ಅರಂತೋಡು: ಸರಕಾರಿ ಶಾಲೆಗಳಿಂದ ಮಾತ್ರ ಮೌಲ್ಯಯುತ ಶಿಕ್ಷಣ ನೀಡಲು ಸಾಧ್ಯ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.
ಅವರು ಅರಂತೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮದ ಸಮಾರೋಪ ಭಾಷಣ ಮಾಡಿದರು. ಇಂದು ಅಧುನಿಕ ಕಾಲಘಟ್ಟದಲ್ಲಿ ಸರಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಇಳಿಕೆಯಾಗುತ್ತಿದ್ದು ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಿಸಲು ಎಲ್ಲರೂ ಪ್ರಯತ್ನಿಸಬೇಕಾಗಿದೆ ಎಂದು ಹೇಳಿದರು. ಶಾಲೆಗೆ 5 ಲಕ್ಷ ರೂ. ಅನುದಾನ ನೀಡುವುದಾಗಿ ಘೋಷಿದರು.
ತಾ.ಪಂ. ಸದಸ್ಯೆ ಪುಷ್ಪಾ ಮೇದಪ್ಪ, ಪ್ರಗತಿ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕ ಗಿರಿಜಾ ಶಂಕರ ಸುಲಾಯ ದಿಕ್ಸೂಚಿ ಭಾಷಣ ಮಾಡಿದರು. ಕ್ಷೇತ್ರ ಸಂಪನ್ಮೂಲ ಸಮನ್ವಯಧಿಕಾರಿ ವೀಣಾ ಎಂ.ಟಿ., ದೈಹಿಕ ಶಿಕ್ಷಣ ಪರಿವೀಕ್ಷರಾದ ಲಕ್ಷ್ಮೀಶ ರೈ, ಅರಂತೋಡು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಜಯಪ್ರಕಾಶ್, ಅರಂತೋಡು ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಎಪಿಎಂಸಿ ಅಧ್ಯಕ್ಷ ದೀಪಕ್ ಕುತ್ತಮೊಟ್ಟೆ, ಅರಂತೋಡು ಪಾಪ್ಯುಲರ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಪಿ.ಬಿ. ದಿವಾಕರ ರೈ, ನಿವೃತ ಉಪತಹಶೀಲ್ದಾರ್ ಮಹಾಲಿಂಗ ಪಾಟಾಳಿ, ಅರಂತೋಡು ಗ್ರಾ.ಪಂ. ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಮುಖ್ಯ ಶಿಕ್ಷಕಿ ಸರಸ್ವತಿ ಚಿದಾನಂದ, ಶತಮಾನೋತ್ಸವ ಸಮಿತಿ ಅಧ್ಯಕ್ಷ ತೀರ್ಥರಾಮ ಅಡ್ಕಬಳೆ, ಪ್ರಧಾನ ಕಾರ್ಯದರ್ಶಿ ಶೇಷಗಿರಿ ಉಳುವಾರು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಪದ್ಯಮಯ್ಯ ಬೊಳ್ಳೂರು, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಕಿಶೋರ್ ಕುಮಾರ್ ಉಳುವಾರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ಮರಣ ಸಂಚಿಕೆ ಸಂಪಾದಕ ಕೆ.ಆರ್. ಗಂಗಾಧರ ಸ್ಮರಣ ಸಂಚಿಕೆ ಬಗ್ಗೆ ಮಾತನಾಡಿದರು. ವಿವಿಧ ಕ್ಷೇತ್ರಗಳ ಸಾಧಕರನ್ನು ಸಮ್ಮಾನಿಸಲಾಯಿತು.
ಹೊನ್ನಪ್ಪ ಮಾಸ್ತರ್ ಅಡ್ತಲೆ ಸ್ವಾಗತಿಸಿದರು. ಚಿದಾನಂದ ಮಾಸ್ತರ್ ಅಡ್ತಲೆ ಕಾರ್ಯಕ್ರಮ ನಿರೂಪಿಸಿದರು. ಭವಾನಿಶಂಕರ ಅಡ್ತಲೆ ಹಾಗೂ ಧನಂಜಯ ಮೇರ್ಕಜೆ ನಿರೂಪಿಸಿದರು.
ಸಂಸ್ಕಾರ ರೂಢಿಸಿಕೊಳ್ಳಿ
ಜಿ.ಪಂ. ಸದಸ್ಯ ಹರೀಶ್ ಕಂಜಿಪಿಲಿ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಅಧ್ಯಕ್ಷೆ ಲೀಲಾವತಿ ಕೊಡಂಕೇರಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಮಾತನಾಡಿ, ಮಕ್ಕಳಿಗೆ ಸಂಸ್ಕಾರ ಕಲಿಸುವ ಕೆಲಸ ಶಿಕ್ಷಕರಿಂದ ಹಾಗೂ ಹೆತ್ತವರಿಂದ ಆಗಬೇಕಾಗಿದೆ. ಯುವಜನತೆ ಮದ್ಯಪಾನದಂತಹ ಪಿಡುಗಿನಿಂದ ದೂರವಿದ್ದು, ಒಳ್ಳೆಯ ಸಂಸ್ಕಾರ ರೂಢಿಸಿಕೊಳ್ಳಿ ಎಂದರು.