Advertisement
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮದ ಹಣ ವಿವಿಧ ಖಾತೆಗಳಿಗೆ ವರ್ಗಾವಣೆಯಾಗಿದೆ. ಜೊತೆಗೆ ಹೊಸ ಖಾತೆಗಳನ್ನು ತೆರೆಯಲಾಗಿದೆ. ಯಾವುದೇ ಹೊಸ ಖಾತೆ ತೆರೆಯಲು ಹಣಕಾಸು ಇಲಾಖೆಯ ಒಪ್ಪಿಗೆ ಬೇಕು. ಹಣಕಾಸು ಇಲಾಖೆ ಮುಖ್ಯಮಂತ್ರಿಗಳ ಬಳಿಯೇ ಇದೆ. ಹಾಗಾಗಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
Related Articles
Advertisement
ದೇಶದೆಲ್ಲೆಡೆ ನೀಟ್ ಬಗ್ಗೆ ನಡೆಯುತ್ತಿರುವ ಚರ್ಚೆಯ ಹಿಂದೆ ವೈದ್ಯಕೀಯ ಕಾಲೇಜು ನಡೆಸುವವರ ಹುನ್ನಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಹಿಂದೆ ನೀಟ್ ಪರೀಕ್ಷೆ ಪತ್ರಿಕೆ ಲೀಕ್ ಮಾಡಿದ್ದು, ನಂತರ ಕೆಲವಾರು ವಿಚಾರಗಳನ್ನು ಹೆಚ್ಚಾಗಿಯೇ ಬಿಂಬಿಸುವ ವ್ಯವಸ್ಥೆ ನಡೆಯುತ್ತಿದೆ ಎಂದರು.
ನೀಟ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಗಮನ ಹರಿಸಿದ್ದಾರೆ. ಸಂಬಂಧಿಸಿದ ಸಚಿವರಿಗೆ ಪ್ರಧಾನಿ ಸೂಚನೆ ನೀಡಿದ್ದಾರೆ. ನೀಟ್‌ನಲ್ಲಿ ಎಲ್ಲ ಸರಿಯಿದೆ ಎಂದು ಹೇಳಲು ಆಗುವುದಿಲ್ಲ. ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಮಾಡಬೇಕಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.