Advertisement
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ 2024ರ ಸೆ. 30ರಂದು ಕಾದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕ ಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿದೆ.
Related Articles
Advertisement
ಅದಕ್ಕಾಗಿಯೇ ಯೂನಿಯನ್ ಬ್ಯಾಂಕ್ ತನಿಖೆಯನ್ನು ಸಿಬಿಐ ವಹಿಸಲು ಕೋರಿದೆ. ಬ್ಯಾಂಕ್ ಸಿಬಿಐ ತನಿಖೆ ಕೇಳಿದ ಮಾತ್ರಕ್ಕೆ ಸೆಕ್ಷನ್ 35ಎ ವ್ಯಾಖ್ಯಾನದ ಆಧಾರದಲ್ಲಿ ಸಿಬಿಐ ತನಿಖೆಗೆ ವಹಿಸಲು ಸಾಧ್ಯವಿಲ್ಲ. ಇನ್ನು ಎಸ್‌ಐಟಿಯ ದೋಷಾರೋಪ ಪಟ್ಟಿ ಯಿಂದ ಬ್ಯಾಂಕ್ ಅಧಿಕಾರಿಗಳನ್ನು ಕೈಬಿಡ ಲಾಗಿದೆ. ಆದರೆ ಕಾನೂನು ಅನುಗುಣವಾದ ಮಾರ್ಗದಲ್ಲಿ ಸಿಬಿಐ ತನಿಖೆಗೆ ಅಭ್ಯಂತರವಿಲ್ಲ. ಆಗ ರಾಜ್ಯದ ತನಿಖಾ ಸಂಸ್ಥೆಯು ಹಗರಣದಿಂದ ಕೈಬಿಟ್ಟಿರುವ ವ್ಯಕ್ತಿಗಳನ್ನೂ ಸಿಬಿಐ ತನಿಖೆ ಗೊಳಪಡಿಸಬಹುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿ ಅರ್ಜಿ ವಜಾಗೊಳಿಸಿದೆ.
ಬ್ಯಾಂಕ್ ವಾದ ಏನಿತ್ತು?ಬ್ಯಾಂಕಿಂಗ್ ನಿಬಂಧನೆಗಳ ಕಾಯ್ದೆ- 1949ರ ಸೆಕ್ಷನ್ 35ಎ ಪ್ರಕಾರ ಬ್ಯಾಂಕ್ ವ್ಯವಹಾರಗಳ ಕುರಿತು ಯಾವುದೇ ಬ್ಯಾಂಕುಗಳಿಗೆ ಕಾಲಕಾಲಕ್ಕೆ ನಿರ್ದೇಶನ ನೀಡುವ ಅಧಿಕಾರವನ್ನು ಭಾರತೀಯ ರಿಸರ್ವ್ ಬ್ಯಾಂಕ್ ಹೊಂದಿದೆ. ಅದರಂತೆ ಸೆಕ್ಷನ್ ಅನ್ವಯ ಬ್ಯಾಂಕ್ ವ್ಯವಹಾರಗಳಲ್ಲಿ ನಡೆದಿರುವ ವಂಚನೆ ಹಾಗೂ ಅಕ್ರಮದ ಬಗ್ಗೆ ಸಿಬಿಐ ಅಂತಹ ಸ್ವತಂತ್ರ ಸಂಸ್ಥೆಯ ತನಿಖೆಗೆ ವಹಿಸಲು ಕೋರಬಹುದಾಗಿದೆ. ಬ್ಯಾಂಕಿಂಗ್ ವ್ಯವಹಾರದಲ್ಲಿ 50 ಕೋಟಿ ರೂ. ಅಧಿಕ ಅಕ್ರಮ ವ್ಯವಹಾರ ನಡೆದ ಪಕ್ಷದಲ್ಲಿ ಅಂತಹ ಪ್ರಕರಣವನ್ನು ಸಿಬಿಐಗೆ ವಹಿಸಬಹದಾಗಿದೆ. ಹಗರಣದಲ್ಲಿ ವಾಲ್ಮೀಕಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಉನ್ನತ ಶ್ರೇಣಿಯ ಅಧಿಕಾರಿಗಳು ಮತ್ತು ನಿಗಮದ ಅಧ್ಯಕ್ಷರು ಶಾಸಕರು ಭಾಗಿಯಾಗಿ¨ªಾರೆ. ಇದರಿಂದ ರಾಜ್ಯ ಸರ್ಕಾರವು ವಾಲ್ಮೀಕಿ ಪ್ರಕರಣದ ತನಿಖೆಗೆ ರಚಿಸಿರುವ ಎಸ್‌ಐಟಿ ನ್ಯಾಯಯುತ ತನಿಖೆ ನಡೆಸುವುದಿಲ್ಲ. ಹಾಗಾಗಿ, ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಯೂನಿಯನ್ ಬ್ಯಾಂಕ್ ವಾದಿಸಿತ್ತು. ನ್ಯಾಯಾಲಯದ
ಆತ್ಮಸಾಕ್ಷಿಗೆ ಆಘಾತ
ಪರಿಶಿಷ್ಟ ಪಂಗಡದ ಸಮುದಾಯ ದವರು ಆರ್ಥಿಕವಾಗಿ ಅಭಿವೃದ್ಧಿ ಹೊಂದುವುದಕ್ಕೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಹಣಕಾಸು ನೆರವು ಕಲ್ಪಿಸಲು, ಸಮುದಾಯದ ಕೃಷಿ ಕಾರ್ಮಿಕರಿಗೆ ಬೆಂಬಲ ನೀಡಲು ವಾಲ್ಮೀಕಿ ನಿಗಮ ಸ್ಥಾಪಿಸಲಾಗಿದೆ. ಆದರೆ ಪರಿಶಿಷ್ಟ ಪಂಗಡದ ಸಮುದಾಯಕ್ಕೆ ಸಂಬಂಧಿಸಿದ ನಿಗಮಕ್ಕೆ ಸೇರಿದ ಹಣದಲ್ಲಿ ಅವ್ಯವಹಾರ ಮಾಡಿರುವುದು ನ್ಯಾಯಾಲಯದ ಆತ್ಮಸಾಕ್ಷಿಗೆ ಆಘಾತ ತರಿಸಿದೆ ಎಂದು ಹೈಕೋರ್ಟ್ ತೀರ್ಪಿನಲ್ಲಿ ಹೇಳಿದೆ.