Advertisement
ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಜಿ ಸಚಿವ ಬಿ. ಶ್ರೀರಾಮುಲು, ರಾಜು ಗೌಡ ಅವರು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದ ಸಂಬಂಧ ಜಂಟಿ ಸುದ್ದಿಗೋಷ್ಠಿ ನಡೆಸಿದರು.
Related Articles
Advertisement
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಇಡೀ ಕಾಂಗ್ರೆಸ್ ಸರ್ಕಾರವೇ ಭಾಗಿಯಾಗಿದೆ. ನಿಗಮದ 187 ಕೋಟಿ ರೂ.ವರ್ಗಾವಣೆಯಾಗಿದ್ದರೂ ಇದುವರೆಗೂ ಬರೀ 24 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಹಗರಣದ ದಿಕ್ಕು ತಪ್ಪಿಸುವ ಮೂಲಕ ಕಾಂಗ್ರೆಸ್ ಸರ್ಕಾರ ವಾಲ್ಮೀಕಿ ಸಮುದಾಯಕ್ಕೆ ದ್ರೋಹ ಬಗೆಯುತ್ತಿದೆ. ಎಂದು ಮಾಜಿ ಸಚಿವ ರಾಜು ಗೌಡ ಕಿಡಿ ಕಾರಿದರು. 16 ಉದ್ಯಮಿಗಳ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ವರ್ಗಾವಣೆಯಾದ ಮೊತ್ತವು 4.12 ಕೋಟಿಯಿಂದ 5.98 ಕೋಟಿ ರೂ. ಆಗಿದೆ ಎಂದರು. ಹಗರಣ ಬೆಳಕಿಗೆ ಬಂದ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರನ್ನು ಬಂಧಿಸಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದರು.