Advertisement

ವಾಲ್ಮೀಕಿ ಕೊಡುಗೆ ಅಪಾರ

12:29 PM Oct 06, 2017 | Team Udayavani |

ಎಚ್‌.ಡಿ.ಕೋಟೆ: ಶ್ರೀ ಮಹರ್ಷಿ ವಾಲ್ಮೀಕಿ ರಾಮಾಯಣ ಮಹಾಕಾವ್ಯ ರಚಿಸಿ ಜಗತ್ತಿಗೆ ಕೊಟ್ಟ ಕೊಡುಗೆ ಅಪಾರವಾಗಿದ್ದು ಅವರ ತತ್ವ ಸಿದ್ದಾಂತ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದು ತಹಶೀಲ್ದಾರ್‌ ಎಂ.ನಂಜುಂಡಯ್ಯ ಹೇಳಿದರು. ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿ ವತಿಯಿಂದ ತಾಲೂಕು ಆಡಳಿತ ಪಟ್ಟಣದ ಮಿನಿ ವಿಧಾನ ಸೌಧದಲ್ಲಿ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಲ್ಲಿ ಮಾತನಾಡಿದರು.

Advertisement

 ರಾಜ್ಯ ಸರ್ಕಾರ ಮಹಾಪುರುಷ ಶ್ರೀ ಮಹರ್ಷಿ ವಾಲ್ಮೀಕಿ ಪುತ್ಥಳಿಯನ್ನು ಅನಾವರಣ ಮಾಡುತ್ತಿರುವುದರಿಂದ ಹೆಚ್ಚಿನ ಜನರು ಬೆಂಗಳೂರಿನಲ್ಲಿ ನಡೆಯುತ್ತಿರುವ ಸರ್ಕಾರದ ಕಾರ್ಯಕ್ರಮಕ್ಕೆ ಹೋಗಿದ್ದಾರೆ. ಹೀಗಾಗಿ ಸರ್ಕಾರದ ಆದೇಶದಂತೆ ತಾಲೂಕು ಆಡಳಿತದ ವತಿಯಿಂದ ಸರಳವಾಗಿ ಆಚರಣೆ ಮಾಡುತ್ತಿದ್ದೇವೆ. ಅಲ್ಲದೆ,  ತಿಂಗಳ ಕೊನೆಯಲ್ಲಿ ಅದ್ಧೂರಿಯಾಗಿ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.

ಮೈಸೂರಿನ ನಟರಾಜ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಪ್ರೊ.ಕೆ.ರಾಣಿ, ಮಹಾಕಾವ್ಯ ರಾಮಾಯಣ ರಚಿಸಿದ ಮಹರ್ಷಿ ವಾಲ್ಮೀಕಿ ಅವರು ಜನಿಸಿದ ಭರತ ಪುಣ್ಯ ಭೂಮಿಯಲ್ಲಿ ನಾವು ಜನ್ಮ ತಾಳಿದ್ದೇ ಒಂದು ಹೆಮ್ಮೆ ಎಂದು ನುಡಿದರು. ಜಿಪಂ ಅಧ್ಯಕ್ಷೆ ನಯಿಮಾ ಸುಲ್ತಾನ್‌, ಪುರಸಭೆ ಅಧ್ಯಕ್ಷೆ ಮಂಜುಳಾ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಶಂಬೇಗೌಡ,

-ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್‌.ಸಿ.ನರಸಿಂಹಮೂರ್ತಿ, ತಾಪಂ ಸದಸ್ಯ ಅಂಕನಾಯ್ಕ, ಜಿಪಂ ಮಾಜಿ ಸದಸ್ಯ ಚಿಕ್ಕವೀರನಾಯ್ಕ, ಶೈಕ್ಷಣಿಕ ಸಂಸ್ಥೆಗಳ ಸಂಸ್ಥಾಪಕ ಎಚ್‌.ವಿ.ಕೃಷ್ಣಸ್ವಾಮಿ, ಪ್ರಗತಿಪರ ರೈತ ಮಲಾರ ಪುಟ್ಟಯ್ಯ, ಆದಿಕರ್ನಾಟಕ ಮಹಾಸಭಾ ಮುದ್ದು ಮಲ್ಲಯ್ಯ, ದಲಿತ ಸಾಹಿತ್ಯ ಪರಿಷತ್‌ ಅಧ್ಯಕ್ಷ ಪುಟ್ಟನಂಜಯ್ಯ, ತಹಶೀಲ್ದಾರ್‌ ಎಂ.ನಂಜುಂಡಯ್ಯ, ಇಒ ಶ್ರೀಕಂಠರಾಜೇಅರಸ್‌ ಮತ್ತಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next