ್ಯಾ.ನಾಗಮೋಹನ್ ದಾಸ್ ನೇತೃತ್ವದ ಸಮಿತಿ ನೀಡಿರುವ ವರದಿಯನ್ನು ಆಧರಿಸಿ ಮೀಸಲಾತಿಯನ್ನು ಜಾರಿಗೊಳಿಸುವುದರಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಮೀಸಲಾತಿಯನ್ನು ಜಾರಿಗೊಳಿಸಲು ಹೋರಾಟಗಳು ಸಹ ನಡೆಸಲಾಗಿದೆ ಸ್ವತಃ ಸಿಎಂ ಯಡಿಯೂರಪ್ಪ ಅವರು ಸಮುದಾಯದ ಸಭೆಯಲ್ಲಿ ಭಾಗವಹಿಸಿ ಮೀಸಲಾತಿಯನ್ನು ಜಾರಿಗೊಳಿಸಲು ವಾಗ್ದಾನ ಮಾಡಿದ್ದಾರೆ ಆದರೆ ಇದುವರೆಗೂ ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.

ಇದನ್ನೂ ಓದಿ:ಸಂಪುಟದಲ್ಲಿ ಮಹತ್ವದ ಬದಲಾವಣೆ : ಶ್ರೀರಾಮುಲು ಕೈಯಲ್ಲಿದ್ದ ಅರೋಗ್ಯ ಖಾತೆ ಸುಧಾಕರ್ ಹೆಗಲಿಗೆ?

ವಾಲ್ಮೀಕಿ ಸಮಾಜದವರಿಗೆ ಮೀಸಲಾತಿಯನ್ನು ನೀಡುವ ವಿಚಾರದಲ್ಲಿ ಸರ್ಕಾರಗಳ ಧೋರಣೆಗಳ ಕುರಿತು ಸಮುದಾಯವನ್ನು ಜಾಗೃತಿಗೊಳಿಸಲು ಅ.9 ರಿಂದ ರಾಜ್ಯಾದ್ಯಂತ ಪ್ರವಾಸವನ್ನು ಕೈಗೊಂಡಿದ್ದೇವೆ ಇಂದು ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಭೆಯನ್ನು ನಡೆಸಿದ್ದೇವೆ ಮುಂದಿನ 10 ದಿನದೊಳಗೆ ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರಕ್ಕೆ ಅವಕಾಶ ಕಲ್ಪಿಸುತ್ತೇವೆ ಒಂದು ವೇಳೆ ವಾಲ್ಮೀಕಿ ಜಯಂತಿಯೊಳಗೆ ಮೀಸಲಾತಿಯನ್ನು ಜಾರಿಗೊಳಿಸದಿದ್ದ ಪಕ್ಷದಲ್ಲಿ ವಾಲ್ಮೀಕಿ ಜಯಂತಿಯನ್ನು ಬಹಿಷ್ಕರಿಸಿ ವಿಧಾನಸೌಧ ಚಲೋ ಕಾರ್ಯಕ್ರಮ ನಡೆಸಲಾಗುವುದೆಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ:ವಿಟ್ಲ: ಒಂಟಿ ಮಹಿಳೆಯ ಮೇಲೆ ಹಲ್ಲೆ ಪ್ರಕರಣ: ಉತ್ತರ ಪ್ರದೇಶ ಮೂಲದ ಆರೋಪಿ ಬಂಧನ

Advertisement

ಸಭೆಯಲ್ಲಿ ಜಿಲ್ಲಾ ವಾಲ್ಮೀಕಿ ಸಮಾಜದ ಮುಖಂಡ ಬಂಕ್ ಮುನಿಯಪ್ಪ, ಜಿಲ್ಲಾ ಗೌರವಾಧ್ಯಕ್ಷ ಸುಬ್ಬರಾಯಪ್ಪ, ಪ್ರಧಾನ ಕಾರ್ಯದರ್ಶಿ ಟಿ.ಮುನಿವೆಂಕಟಸ್ವಾಮಿ,ಕೆಟಿ ನಾರಾಯಣಸ್ವಾಮಿ, ಗವಿರಾಯಪ್ಪ, ತಾಲೂಕು ಅಧ್ಯಕ್ಷ ಗಂಗರೇ ಕಾಲುವೆ ಮೂರ್ತಿ, ಶಿಡ್ಲಘಟ್ಟ ತಾಲೂಕು ವಾಲ್ಮೀಕಿ ಯುವಸೇನೆಯ ಅಧ್ಯಕ್ಷ ಮುತ್ತೂರು ವೆಂಕಟೇಶ್,ಚಿಂತಾಮಣಿ ನಗರಸಭೆಯ ಸದಸ್ಯ ಅಗ್ರಹಾರ ಮುರಳಿ ಸೇರಿದಂತೆ ಜಿಲ್ಲಾದ್ಯಂತ ಸಮಾಜದ ಮುಖಂಡರು ಭಾಗವಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next