Advertisement

Valmiki scam: ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸಿದ ಸಚಿವೆ ನಿರ್ಮಲಾ ಸೀತಾರಾಮನ್‌

01:40 AM Jul 29, 2024 | Team Udayavani |

ಬೆಂಗಳೂರು: ಕೇಂದ್ರ ಸರಕಾರ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು “ರಾಜ್ಯಕ್ಕೆ ಅನ್ಯಾಯ’ ಎಂಬ ಅಸ್ತ್ರ ಪ್ರಯೋಗಿಸುತ್ತಿರುವಂತೆಯೇ ಸಿದ್ದರಾಮಯ್ಯಗೆ ನಿರ್ಮಲಾ ತಿರು ಗೇಟು ನೀಡಿದ್ದು, ಮುಡಾ ಹಾಗೂ ವಾಲ್ಮೀಕಿ ನಿಗಮದ ಹಗರಣಗಳನ್ನು ಪ್ರಸ್ತಾವಿಸಿ ವಾಗ್ಧಾಳಿ ನಡೆಸಿದ್ದಾರೆ.

Advertisement

ನಾನು ತಪ್ಪೇ ಮಾಡಿಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಮುಡಾ ಹಗರಣದಂಥ ಆರೋಪಕ್ಕೆ ಸ್ಪಷ್ಟನೆ ನೀಡದೆ ಪ್ರತ್ಯಾರೋಪ ಮಾಡುತ್ತಾರೆ. ವಾಲ್ಮೀಕಿ ನಿಗಮದ ಹಣ ಖಾಸಗಿ ಬ್ಯಾಂಕ್‌ಗೆ ವರ್ಗಾವಣೆ ಆಗುವವರೆಗೆ ಹಣಕಾಸು ಸಚಿವರಾಗಿ ಸಿದ್ದರಾಮಯ್ಯ ಏನು ಮಾಡುತ್ತಿದ್ದರು? ಎಂದು ನಿರ್ಮಲಾ ಪ್ರಶ್ನಿಸಿದರು.

ಪತ್ರಿಕಾಗೋಷ್ಠಿ ವೇಳೆ ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಮಾಡಿರುವ ಆರೋಪಗಳ ಕುರಿತು ಪ್ರಶ್ನಿಸಿದಾಗ ಉತ್ತರಿಸಿದ ಅವರು, ಹಗರಣಗಳು ಬೆಳಕಿಗೆ ಬರುತ್ತಿದ್ದಂತೆ ಏನೂ ನಡೆದೇ ಇಲ್ಲ ಎನ್ನುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದರು. ಅನಂತರದಲ್ಲಿ, ಹಗರಣ ನಡೆದಿಲ್ಲ ಎಂದು ನಾನು ಹೇಳುವುದಿಲ್ಲ, ಇದರಲ್ಲಿ ನಿಗಮದ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಹೇಳಿಕೊಂಡರು. ಸಿಬಿಐಗೆ ಬ್ಯಾಂಕ್‌ ಅಧಿಕಾರಿಗಳು ಪತ್ರ ಬರೆದ ಅನಂತರ ಬ್ಯಾಂಕ್‌ ಅಧಿಕಾರಿಗಳ ವಿರುದ್ಧವೂ ಆರೋಪ ಹೊರಿಸಿದರು. ಮಂತ್ರಿಯಿಂದ ರಾಜೀನಾಮೆ ಪಡೆದರು. ಪ್ರಕರಣದಲ್ಲಿ ವಿಚಾರಣೆಗೊಳಪಟ್ಟವರಿಂದ ಇ.ಡಿ. ಅಧಿಕಾರಿಗಳ ವಿರುದ್ಧವೇ ದೂರು ಕೊಡಿಸಿದರು? ಏನೂ ನಡೆದೇ ಇಲ್ಲ ಎನ್ನುವುದಾದರೆ ಇದನ್ನೆಲ್ಲ ಮಾಡಿದ್ದೇಕೆ?’ ಎಂದು ಪ್ರಶ್ನಿಸಿದರು.

ಭಾಗಿಯಾದವರ ವಿರುದ್ಧ ಕ್ರಮ
ವಾಲ್ಮೀಕಿ ಹಗರಣ ಕೇಸಲ್ಲಿ ಬ್ಯಾಂಕ್‌ನ ಯಾವುದೇ ಅಧಿಕಾರಿ, ಸಿಬಂದಿ ಭಾಗಿ ಯಾಗಿದ್ದರೂ ಕ್ರಮ ಆಗ ಲಿದೆ. ರಾಜ್ಯ ಸರಕಾರದ ರೀತಿ ವಿಳಂಬ ಮಾಡುವ ಪ್ರಶ್ನೆಯೇ ಇಲ್ಲ. ನಿರ್ದಾ ಕ್ಷಿಣ್ಯ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ನಿರ್ಮಲಾ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಚಪ್ಪಾಳೆ ಹೊಡೆಸಿಕೊಳ್ಳಲು ಸಿದ್ಧಹಸ್ತರು
ಜನರಿಂದ ಶಿಳ್ಳೆ, ಚಪ್ಪಾಳೆ ಹೊಡೆಸಿಕೊಳ್ಳಲು ಹೇಗೆ ಬೇಕೋ ಹಾಗೆ ಮಾತನಾಡುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ಧಹಸ್ತರು ಎಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಅಸಮಾಧಾನ ವ್ಯಕ್ತಪಡಿಸಿದರು. ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ ಎಂಬಂತೆ ಪ್ರತೀ ಬಾರಿ ಬಿಂಬಿಸಲು ಪ್ರಯತ್ನಿಸುವ ಅವರು, ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಯತ್ನಿಸುತ್ತಿದ್ದಾರೆ. ಇದಕ್ಕಾಗಿ ಜನರಿಂದ ಶಿಳ್ಳೆ, ಚಪ್ಪಾಳೆ ಹೊಡೆಸಿಕೊಳ್ಳುವಂತಹ ಭಾಷಣ ಮಾಡುತ್ತಾರೆ. ಮಹರ್ಷಿ ವಾಲ್ಮೀಕಿ ನಿಗಮದ ಹಗರಣ ಸೇರಿದಂತೆ ತಮ್ಮ ಮೇಲಿರುವ ಆರೋಪಗಳು, ಜವಾಬ್ದಾರಿಗಳಿಂದ ನುಣುಚಿಕೊಂಡು ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

Advertisement

ನೀತಿ ಆಯೋಗದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಭಾಗವಹಿಸಿದ್ದಾರೆ. ಅವರ ನಿರೀಕ್ಷೆಗಳನ್ನು ವ್ಯಕ್ತಪಡಿಸಿದ್ದಾರೆ. ಆದರೆ ಅವರ ಮೈಕ್‌ ಕೇಳಿಸದಂತೆ (ಆಫ್) ಮಾಡಿದ್ದಾಗಿ ತಪ್ಪು ಮಾಹಿತಿ ಕೊಟ್ಟಿದ್ದಾರೆ. ವಿಪಕ್ಷ ನಾಯಕರು ಸೇರಿ ಕರ್ನಾಟಕದ ಮುಖ್ಯಮಂತ್ರಿಯವರು ಅಲ್ಲಿ ಭಾಗವಹಿಸಿ ಅಭಿಪ್ರಾಯ ವ್ಯಕ್ತಪಡಿಸಬೇಕಿತ್ತು. ಮಾತನಾಡುವ, ಅಭಿಪ್ರಾಯ ತಿಳಿಸುವ ಅವಕಾಶವನ್ನು ಬಳಸಿಕೊಳ್ಳಬೇಕಿತ್ತು ಎಂದು ನಿರ್ಮಲಾ ಅಭಿಪ್ರಾಯಪಟ್ಟರು.

ಉನ್ನತ ಶಿಕ್ಷಣಕ್ಕೆ 10 ಲ.ರೂ. ಸಾಲ
ಯುವಜನರಿಗೆ ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು ನೀಡಲಾಗಿದೆ. ಮೊದಲ ಬಾರಿ ಉದ್ಯೋಗ ಪಡೆಯುವವರಿಗೆ, ಈಗಾಗಲೇ ಉದ್ಯೋಗದಲ್ಲಿದ್ದು, ಬೇರೆಡೆ ಉದ್ಯೋಗ ಪಡೆಯುವವರು, ಉದ್ಯೋಗದಾತರಿಗೆ ಕೊಡುಗೆ ಗಳನ್ನು ನೀಡಿದ್ದು, ಇವೆಲ್ಲವೂ ಇಪಿಎಫ್ಒ ಮೂಲಕ ಜಾರಿ ಆಗಲಿವೆ. ಕೌಶಲ ವೃದ್ಧಿಗೆ ರಾಜ್ಯ ಗಳ ಸಹಯೋಗದಲ್ಲಿ ಐಟಿಐಗಳನ್ನು ಬಳಸಿಕೊಳ್ಳ ಲಿದ್ದೇವೆ. ದೇಶದ ಶ್ರೇಷ್ಠ 500 ಕಂಪೆನಿಗಳಲ್ಲಿ ಇಂಟರ್ನ್ಶಿಪ್‌ ಅವಕಾಶ ಕಲ್ಪಿಸಲಾಗುತ್ತದೆ. ಉನ್ನತ ಶಿಕ್ಷಣಕ್ಕೆ 10 ಲಕ್ಷ ರೂ. ಸಾಲ ಕೊಡಲಿದ್ದು, ಇದರಿಂದ ಮಧ್ಯಮ ವರ್ಗದವರಿಗೆ ಪ್ರಯೋಜನ ಸಿಗಲಿದೆ ಎಂದು ನಿರ್ಮಲಾ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next