Advertisement
ನಾನು ತಪ್ಪೇ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಮುಡಾ ಹಗರಣದಂಥ ಆರೋಪಕ್ಕೆ ಸ್ಪಷ್ಟನೆ ನೀಡದೆ ಪ್ರತ್ಯಾರೋಪ ಮಾಡುತ್ತಾರೆ. ವಾಲ್ಮೀಕಿ ನಿಗಮದ ಹಣ ಖಾಸಗಿ ಬ್ಯಾಂಕ್‌ಗೆ ವರ್ಗಾವಣೆ ಆಗುವವರೆಗೆ ಹಣಕಾಸು ಸಚಿವರಾಗಿ ಸಿದ್ದರಾಮಯ್ಯ ಏನು ಮಾಡುತ್ತಿದ್ದರು? ಎಂದು ನಿರ್ಮಲಾ ಪ್ರಶ್ನಿಸಿದರು.
ವಾಲ್ಮೀಕಿ ಹಗರಣ ಕೇಸಲ್ಲಿ ಬ್ಯಾಂಕ್‌ನ ಯಾವುದೇ ಅಧಿಕಾರಿ, ಸಿಬಂದಿ ಭಾಗಿ ಯಾಗಿದ್ದರೂ ಕ್ರಮ ಆಗ ಲಿದೆ. ರಾಜ್ಯ ಸರಕಾರದ ರೀತಿ ವಿಳಂಬ ಮಾಡುವ ಪ್ರಶ್ನೆಯೇ ಇಲ್ಲ. ನಿರ್ದಾ ಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನಿರ್ಮಲಾ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
Related Articles
ಜನರಿಂದ ಶಿಳ್ಳೆ, ಚಪ್ಪಾಳೆ ಹೊಡೆಸಿಕೊಳ್ಳಲು ಹೇಗೆ ಬೇಕೋ ಹಾಗೆ ಮಾತನಾಡುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧಹಸ್ತರು ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ ಎಂಬಂತೆ ಪ್ರತೀ ಬಾರಿ ಬಿಂಬಿಸಲು ಪ್ರಯತ್ನಿಸುವ ಅವರು, ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಯತ್ನಿಸುತ್ತಿದ್ದಾರೆ. ಇದಕ್ಕಾಗಿ ಜನರಿಂದ ಶಿಳ್ಳೆ, ಚಪ್ಪಾಳೆ ಹೊಡೆಸಿಕೊಳ್ಳುವಂತಹ ಭಾಷಣ ಮಾಡುತ್ತಾರೆ. ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಸೇರಿದಂತೆ ತಮ್ಮ ಮೇಲಿರುವ ಆರೋಪಗಳು, ಜವಾಬ್ದಾರಿಗಳಿಂದ ನುಣುಚಿಕೊಂಡು ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.
Advertisement
ನೀತಿ ಆಯೋಗದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಭಾಗವಹಿಸಿದ್ದಾರೆ. ಅವರ ನಿರೀಕ್ಷೆಗಳನ್ನು ವ್ಯಕ್ತಪಡಿಸಿದ್ದಾರೆ. ಆದರೆ ಅವರ ಮೈಕ್ ಕೇಳಿಸದಂತೆ (ಆಫ್) ಮಾಡಿದ್ದಾಗಿ ತಪ್ಪು ಮಾಹಿತಿ ಕೊಟ್ಟಿದ್ದಾರೆ. ವಿಪಕ್ಷ ನಾಯಕರು ಸೇರಿ ಕರ್ನಾಟಕದ ಮುಖ್ಯಮಂತ್ರಿಯವರು ಅಲ್ಲಿ ಭಾಗವಹಿಸಿ ಅಭಿಪ್ರಾಯ ವ್ಯಕ್ತಪಡಿಸಬೇಕಿತ್ತು. ಮಾತನಾಡುವ, ಅಭಿಪ್ರಾಯ ತಿಳಿಸುವ ಅವಕಾಶವನ್ನು ಬಳಸಿಕೊಳ್ಳಬೇಕಿತ್ತು ಎಂದು ನಿರ್ಮಲಾ ಅಭಿಪ್ರಾಯಪಟ್ಟರು.
ಉನ್ನತ ಶಿಕ್ಷಣಕ್ಕೆ 10 ಲ.ರೂ. ಸಾಲಯುವಜನರಿಗೆ ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು ನೀಡಲಾಗಿದೆ. ಮೊದಲ ಬಾರಿ ಉದ್ಯೋಗ ಪಡೆಯುವವರಿಗೆ, ಈಗಾಗಲೇ ಉದ್ಯೋಗದಲ್ಲಿದ್ದು, ಬೇರೆಡೆ ಉದ್ಯೋಗ ಪಡೆಯುವವರು, ಉದ್ಯೋಗದಾತರಿಗೆ ಕೊಡುಗೆ ಗಳನ್ನು ನೀಡಿದ್ದು, ಇವೆಲ್ಲವೂ ಇಪಿಎಫ್ಒ ಮೂಲಕ ಜಾರಿ ಆಗಲಿವೆ. ಕೌಶಲ ವೃದ್ಧಿಗೆ ರಾಜ್ಯ ಗಳ ಸಹಯೋಗದಲ್ಲಿ ಐಟಿಐಗಳನ್ನು ಬಳಸಿಕೊಳ್ಳ ಲಿದ್ದೇವೆ. ದೇಶದ ಶ್ರೇಷ್ಠ 500 ಕಂಪೆನಿಗಳಲ್ಲಿ ಇಂಟರ್ನ್ಶಿಪ್ ಅವಕಾಶ ಕಲ್ಪಿಸಲಾಗುತ್ತದೆ. ಉನ್ನತ ಶಿಕ್ಷಣಕ್ಕೆ 10 ಲಕ್ಷ ರೂ. ಸಾಲ ಕೊಡಲಿದ್ದು, ಇದರಿಂದ ಮಧ್ಯಮ ವರ್ಗದವರಿಗೆ ಪ್ರಯೋಜನ ಸಿಗಲಿದೆ ಎಂದು ನಿರ್ಮಲಾ ತಿಳಿಸಿದರು.