Advertisement

Valmiki scam: ಶಾಸಕರು ಭಾಗಿಯಾಗಿದ್ದರೆ ಕಳಂಕ: ಸತೀಶ ಜಾರಕಿಹೊಳಿ

12:06 AM Jul 13, 2024 | Team Udayavani |

ಬೆಳಗಾವಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದಲ್ಲಿ ಮಂತ್ರಿಗಳು ಮತ್ತು ಶಾಸಕರು ಭಾಗಿಯಾಗಿದ್ದರೆ ಅದು ಖಂಡಿತ ಕಳಂಕ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಅವರು ಮಾತನಾಡಿ, ವಾಲ್ಮೀಕಿ ನಿಗಮದ ಹಣ ವರ್ಗಾವಣೆ ಪ್ರಕರಣ ಸದ್ಯ ತನಿಖಾ ಹಂತದಲ್ಲಿದೆ. ಸಂಪೂರ್ಣ ತನಿಖೆ ನಡೆದ ಅನಂತರ ಎಲ್ಲ ಸತ್ಯ ಗೊತ್ತಾಗಲಿದೆ. ಆದರೆ ಈ ಪ್ರಕರಣದಲ್ಲಿ ಮಂತ್ರಿಗಳು ಹಾಗೂ ಶಾಸಕರು ಭಾಗಿಯಾಗಿದ್ದರೆ ಖಂಡಿತವಾಗಿಯೂ ಅದೊಂದು ಕಳಂಕ ಎಂದರು.

187 ಕೋಟಿ ರೂ. ಹಣ ವರ್ಗಾವಣೆಯ ದಾಖಲೆ ನೋಡಿದ ಮೇಲೆಯೇ ಈ ಪ್ರಕರಣ ಗೊತ್ತಾಗಲಿದೆ. ಹೀಗಾಗಿ ತತ್‌ಕ್ಷಣ ಈ ಪ್ರಕರಣ ಹೀಗೆ ಇದೆ ಎಂದು ಹೇಳುವುದು ಕಷ್ಟ ಎಂದು ಅಭಿಪ್ರಾಯಪಟ್ಟರು.ಬಿಜೆಪಿಯವರು ಮುಡಾ ಹಗರಣವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಆದರೆ ಇದರಲ್ಲಿ ಮುಖ್ಯಮಂತ್ರಿಗಳ ಪಾತ್ರ ಏನೂ ಇಲ್ಲ ಎಂದು ಸ್ಪಷ್ಟಪಡಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next