Advertisement

ಮೌಲ್ಯ ಶಿಕ್ಷಣ ಅನುಷ್ಠಾನ: ಇಂದು ದುಂಡು ಮೇಜಿನ ಸಭೆ

09:43 PM Jan 08, 2023 | Team Udayavani |

ಬೆಂಗಳೂರು: ಶಾಲಾ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣವನ್ನು ಅನುಷ್ಠಾನಗೊಳಿಸುವ ಉದ್ದೇಶದೊಂದಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಸೋಮವಾರ (ಜ.9) ದುಂಡು ಮೇಜಿನ ಸಮಾಲೋಚನ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

Advertisement

ವಿಧಾನಸೌಧದ 3ನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯುವ ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ.ನಾಗೇಶ್‌, ಶಿಕ್ಷಣ ತಜ್ಞರು, ವಿವಿಧ ಧಾರ್ಮಿಕ ಗುರುಗಳು, ಚಿಂತಕರು, ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಶಾಲಾ ಶಿಕ್ಷಣದಲ್ಲಿ ಮೌಲ್ಯ ಶಿಕ್ಷಣವನ್ನು ಅಳವಡಿಸುವ ಕುರಿತು ಅಭಿಪ್ರಾಯ/ಸಲಹೆಗಳನ್ನು ಸಂಗ್ರಹಿಸಲು ಈ ಸಭೆಯನ್ನು ಆಯೋಜಿಸಲಾಗಿದೆ. ಈ ಸಭೆಯಲ್ಲಿ ವ್ಯಕ್ತವಾಗುವ ಅಂಶಗಳ ಆಧಾರದ ಮೇಲೆ ಇಲಾಖಾ ಹಂತದಲ್ಲಿ ಆಯೋಜಿಸುವ ಸಭೆಗಳಲ್ಲಿ ಚರ್ಚಿಸಿ ಮೌಲ್ಯ ಶಿಕ್ಷಣದ ಅನುಷ್ಠಾನದ ವಿಧಾನಗಳನ್ನು ಅಂತಿಮಗೊಳಿಸಲಾಗುತ್ತದೆ ಎಂದು ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next