Advertisement

ವಾಲ್ಮೀಕಿ ಜಾತ್ರಾ ಮಹೋತ್ಸವ ಕರಪತ್ರ ಬಿಡುಗಡೆ

05:01 PM Nov 10, 2019 | Suhan S |

ರಾಣಿಬೆನ್ನೂರ: ನಗರದ ಗಂಗಾಜಲ ಶ್ರೀ ಚೌಡೇಶ್ವರಿ ದೇವಸ್ಥಾನದ ಸಭಾಭವನದಲ್ಲಿ ಶನಿವಾರ ತಾಲೂಕು ಮಟ್ಟದ ಪೂರ್ವಭಾವಿ ಸಭೆಯಲ್ಲಿ ರಾಜನಹಳ್ಳಿ ಶ್ರೀ ವಾಲ್ಮೀಕಿ ಗುರುಪೀಠದ ಜಗದ್ಗುರು ಪ್ರಸನ್ನಾನಂದಪುರಿ ಸ್ವಾಮೀಜಿ ಅವರು 2020ನೇ ಫೆ. 8 ರಂದು ಶ್ರೀಮಠದ ಆವರಣದಲ್ಲಿ ನಡೆಯಲಿರುವ ವಾಲ್ಮೀಕಿ ಜಾತ್ರಾ ಮಹೋತ್ಸವದ ಕರಪತ್ರ ಬಿಡುಗಡೆಗೊಳಿಸಿದರು.

Advertisement

ಶ್ರೀ ಮಠದ 22ನೇ ವಾರ್ಷಿಕೋತ್ಸವ, ಲಿಂ| ಜಗದ್ಗುರು ಶ್ರೀ ಪುಣ್ಯಾನಂದಪುರಿ ಸ್ವಾಮೀಜಿಯವರ 13ನೇ ವರ್ಷದಪುಣ್ಯಾರಾಧನೆ ಹಾಗೂ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿಯವರ 12ನೇ ವರ್ಷದ ಪಟ್ಟಾಧಿಕಾರ ಮಹೋತ್ಸವದ ಹಿನ್ನೆಲೆಯಲ್ಲಿ ವಾಲ್ಮೀಕಿ ಜಾತ್ರೆಯ ಅಂಗವಾಗಿ ಕರಪತ್ರ ಬಿಡುಗಡೆಗೊಳಿಸಿದರು.

ಈ ವೇಳೆ ಜಗದ್ಗುರು ವಾಲ್ಮೀಕಿ ಪ್ರಸನ್ನಾನಂದಪುರಿ ಸ್ವಾಮೀಜಿ ಮಾತನಾಡಿ, ಮಹಾಕಾವ್ಯ ರಾಮಾಯಣವನ್ನು ರಚಿಸಿ ವಿಶ್ವಕ್ಕೆ ಮಾರ್ಗದರ್ಶನ ನೀಡಿದ ಶ್ರೀ ವಾಲ್ಮೀಕಿ ಮಹರ್ಷಿಯ ವಿಚಾರಧಾರೆಗಳನ್ನು ವಾಲ್ಮೀಕಿ ಸಮಾಜಕ್ಕೆ ಪರಿಚಯಿಸುವ ಸದುದ್ದೇಶದಿಂದ ಜಾತ್ರಾಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ನುಡಿದರು.

ಇತರೆ ಸಮಾಜ ಬಂಧುಗಳಂತೆ ವಾಲ್ಮೀಕಿ ನಾಯಕ ಸಮುದಾಯವನ್ನು ಜಾಗೃತಗೊಳಿಸಿ ಸಮಾಜದ ಮುಖ್ಯವಾಹಿನಿಗೆ ತರುವ ಅಗತ್ಯವಿದೆ. ರಾಜ್ಯದ ಮೂಲೆ ಮೂಲೆಯಲ್ಲಿ ನೆಲೆಸಿರುವ ಸಮಾಜದ ಬಂಧುಗಳನ್ನು ಒಂದೆಡೆ ಸೇರಿಸಿ ಸಂಘಟಿಸುವ ಉದ್ದೇಶವೂ ಇದಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ವಾಲ್ಮೀಕಿ ನಾಯಕ ಸಮಾಜಕ್ಕೆ ಶೈಕ್ಷಣಿಕವಾಗಿ ಶಕ್ತಿ ತುಂಬುವ ಹಿನ್ನೆಲೆಯಲ್ಲಿ ಮೀಸಲಾತಿ ಪ್ರಮಾಣವನ್ನು ಶೇ. 7.5ಕ್ಕೆ ಹೆಚ್ಚಿಸುವಂತೆ ಸರ್ಕಾರಕ್ಕೆ ಎರಡು ತಿಂಗಳ ಗಡವು ನೀಡಿದ್ದು, ಈಗಾಗಲೇ ನ್ಯಾ. ನಾಗಮೋಹನ್‌ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ವಾಲ್ಮೀಕಿ ಜಾತ್ರೆಗಿಂತ ಮುಂಚಿತವಾಗಿ ನಿರೀಕ್ಷಿತ ಪ್ರಮಾಣದ ಮೀಸಲಾತಿ ದೊರೆಯುವ ವಿಶ್ವಾಸವಿದೆ ಎಂದು ಶ್ರೀಗಳು ವಿಶ್ವಾಸವ್ಯಕ್ತಪಡಿಸಿದರು.

Advertisement

ತಾಲೂಕು ಅಖೀಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಅಧ್ಯಕ್ಷ ಚಂದ್ರಪ್ಪ ಬೇಡರ್‌ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಹನುಮಂತಪ್ಪ ಬ್ಯಾಲದಹಳ್ಳಿ, ತಾಪಂ ಸದಸ್ಯ ಭೀಮಪ್ಪ ಗೋಣೆಪ್ಪನವರ, ನಗರಸಭೆ ಸದಸ್ಯ ಶಶಿಧರ ಬಸೇನಾಯ್ಕರ, ಎಪಿಎಂಸಿ ಸದಸ್ಯ ರಾಜೇಂದ್ರ ಬಸೇನಾಯ್ಕರ, ಸಣ್ಣತಮ್ಮಪ್ಪ ಬಾರ್ಕಿ, ಭೀಮಣ್ಣ ಯಡಚಿ, ರಾಮಪ್ಪ ಗೋಣೆಪ್ಪನವರ, ರಾಮಪ್ಪ ಮೆಡ್ಲೆರಿ, ಕರಿಯಪ್ಪ ಮಾಳಿಗೇರ, ಆಂಜನೇಯ ನಾಗೇನಹಳ್ಳಿ, ಮಹೇಶ ನಾಯಕ ಸೇರಿದಂತೆ ಮುಖಂಡರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next