Advertisement

Valmiki Nigama: ಜಪ್ತಿ ಮಾಡಿರುವ 6.11 ಕೋಟಿ ರೂ. ಬಿಡುಗಡೆಗೆ ಸೂಚನೆ

01:45 AM Jan 01, 2025 | Team Udayavani |

ಬೆಂಗಳೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದ ಸಂಬಂಧ ಜಪ್ತಿ ಮಾಡಿರುವ 6,11,72,400 ರೂ.ಗಳನ್ನು ನಿಗಮಕ್ಕೆ ಬಿಡುಗಡೆ ಮಾಡುವಂತೆ ಭ್ರಷ್ಟಾಚಾರ ನಿಷೇಧ ಕಾಯ್ದೆಯಡಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯವು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಆದೇಶಿಸಿದೆ.

Advertisement

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು ಸಲ್ಲಿಸಿದ್ದ ಪ್ರತ್ಯೇಕ 7 ಅರ್ಜಿಗಳನ್ನು ಪುರಸ್ಕರಿಸಿದ ವಿಶೇಷ ನ್ಯಾಯಾಲಯ ಈ ಆದೇಶ ನೀಡಿದರು. ತುಳಿತಕ್ಕೆ ಒಳಗಾದ ಪರಿಶಿಷ್ಟ ಪಂಗಡಗಳಲ್ಲಿ ಬರುವ ಸಮುದಾಯಗಳ ಅಭಿವೃದ್ಧಿಗೆ ನಿಗಮ ಶ್ರಮಿಸುತ್ತಿದೆ. ಜಪ್ತಿ ಮಾಡಿರುವ ಹಣವನ್ನು ತನಿಖಾ ಸಂಸ್ಥೆ ಇಟ್ಟುಕೊಳ್ಳುವುದರಿಂದ ನಿಗಮದ ಕರ್ತವ್ಯಕ್ಕೆ ಅಡ್ಡಿ ಮಾಡಿದಂತೆ ಆಗುತ್ತದೆ.

ಇದು ಸಾರ್ವಜನಿಕ ಹಿತಾಸಕ್ತಿಗೆ ಅಡ್ಡಿಯಾಗಲಿದ್ದು, ಜಪ್ತಿ ಮಾಡಿರುವ ಹಣವನ್ನು ನಿಗಮಕ್ಕೆ ಬಿಡುಡೆ ಮಾಡುವುದರಿಂದ ಅಭಿವೃದ್ಧಿ ಕಾರ್ಯ ನಡೆಸಲು ಅನುಕೂಲವಾಗಲಿದೆ. ಈ ಸಂಬಂಧ ನ್ಯಾಯಾಲಯ ಆದೇಶ ಮಾಡಬೇಕು ಎಂದು ವಕೀಲರು ಕೋರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next