Advertisement

ವಾಲ್ಮೀಕಿ ಜಾತ್ರೆ: ಮುಖ್ಯಮಂತ್ರಿ BSY ಗೆ ಆಹ್ವಾನ

05:52 PM Feb 02, 2021 | Adarsha |

ಹರಿಹರ: ಫೆಬ್ರವರಿ 8 ಮತ್ತು 9 ರಂದು ಹರಿಹರ ದ ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಪೀಠದಲ್ಲಿ ನಡೆಯಲಿರುವ 3ನೇ ವಾಲ್ಮೀಕಿ ಜಾತ್ರೆ ಯಲ್ಲಿ ಭಾಗವಹಿಸುವಂತೆ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷರಾದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಮತ್ತು ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮಿಗಳು ರಾಜ್ಯದ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರನ್ನು ಆಹ್ವಾನಿಸಿದರು.

Advertisement

ಫೆಬ್ರವರಿ. 9ರಂದು ನಡೆಯುವ ಸಮಾವೇಶದಲ್ಲಿ ಭಾಗವಹಿಸಲಿರುವ ಮುಖ್ಯಮಂತ್ರಿಗಳಾದ ಬಿ ಎಸ್ ಯಡಿಯೂರಪ್ಪ ಅವರು, ವಾಲ್ಮೀಕಿ ರಾಮಾಯಣ ಆಧಾರಿತ ಗ್ರಂಥಾಲಯ ಮತ್ತು ಬುಡಕಟ್ಟು ಸಂಶೋಧನಾ ಕೇಂದ್ರದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷರಾದ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತಿಳಿಸಿದ್ದಾರೆ.

ಇದನ್ನೂ ಓದಿ:2021 ನೇ ಸಾಲಿನ ಸಿಬಿಎಸ್ಇ 10 ಮತ್ತು 12 ನೇ ತರಗತಿಯ ಪರೀಕ್ಷಾ ವೇಳಾಪಟ್ಟಿ ಪ್ರಕಟ

Advertisement

Udayavani is now on Telegram. Click here to join our channel and stay updated with the latest news.

Next