Advertisement

Valmiki ನಿಗಮ ಹಗರಣಕೋರರಿಂದ ಸರಕಾರ,ಅಧಿಕಾರಿಗಳ ಹನಿ ಟ್ರ್ಯಾಪ್: ಶ್ರೀರಾಮುಲು ಕಿಡಿ

06:36 PM Jul 11, 2024 | Team Udayavani |

ಬೆಂಗಳೂರು: ‘ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಾಗಣಕೋರರು ಹಣವನ್ನು ದುರುಪಯೋಗಪಡಿಸಿಕೊಳ್ಳಲು ಸರಕರ ಮತ್ತು ಬ್ಯಾಂಕ್ ಅಧಿಕಾರಿಗಳನ್ನು ಹನಿ-ಟ್ರ್ಯಾಪ್ ಮಾಡಿ ಹಣ ದುರುಪಯೋಗಪಡಿಸಿಕೊಂಡಿದೆ’ ಎಂದು ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಬಿ. ಶ್ರೀರಾಮುಲು ಗುರುವಾರ ಆರೋಪಿಸಿದ್ದಾರೆ.

Advertisement

ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿಂದು ಮಾಜಿ ಸಚಿವ ಬಿ. ಶ್ರೀರಾಮುಲು, ರಾಜು ಗೌಡ ಅವರು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದ ಸಂಬಂಧ ಜಂಟಿ ಸುದ್ದಿಗೋಷ್ಠಿ ನಡೆಸಿದರು.

ಈ ಸಂದರ್ಭದಲ್ಲಿ ಎಸ್.ಟಿ ಮೋರ್ಚಾ ರಾಜ್ಯಾಧ್ಯಕ್ಷರಾದ ಬಂಗಾರು ಹನುಮಂತು, ಮಾಜಿ ವಿಧಾನ ಪರಿಷತ್ ಸದಸ್ಯ ಸಿದ್ದರಾಜು,ವಿಧಾನ ಪರಿಷತ್‌ ಸದಸ್ಯರಾದ ಹೇಮಲತಾ ನಾಯಕ್‌, ಶಾಂತರಾಮ್‌ ಸಿದ್ದಿ ಉಪಸ್ಥಿತರಿದ್ದರು.

‘ಬುಡಕಟ್ಟು ಜನರ ಕಲ್ಯಾಣಕ್ಕಾಗಿ ಮೀಸಲಾದ ಹಣದಿಂದ ಐಷಾರಾಮಿ ಕಾರುಗಳನ್ನು ಖರೀದಿಸಲಾಗಿದೆ . ಲೋಕಸಭೆ ಚುನಾವಣೆ ಸೇರಿದಂತೆ ವಿವಿಧ ಚುನಾವಣೆಗಳಲ್ಲಿ ಈ ಹಣವನ್ನು ಲಾಂಡರಿಂಗ್ ಮಾಡಿ ಬಳಸಲಾಗಿದೆ’ ಎಂದು ಶ್ರೀರಾಮುಲು ಆರೋಪಿಸಿದರು.

ವಂಚಕರು ವಾಲ್ಮೀಕಿ ನಿಗಮದ ಹಣದಲ್ಲಿ ಲಂಬೋರ್ಗಿನಿ ಕಾರನ್ನು ಖರೀದಿಸಿ, ಹವಾಲಾ ಮೂಲಕ ಹಣ ಹರಿಸಿ ಚುನಾವಣೆಗೆ ಬಳಸಿಕೊಂಡಿದ್ದಾರೆ ಎಂದು ಶ್ರೀರಾಮುಲು ಹೇಳಿದರು.

Advertisement

ರಾಜು ಗೌಡ ಆಕ್ರೋಶ
ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದಲ್ಲಿ ಇಡೀ ಕಾಂಗ್ರೆಸ್‌ ಸರ್ಕಾರವೇ ಭಾಗಿಯಾಗಿದೆ. ನಿಗಮದ 187 ಕೋಟಿ ರೂ.ವರ್ಗಾವಣೆಯಾಗಿದ್ದರೂ ಇದುವರೆಗೂ ಬರೀ 24 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ. ಹಗರಣದ ದಿಕ್ಕು ತಪ್ಪಿಸುವ ಮೂಲಕ ಕಾಂಗ್ರೆಸ್‌ ಸರ್ಕಾರ ವಾಲ್ಮೀಕಿ ಸಮುದಾಯಕ್ಕೆ ದ್ರೋಹ ಬಗೆಯುತ್ತಿದೆ. ಎಂದು ಮಾಜಿ ಸಚಿವ ರಾಜು ಗೌಡ ಕಿಡಿ ಕಾರಿದರು.

16 ಉದ್ಯಮಿಗಳ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ. ವರ್ಗಾವಣೆಯಾದ ಮೊತ್ತವು 4.12 ಕೋಟಿಯಿಂದ 5.98 ಕೋಟಿ ರೂ. ಆಗಿದೆ ಎಂದರು.

ಹಗರಣ ಬೆಳಕಿಗೆ ಬಂದ ನಂತರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾಂಗ್ರೆಸ್ ಶಾಸಕ ಬಿ.ನಾಗೇಂದ್ರ ಅವರನ್ನು ಬಂಧಿಸಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next