Advertisement

ವಾಲ್ಮೀಕಿ ಅಕ್ರಮ: ಎಸ್‌ಐಟಿ ತನಿಖೆ; ರಾಜ್ಯ ಸರಕಾರದಿಂದ ತನಿಖೆಗೆ ವಿಶೇಷ ತಂಡ

01:52 AM Jun 01, 2024 | Team Udayavani |

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದ್ದ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಸಮಗ್ರ ತನಿಖೆಗಾಗಿ ರಾಜ್ಯ ಸರಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ.

Advertisement

ಸಿಐಡಿಯ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಮನೀಶ್‌ ಖರ್ಬೀಕರ್‌ ನೇತೃತ್ವದಲ್ಲಿ ದಕ್ಷಿಣ ಸಂಚಾರ ವಿಭಾಗದ ಡಿಸಿಪಿ ಶಿವಪ್ರಕಾಶ್‌ ದೇವರಾಜ್‌, ರಾಜ್ಯ ಗುಪ್ತಚರ ವಿಭಾಗದ ಎಸ್‌ಪಿ ಹರಿರಾಮ್‌ ಶಂಕರ್‌, ಸಿಐಡಿಯ ಎಸ್‌ಪಿ ರಾಘವೇಂದ್ರ ಕೆ. ಹೆಗಡೆ ತನಿಖೆ ನಡೆಸಲಿದ್ದಾರೆ. ಸಿಐಡಿಯ ಪೊಲೀಸ್‌ ಮಹಾನಿರ್ದೇಶಕ ಡಾ| ಎಂ.ಎ. ಸಲೀಂ ಮಾರ್ಗದರ್ಶನದಲ್ಲಿ ಈ ವಿಶೇಷ ತನಿಖಾ ತಂಡ ಕಾರ್ಯನಿರ್ವಹಿಸಲಿದೆ.

ಮೇ 26ರಂದು ನಿಗಮದ ಅಧೀಕ್ಷಕ ಚಂದ್ರಶೇಖರ್‌ ಅವರು ನಿಗಮದಲ್ಲಿ ಕೋಟ್ಯಾಂತರ ರೂ. ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಶಿವಮೊಗ್ಗದ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಮತ್ತೊಂದೆಡೆ ನಿಗಮದಲ್ಲಿ 94 ಕೋಟಿ ರೂ. ಅವ್ಯಹಾರ ನಡೆದಿದೆ ಎಂದು ಆರೋಪಿಸಿ ನಿಗಮದ ಮುಖ್ಯ ನಿಬಂಧಕ ರಾದ ಎ. ರಾಜಶೇಖರ್‌ ಬ್ಯಾಂಕ್‌ನ ಕೆಲವು ಅಧಿಕಾರಿಗಳ ವಿರುದ್ದ ಹೈಗ್ರೌಂಡ್ಸ್‌ ಠಾಣೆಯಲ್ಲಿ ದೂರು ನೀಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next