Advertisement

ಶಿಕ್ಷಕರಿಗೆ ಮೌಲ್ಯ ಶಿಕ್ಷಣ ತರಬೇತಿ ಕಾರ್ಯಾಗಾರ

05:15 PM Feb 27, 2021 | Team Udayavani |

ಗಜೇಂದ್ರಗಡ: ಪಟ್ಟಣದ ಮೈಸೂರು ಮಠದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದಿಂದ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಮೌಲ್ಯ ಶಿಕ್ಷಣ ತರಬೇತಿ ಕಾರ್ಯಾಗಾರ ಹಾಗೂ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನಡೆಯಿತು.

Advertisement

ಶಿಕ್ಷಕರ ಸಂಘದ ರಾಷ್ಟ್ರೀಯ ಉಪಾಧ್ಯಕ್ಷ ಬಸವರಾಜ ಗುರಿಕಾರ ಮಾತನಾಡಿ, ಪ್ರತಿ ವಿಷಯಕ್ಕೊಬ್ಬ ಶಿಕ್ಷಕರ ನೇಮಕದ ಮಂಜೂರಾತಿ ಆಗಬೇಕಿದೆ. ಎಲ್ಲವನ್ನೂ ಒಬ್ಬರೇ ನಿಭಾಯಿಸಲು ಸಾಧ್ಯವಿಲ್ಲ. ಇದರಿಂದ ಗುಣಾತ್ಮಕ ಶಿಕ್ಷಣ ನೀಡಲುಅಸಾಧ್ಯ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಸ್ವಾಗತಿಸುತ್ತೇವೆ. ಯಾವುದೇ ನೀತಿಗಳನ್ನು ಸರ್ಕಾರ ಜಾರಿಗೆ ತಂದರೂ, ಅವುಗಳಿಗೆ ಮೀಸಲಿಟ್ಟ ಅನುದಾನ ಕಡಿತಗೊಂಡಾಗ ಆ ನೀತಿಯಿಂದ ಶಿಕ್ಷಕ ಸಮುದಾಯಕ್ಕೆ ಧಕ್ಕೆ ಉಂಟಾಗುವುದನ್ನು ಖಂಡಿಸುತ್ತೇವೆ ಎಂದರು.

ಶಿಕ್ಷಕರ ಸಮಸ್ಯೆಗೆ ಸ್ಪಂದಿಸುವ ಕೆಲಸ ಸಂಘ ಮಾಡುತ್ತಿದೆ. ರಾಜ್ಯದಲ್ಲಿ 19 ಸಾವಿರಕ್ಕಿಂತ ಹೆಚ್ಚು ಕಿರಿಯ ಪ್ರಾಥಮಿಕ ಶಾಲೆಗಳಿವೆ. ಇಂತಹ ಶಾಲೆಗಳಲ್ಲಿ ಇಬ್ಬರು ಅಥವಾ ಮೂವರು ಶಿಕ್ಷಕರಿದ್ದು, ಐದು ತರಗತಿಗಳನ್ನು ನೋಡಿಕೊಳ್ಳುವುದರ ಜೊತೆಗೆ ಆಡಳಿತದ ಜವಾಬ್ದಾರಿ ನಿಭಾಯಿಸಬೇಕಿದೆ. ಇಂತಹ ಪರಿಸ್ಥಿತಿಯಿಂದ ಸರ್ಕಾರಿ ಶಾಲೆಗಳನ್ನು ಸಬಲೀಕರಣಗೋಳಿಸಲು ಹೇಗೆಸಾಧ್ಯವೆಂದು ಬೇಸರ ವ್ಯಕ್ತಪಡಿಸಿದರು. ಪ್ರಾಚಾರ್ಯ ಎಸ್‌.ಡಿ.ಗಾಂಜಿ ಮಾತನಾಡಿ, ಶಿಕ್ಷಕರು ವಿದ್ಯಾರ್ಥಿಗಳಿಗೆಮೌಲ್ಯಯುತ ಶಿಕ್ಷಣ ನೀಡಲು ಮುಂದಾಗಬೇಕು. ನಾವೆಲ್ಲರೂ  ಅಕ್ಷರದೊಂದಿಗೆ ಸಾಗಬೇಕೇ ವಿನಃ ಬೇರೆಡೆಯಲ್ಲ ಎಂದರು.

ಇದೇ ಸಂದರ್ಭದಲ್ಲಿ ನೂತನವಾಗಿ ಆಯ್ಕೆಯಾದ ತಾಲೂಕು ಘಟಕದ ಪದಾಧಿಕಾರಿಗಳನ್ನು ಸನ್ಮಾನಿಸಿ ಪ್ರಮಾಣ ವಚನ ಬೋಧಿಸಲಾಯಿತು. ಮೈಸೂರ ಸಂಸ್ಥಾನ ಮಠದ ವಿಜಯ ಮಹಾಂತ ಸ್ವಾಮೀಜಿ, ಅಭಿನವ ಬೂದೀಶ್ವರ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು. ಡಿಡಿಪಿಐ ಜಿ.ಎಂ. ಬಸವಲಿಂಗಪ್ಪ, ಪುರಸಭೆ ಅಧ್ಯಕ್ಷ ವೀರಣ್ಣಪಟ್ಟಣಶೆಟ್ಟಿ, ವಿ.ಎ.ಹಾದಿಮನಿ, ಎ.ಕೆ.ಒಂಟಿ, ಶರಣು ಗೋಗೇರಿ, ವ್ಹಿ.ಎಂ.ಹಿರೇಮಠ, ಐ.ಎ.ರೇವಡಿ, ಎಂ.ಎಂ.ಹುನಗುಂದ, ಎಸ್‌.ಕೆ.ಸರಗಣಾಚಾರಿ ಇನ್ನಿತರರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next