Advertisement

13ಕ್ಕೆ ವಾಲ್ಮೀಕಿ ಜಯಂತಿ ಅದ್ಧೂರಿ ಆಚರಣೆ

04:34 PM Sep 27, 2019 | Team Udayavani |

ಮಾಲೂರು: ಪ್ರಸಕ್ತ ವರ್ಷದಲ್ಲಿ ವಾಲ್ಮೀಕಿ ಜಯಂತಿಯನ್ನು ಅರ್ಥಪೂರ್ಣವಾಗಿ ಅಚರಿಸಲು ಪೂರ್ವಭಾವಿ ಸಭೆಯಲ್ಲಿ ತೀರ್ಮಾನಿಸಲಾಯಿತು.

Advertisement

ಪಟ್ಟಣದ ತಾಲೂಕು ಕಚೇರಿಯಲ್ಲಿ ತಹಶೀಲ್ದಾರ್‌ ಹಾಗೂ ನಾಡ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ವಿ.ನಾಗರಾಜು ಸಮ್ಮುಖದಲ್ಲಿ ಶಾಸಕ ಕೆ.ವೈ.ನಂಜೇಗೌಡ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ, ಅ.13ರಂದು ವಾಲ್ಮೀಕಿ ಜಯಂತಿ ಪ್ರಯುಕ್ತ ಮಹರ್ಷಿಗಳ ಭಾವಚಿತ್ರದ ಅದ್ಧೂರಿ ಮೆರವಣಿಗೆ ಹಾಗೂ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲು ನಿರ್ಧರಿಸಲಾಯಿತು.

ಅಂದು ಎಲ್ಲಾ ಸರ್ಕಾರಿ ಕಚೇರಿಗಳಿಗೆ ವಿದ್ಯುತ್‌ ದೀಪಾಲಂಕಾರ ಮಾಡುವುದರ ಜೊತೆಗೆ ಬೆಳಗ್ಗೆ 10 ಗಂಟೆಗೆ ತಾಲೂಕು ಕಚೇರಿ ಆವರಣದಿಂದ ಸಾಂಸ್ಕೃತಿಕ ಕಲಾ ತಂಡಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮಹರ್ಷಿಗಳ ಭಾವಚಿತ್ರದ ಮೆರವಣಿಗೆ ನಡೆಸಲಾಗುವುದು ಎಂದು ಸಭೆಯಲ್ಲಿ ತಿಳಿಸಲಾಯಿತು.

ಸಭೆ ಆರಂಭದಲ್ಲಿ ಉತ್ತರ ಕರ್ನಾಟಕದಲ್ಲಿ ನೆರೆಯಿಂದ ಜನ ಸಂಕಷ್ಟಕ್ಕೆ ಸಿಲುಕ್ಕಿದ್ದಾರೆ. ಹೀಗಾಗಿ ಇತರೆ ಸಮುದಾಯಗಳ ಮಹನೀಯರ ಜಯಂತಿ ಸರಳವಾಗಿ ಆಚರಿಸಲಾಗಿದೆ. ಅದೇರೀತಿ ವಾಲ್ಮೀಕಿ ಜಯಂತಿಯನ್ನೂ ಆಚರಿಸಲು ಸೂಚಿಸುತ್ತಿದ್ದಂತೆ ಸಭೆಯಲ್ಲಿನ ಸಮುದಾಯ ಮುಖಂಡರು, ಅದ್ಧೂರಿಯಾಗಿ ಅಚರಣೆ ಮಾಡುವಂತೆ ಪಟ್ಟು ಹಿಡಿದ ಕಾರಣ, ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಅಚರಿಸುವಂತೆ ಶಾಸಕರು ಸೂಚಿಸಿದರು. ಪಟ್ಟಣದ ರೈಲ್ವೆ ನಿಲ್ದಾಣದ ರಸ್ತೆ ಬದಿಯಲ್ಲಿ ವಾಲ್ಮೀಕಿ ಭವನ ನಿರ್ಮಿಸಲಾಗುತ್ತಿದೆ. ಕೆಲವು ತಾಂತ್ರಿಕ ಕಾರಣಗಳಿಂದ ಗುತ್ತಿಗೆದಾರ ಕಾಮಗಾರಿ ಸ್ಥಗಿತಗೊಳಿಸಿದ್ದಾರೆ. ಪುನಾರಂಭಿಸಲು ಸೂಚನೆ ನೀಡುವಂತೆ ಶಾಸಕರಿಗೆ ಸಮಾಜದ ಮುಖಂಡರು ಮನವಿ ಮಾಡಿದರು.

ಸಭೆಯಲ್ಲಿ ಜಿಪಂ ಸದಸ್ಯ ಎಚ್‌.ವಿ.ಶ್ರೀನಿವಾಸ್‌, ಅಂಜನಿಸೋಮಣ್ಣ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಟಿ.ಮುನಿಯಪ್ಪ, ವಾಲ್ಮೀಕಿ ಮುಖಂಡ ಅಬ್ಬಯ್ಯಪ್ಪ ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next