Advertisement

ಶೇ. 7.5ರಷ್ಟು ಮೀಸಲಾತಿಗೆ ಒತ್ತಾಯಿಸಿ ವಾಲ್ಮೀಕಿ ಸಮುದಾಯದಿಂದ ಮುಖ್ಯಮಂತ್ರಿಗಳಿಗೆ ಮನವಿ

09:28 PM Jul 29, 2020 | sudhir |

ಬೆಂಗಳೂರು : ವಾಲ್ಮೀಕಿ ಸಮುದಾಯಕ್ಕೆ ಶೇ. 7.5ರಷ್ಟು ಮೀಸಲಾತಿ ನೀಡುವ ಸಂಬಂಧ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಾಲ್ಮೀಕಿ ಸಮುದಾಯದ ನಿಯೋಗ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದೆ.

Advertisement

ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಮತ್ತು ರಾಜ್ಯದ ಜಲಸಂಪನ್ಮೂಲ ಸಚಿವ ಶ್ರೀ ರಮೇಶ್ ಜಾರಕಿಹೊಳಿ ಅವರ ನೇತೃತ್ವದಲ್ಲಿ ವಾಲ್ಮೀಕಿ ಸಮುದಾಯದ ನಿಯೋಗದಲ್ಲಿದ್ದ ಜನಪ್ರತಿನಿಧಿಗಳು ಮುಖ್ಯಮಂತ್ರಿಗಳನ್ನು ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಕರ್ನಾಟಕ ರಾಜ್ಯದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದರು.

ನ್ಯಾ.ನಾಗಮೋಹನ್ ದಾಸ್ ಅವರ ಸಮಿತಿಯು ಈ ಮೀಸಲಾತಿ ನೀಡುವ ಕುರಿತಂತೆ ಸರ್ಕಾರಕ್ಕೆ ಈಗಾಗಲೇ ವರದಿ ಸಲ್ಲಿಸಿದೆ. ಹಾಗಾಗಿ ವಾಲ್ಮೀಕಿ ಸಮುದಾಯದ ಮೀಸಲಾತಿ ಪರಿಷ್ಕರಣೆ ಮಾಡುವ ಸಂಬಂಧ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಬಳ್ಳಾರಿ ಸಂಸದ ದೇವೇಂದ್ರಪ್ಪ, ಹೆಚ್ ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು, ಚಳ್ಳಕೆರೆ ಶಾಸಕ ರಘುಮೂರ್ತಿ ಜಗಳೂರು ಶಾಸಕ ರಾಮಚಂದ್ರ ಹಾಗೂ ಸಮುದಾಯದ ಮುಖಂಡರು ಭಾಗಿಯಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next