Advertisement
ಈ ಮೂಲಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆ ಈಗ ಮತ್ತೊಂದು ಮಜಲು ತಲುಪಿದೆ. ಇಡಿ ಅಧಿಕಾರಿಗಳು ದಾಳಿಯ ವೇಳೆ ನಡೆಸಿದ ವಿಚಾರಣೆಯಲ್ಲಿ ನಾಗೇಂದ್ರ ಸರಿಯಾಗಿ ಉತ್ತರ ನೀಡದ ಕಾರಣ ಹೆಚ್ಚಿನ ವಿಚಾರಣೆಗಾಗಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
Related Articles
Advertisement
ಗೌಪ್ಯವಾಗಿ ನಿಗಮದ ದುಡ್ಡನ್ನು ಹವಾಲಾ ರೂಪದಲ್ಲಿ ಲಪಟಾಯಿಸುವ ಮಧ್ಯವರ್ತಿಗಳ ಗ್ಯಾಂಗ್‌ನ ಸಹಾಯದಿಂದ ಕೃತ್ಯ ಎಸಗಲಾಗಿರುವ ಸುಳಿವು ಸಿಕ್ಕಿದೆ. ಮಧ್ಯವರ್ತಿಗಳನ್ನು ಮುಂದಿಟ್ಟುಕೊಂಡು ಮಾಜಿ ಸಚಿವ ನಾಗೇಂದ್ರ ಡೀಲ್ ಕುದುರಿಸಿದ್ದರೇ ಎಂಬ ಬಗ್ಗೆ ಅಧಿಕಾರಿಗಳಿಗೆ ಅನುಮಾನ ಹುಟ್ಟಿಕೊಂಡಿದೆ.
ನಾಗೇಂದ್ರಗೆ ಪ್ರಶ್ನೆಗಳ ಸುರಿಮಳೆ
ಬೆಂಗಳೂರಿನ ಡಾಲರ್ಸ್ ಕಾಲನಿಯಲ್ಲಿರುವ ನಾಗೇಂದ್ರ ಫ್ಲ್ಯಾಟ್‌ನಲ್ಲಿ ಗುರುವಾರ ಮಾಜಿ ಸಚಿವರಿಗೆ ಹಗರಣಕ್ಕೆ ಸಂಬಂಧಿಸಿದಂತೆ ನೂರಾರು ಪ್ರಶ್ನೆಗಳನ್ನು ಕೇಳಿದ್ದಾರೆ. ವಾಲ್ಮೀಕಿ ನಿಗಮದಿಂದ 187 ಕೋಟಿ ರೂ. ವರ್ಗಾವಣೆಯಾಗಿರುವುದು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ನಿಮಗೆ ಅಧಿಕಾರಿಗಳು ಮಾಹಿತಿ ನೀಡಿರಲಿಲ್ಲವೇ? ಆತ್ಮಹತ್ಯೆ ಮಾಡಿಕೊಂಡಿರುವ ಚಂದ್ರಶೇಖರ್ ಡೆತ್ ನೋಟ್‌ನಲ್ಲಿ ನಿಮ್ಮ ಹೆಸರನ್ನು ಬರೆದಿಟ್ಟಿದ್ದರಲ್ಲ ಇದಕ್ಕೆ ಏನು ಹೇಳುತ್ತೀರಿ? ನಿಮ್ಮ ಗಮನಕ್ಕೆ ಬಂದರೆ ಏಕೆ ದೂರು ನೀಡಲಿಲ್ಲ ಎಂದು ಅಧಿಕಾರಿಗಳು ಪ್ರಶ್ನೆಗಳನ್ನು ಇಟ್ಟಿದ್ದರು. ಆದರೆ ನಾಗೇಂದ್ರ ಇದ್ಯಾವುದಕ್ಕೂ ಸಮರ್ಪಕವಾದ ಉತ್ತರ ನೀಡದೇ ಹಾರಿಕೆಯ ಮಾತುಗಳನ್ನು ಹೇಳಿ ಸುಮ್ಮನಾಗಿದ್ದಾರೆಂದು ತಿಳಿದು ಬಂದಿದೆ.