Advertisement
ನಾಗೇಂದ್ರ ಅವರನ್ನು ವಶಕ್ಕೆ ಪಡೆದ ಅವಧಿಯು ಗುರುವಾರ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಇಡಿ ಅಧಿಕಾರಿಗಳು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಈ ವೇಳೆ ಇಡಿ ಪರ ವಕೀಲ ಪ್ರಸನ್ನಕುಮಾರ್ ಇನ್ನೂ ವಿಚಾರಣೆ ಬಾಕಿ ಇರುವುದರಿಂದ 8 ದಿನಗಳ ಕಾಲ ಇ.ಡಿ. ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ನ್ಯಾಯಾಲಯವು 5 ದಿನ (ಜುಲೈ 22) ಇ.ಡಿ. ವಶಕ್ಕೆ ಒಪ್ಪಿಸಿದೆ. ಈವರೆಗಿನ ತನಿಖಾ ಮಾಹಿತಿಯ ದಾಖಲೆಗಳನ್ನು ಇ.ಡಿ. ಅಧಿಕಾರಿಗಳು ನ್ಯಾಯಾಧೀಶರಿಗೆ ಸಲ್ಲಿಸಿದರು.
ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇ.ಡಿ.)ದ ಅಧಿಕಾರಿಗಳ ಮುಂದೆ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವನಗೌಡ ದದ್ದಲ್ ಗುರುವಾರ ಹಾಜರಾಗಿದ್ದಾರೆ. ಅಧಿಕಾರಿಗಳು ಈ ಹಿಂದೆ ದದ್ದಲ್ ಮನೆಗೆ ದಾಳಿ ನಡೆಸಿದಾಗ ನಿಗಮಕ್ಕೆ ಸಂಬಂಧಿಸಿದ ಹಣವನ್ನು ಚುನಾವಣ ಅಕ್ರಮಕ್ಕೆ ಬಳಸಿರುವುದಕ್ಕೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿದ್ದವು. ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಅಧಿಕಾರಿಗಳು ದದ್ದಲ್‌ಗೆ ನೋಟಿಸ್ ಜಾರಿ ಮಾಡಿದ್ದರು. ಆದರೆ ದದ್ದಲ್ ವಿಧಾನಸಭಾ ಅಧಿವೇಶನಕ್ಕೆ ಹಾಜರಾಗಿ ಇ.ಡಿ. ವಿಚಾರಣೆಗೆ ಹಾಜರಾಗಿರಲಿಲ್ಲ.
Related Articles
Advertisement
ವಾಲ್ಮೀಕಿ ಹಗರಣ: ಛತ್ತೀಸ್‌ಗಢದಲ್ಲೂ 14 ಕೋ.ರೂ. ವಂಚನೆ?ಬಳ್ಳಾರಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದ ಪ್ರಮುಖ ಆರೋಪಿಗಳಾದ ಸತ್ಯನಾರಾಯಣ ವರ್ಮ, ಕಾಕಿ ಶ್ರೀನಿವಾಸ್ ಛತ್ತೀಸ್‌ಗಢದಲ್ಲೂ ಇಂಥದ್ದೇ ಕೃತ್ಯ ಎಸಗಿರುವ ಅಂಶ ಬೆಳಕಿಗೆ ಬಂದಿದೆ. ನಿಗಮದಲ್ಲಿ ನಡೆದಿರುವ 94 ಕೋಟಿ ರೂ.ಗಳ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ನಾಗೇಂದ್ರ ತಲೆದಂಡವಾಗಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ನೆಕ್ಕಂಟಿ ನಾಗರಾಜ್, ಸತ್ಯನಾರಾಯಣ ವರ್ಮ, ಕಾಕಿ ಶ್ರೀನಿವಾಸ್ ಸೇರಿ ಹಲವರು ಕಂಬಿ ಎಣಿಸುತ್ತಿದ್ದಾರೆ. ಬಂಧಿತ ಹೈದರಾಬಾದ್ ಮೂಲದ ಸತ್ಯನಾರಾಯಣ ವರ್ಮ ಮತ್ತು ಕಾಕಿ ಶ್ರೀನಿವಾಸ್ ಈ ಹಿಂದೆ 2022ರಲ್ಲಿ ಛತ್ತೀಸ್‌ಘಡದ ಕೃಷಿ ಮಂಡಳಿಯಲ್ಲೂ 14 ಕೋಟಿ ರೂ. ಹಣ ವಂಚಿಸಿದ್ದ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿ ಸಿ ಸತ್ಯನಾರಾಯಣ ವರ್ಮ, ಕಾಕಿ ಶ್ರೀನಿವಾಸ್ ಸೇರಿದಂತೆ ಒಟ್ಟು 12 ಜನ ಆರೋಪಿಗಳು ಅಲ್ಲಿನ ಪೊಲೀಸರಿಂದ ಬಂಧನಕ್ಕೂ ಒಳಗಾಗಿದ್ದರು.