Advertisement

ವಾಲ್ಮೀಕಿ ಜಯಂತಿಗೆ ಸಿದ್ದತೆ ಮಾಡಿಕೊಳ್ಳಿ

04:59 PM Sep 27, 2022 | Team Udayavani |

ಕಾರವಾರ: ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಅ.9 ರಂದು ಜಿಲ್ಲಾ ಮಟ್ಟದ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸುವ ಕುರಿತಾಗಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಯಿತು.

Advertisement

ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಿಸಲು ಸೂಕ್ತ ಸಿದ್ಧತೆ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೇರಿ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಮೆರವಣಿಗೆಯಲ್ಲಿ ಭಾಗವಹಿಸಬೇಕು. ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ನಂತರ, ನಗರದ ಪ್ರಮುಖ ರಸ್ತೆಗಳ ಮುಖಾಂತರ ಸೆಂಟ್‌ ಮೈಕೆಲ್‌ ಹೈಸ್ಕೂಲ್‌ ರಸ್ತೆಯಿಂದ ನೇರವಾಗಿ ಮಹಾತ್ಮಾ ಗಾಂಧೀಜಿ ರಸ್ತೆ ಮುಖಾಂತರ ಮೆರವಣಿಗೆ ಸಾಗಬೇಕು. ಡಿಸಿ ಕಚೇರಿಯಿಂದ ನೇರವಾಗಿ ಬೈಕ್‌ ರ್ಯಾಲಿಯಲ್ಲಿ ಜನರೊಂದಿಗೆ ಮೆರವಣಿಗೆ ಸಾಗಿ ಜಿಲ್ಲಾ ರಂಗಮಂದಿರ ತಲುಪಬೇಕು. ನಂತರ ಸಭಾ ಕಾರ್ಯಕ್ರಮ ನಡೆಸಲು ಸೂಚಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಿಗೆ ಕಲಾ ತಂಡಗಳನ್ನು ಆಹ್ವಾನಿಸಲು ಸೂಚಿಸಿದರು. ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಎಲ್ಲ ಶಾಲಾ, ಕಾಲೇಜುಗಳಿಗೆ ಸುತ್ತೋಲೆ ಮೂಲಕ ಜಯಂತಿ ಆಚರಣೆ ಕುರಿತು ತಿಳಿಸಿ ಭಾಗವಹಿಸುವಂತೆ ಕೋರಲು ತಿಳಿಸಿದರು.

ಕಾರವಾರ ಮತ್ತು ಶಿರಸಿ ಶೈಕ್ಷಣಿಕ ಜಿಲ್ಲೆಯಿಂದ ತಲಾ ಮೂವರು ಪ್ರತಿಭಾವಂತ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲು ಸೂಚಿಸಿದರು.

Advertisement

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಬೇಕು. ಮಹರ್ಷಿಗಳ ಕುರಿತು ಉಪನ್ಯಾಸ ನೀಡಲು ಉಪನ್ಯಾಸಕರನ್ನು ಆಹ್ವಾನಿಸಬೇಕು. ಸಮುದಾಯದ ಶ್ರೇಯೋಭಿವೃದ್ಧಿಗಾಗಿ ಶ್ರಮಿಸಿದ ಹಾಗೂ ಮಾರ್ಗದರ್ಶನ ನೀಡಿದ ಸಮುದಾಯದ ಹಿರಿಯರನ್ನು ಗೌರವಿಸಬೇಕು. ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಸಮುದಾಯದ ಸಂಘಟನೆ, ಸಂಸ್ಥೆಗಳು ಭಾಗವಹಿಸಲು ತಿಳಿಸಬೇಕು. ಊಟೋಪಚಾರದ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ ಸುವ್ಯವಸ್ಥಿತವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಮಹಾತ್ಮ ಗಾಂಧೀಜಿ ಜಯಂತಿ ಕುರಿತಾಗಿ ರೂಪುರೇಷೆ ಸಿದ್ದಪಡಿಸಲು, ಕಾರ್ಯಕ್ರಮ ಸುವ್ಯವಸ್ಥಿತವಾಗಿ ನಡೆಯುವಂತಾಗಲು ಸೂಕ್ತ ಕ್ರಮ ವಹಿಸಬೇಕು ಎಂದು ನಗರಸಭೆ ಪೌರಾಯುಕ್ತರಿಗೆ ತಿಳಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ನಗರಸಭೆ ಪೌರಾಯುಕ್ತ ಆರ್‌.ಪಿ. ನಾಯ್ಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಭಾರ ಅಧಿಕಾರಿ ನರೇಂದ್ರ ನಾಯ್ಕ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿ ಪ್ರತೀಕ್‌ ಶೆಟ್ಟಿ, ನಗರಸಭೆ ಸದಸ್ಯರು, ವಿವಿಧ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಸೇರಿದಂತೆ ಪರಿಶಿಷ್ಟ ವರ್ಗಗಳ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next