Advertisement

Valmiki Corporation case: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬೆಲ್ಲದ್

07:07 PM Jun 25, 2024 | Team Udayavani |

ದಾವಣಗೆರೆ: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆನ್ನಲಾದ ನೂರಾರು ಕೋಟಿ ರೂಪಾಯಿ ಅವ್ಯವಹಾರ, ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಒತ್ತಾಯಿಸಿದ್ದಾರೆ.

Advertisement

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಗಮದ ಹಣ ವಿವಿಧ ಖಾತೆಗಳಿಗೆ ವರ್ಗಾವಣೆಯಾಗಿದೆ. ಜೊತೆಗೆ ಹೊಸ ಖಾತೆಗಳನ್ನು ತೆರೆಯಲಾಗಿದೆ. ಯಾವುದೇ ಹೊಸ ಖಾತೆ ತೆರೆಯಲು ಹಣಕಾಸು ಇಲಾಖೆಯ ಒಪ್ಪಿಗೆ ಬೇಕು. ಹಣಕಾಸು ಇಲಾಖೆ ಮುಖ್ಯಮಂತ್ರಿಗಳ ಬಳಿಯೇ ಇದೆ. ಹಾಗಾಗಿ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಹುಬ್ಬಳ್ಳಿ ಧಾರವಾಡ ಸೇರಿದಂತೆ ಬಹುತೇಕ ಕಡೆ ಕೊಲೆ ಪ್ರಕರಣ ನಡೆಯುತ್ತಿವೆ ಎಂದು ದೂರಿದರು.

ಇದನ್ನೂ ಓದಿ:Karnataka; ಡಿಸಿಎಂ ಅಲ್ಲ ಸಿಎಂ ಬದಲಾವಣೆ ಕೂಗು; ಶಿವಕುಮಾರ್ ಗೆ ಪಟ್ಟ ಕಟ್ಟಿ ಚನ್ನಗಿರಿ ಶಾಸಕ

ಈ ಹಿಂದೆ ವಿಧಾನಸಭೆಯಲ್ಲಿ ಇನ್ಫೋಸಿಸ್ ಧಾರವಾಡದಲ್ಲಿ ಜಮೀನು ಪಡೆದು ಕಾಮಗಾರಿ ಆರಂಭಿಸಿಲ್ಲ ಎಂದು ನಾನೇ ಪ್ರಸ್ತಾಪ ಮಾಡಿದ್ದೆ. ಈಗ ಸಿಬ್ಬಂದಿ ನೇಮಕಕ್ಕೆ ಮುಂದಾಗಿದೆದೆ. ಏನು ಮಾಡುತ್ತದೆ ನೋಡೋಣ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Advertisement

ದೇಶದೆಲ್ಲೆಡೆ ನೀಟ್ ಬಗ್ಗೆ ನಡೆಯುತ್ತಿರುವ ಚರ್ಚೆಯ ಹಿಂದೆ ವೈದ್ಯಕೀಯ ಕಾಲೇಜು ನಡೆಸುವವರ ಹುನ್ನಾರದ ಶಂಕೆ ವ್ಯಕ್ತವಾಗುತ್ತಿದೆ. ಈ ಹಿಂದೆ ನೀಟ್ ಪರೀಕ್ಷೆ ಪತ್ರಿಕೆ ಲೀಕ್ ಮಾಡಿದ್ದು, ನಂತರ ಕೆಲವಾರು ವಿಚಾರಗಳನ್ನು ಹೆಚ್ಚಾಗಿಯೇ ಬಿಂಬಿಸುವ ವ್ಯವಸ್ಥೆ ನಡೆಯುತ್ತಿದೆ ಎಂದರು.

ನೀಟ್ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಗಮನ ಹರಿಸಿದ್ದಾರೆ. ಸಂಬಂಧಿಸಿದ ಸಚಿವರಿಗೆ ಪ್ರಧಾನಿ ಸೂಚನೆ ನೀಡಿದ್ದಾರೆ. ನೀಟ್‌ನಲ್ಲಿ ಎಲ್ಲ ಸರಿಯಿದೆ ಎಂದು ಹೇಳಲು ಆಗುವುದಿಲ್ಲ. ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಮಾಡಬೇಕಾಗಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next