Advertisement

ಬಿಜೆಪಿಯಿಂದ ವಾಲ್ಮೀಕಿ ಜಯಂತಿ-ಮೆರವಣಿಗೆ

12:29 PM Oct 06, 2017 | Team Udayavani |

ಹುಬ್ಬಳ್ಳಿ: ಅಕ್ಷರ ಜ್ಞಾನವಿಲ್ಲದಿದ್ದರೂ ವಾಲ್ಮೀಕಿ ಮಹರ್ಷಿಗಳು ತಮ್ಮ ತಪಸ್ಸಿನ ಫ‌ಲವಾಗಿ ರಾಮಾಯಣ ಎನ್ನುವ ಮಹಾಗ್ರಂಥವನ್ನು ರಚಿಸಿ ರಾಮನ ಕಾಲದ ಪಾತ್ರಗಳಿಗೆ ಜೀವ ತುಂಬುವ ಕಾರ್ಯ ಮಾಡಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ ಹೇಳಿದರು. 

Advertisement

ಮಹಾನಗರ ಬಿಜೆಪಿ ವತಿಯಿಂದ ವಾಲ್ಮೀಕಿ ದಿನಾಚರಣೆ ಪ್ರಯುಕ್ತ ಗುರುವಾರ ಹಮ್ಮಿಕೊಂಡಿದ್ದ ವಾಲ್ಮೀಕಿ ಮಹರ್ಷಿಗಳ ಭಾವಚಿತ್ರ ಮೆರಣಿಗೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ವಾಲ್ಮೀಕಿ ಮಹರ್ಷಿಗಳು ರಚಿಸಿದ ರಾಮಾಯಣ  ನಾಡು, ದೇಶ ಹಾಗೂ ವಿದೇಶಗಳಲ್ಲೂ ಖ್ಯಾತಿ ಪಡೆದಿದೆ.

ಸಮಾಜದ ವ್ಯವಸ್ಥೆ ಹೇಗಿರಬೇಕೆನ್ನುವ ವಿಷಯವನ್ನು ಆಯಾ ಪಾತ್ರಗಳ ಮೂಲಕ ತಿಳಿಸಿಕೊಟ್ಟಿದ್ದಾರೆ ಎಂದರು. ದೇಶಪಾಂಡೆ ನಗರದ ಬಿಜೆಪಿ ಕಚೇರಿಯಿಂದ ಇಂದಿರಾ ಗಾಜಿನ ಮನೆಯವರೆಗೆ ವಾಲ್ಮೀಕಿ ಮಹರ್ಷಿಗಳ ಭಾವಚಿತ್ರ ಮೆರವಣಿಗೆ ನಡೆಯಿತು.  ಗಾಜಿನ ಮನೆಯಲ್ಲಿರುವ ವಾಲ್ಮೀಕಿ ಪುತ್ಥಳಿಗೆ ಬಿಜೆಪಿ ನಾಯಕರು ಮಾಲಾರ್ಪಣೆ ಮಾಡಿ ಗೌರವ ಅರ್ಪಿಸಿದರು. 

ವಿಧಾನ ಪರಿಷತ್‌ ಸದಸ್ಯ ಪ್ರದೀಪ ಶೆಟ್ಟರ, ಮುಖಂಡರಾದ ಮಹೇಶ ಟೆಂಗಿನಕಾಯಿ, ನಾಗೇಶ ಕಲಬುರ್ಗಿ, ಮಲ್ಲಿಕಾರ್ಜುನ ಸಾವಕಾರ, ತಿಪ್ಪಣ್ಣ ಮಜ್ಜಗಿ, ರಂಗಾ ಬದ್ದಿ, ದತ್ತಮೂರ್ತಿ ಕುಲಕರ್ಣಿ, ಪಾಲಿಕೆ ಸದಸ್ಯ ಶಿವು ಮೆಣಸಿನಕಾಯಿ ಸೇರಿದಂತೆ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next