Advertisement

ವಾ… ವಾ… ವಾ… ವಾಮನ…” ಧನ್ವೀರ್ ಚಿತ್ರದ ಹಾಡು ಬಂತು

06:10 PM Jul 29, 2023 | Team Udayavani |

ನಟ ಧನ್ವೀರ್‌ ನಟನೆಯ ಬಹುನಿರೀಕ್ಷಿತ ಚಿತ್ರ “ವಾಮನ’ ಚಿತ್ರೀಕರಣ ಪೂರ್ಣಗೊಂಡಿದ್ದು, ಬಿಡುಗಡೆಯತ್ತ ಹೆಜ್ಜೆಹಾಕುತ್ತಿದೆ.ಯುವ ನಿರ್ದೇಶಕ ಶಂಕರ್‌ ರಾಮನ್‌ ರಚಿಸಿ ನಿರ್ದೇಶಿಸಿರುವ ಮೊದಲ ಚಿತ್ರ “ವಾಮನ’ಕ್ಕೆ ಗ್ಲೋಬಲ್‌ ಎಂಟರ್‌ಟೈನ್ಮೆಂಟ್‌ ಬ್ಯಾನರ್‌ ಅಡಿಯಲ್ಲಿ ಚೇತನ್‌ ಗೌಡ ನಿರ್ಮಾಣ ಮಾಡಿದ್ದಾರೆ.

Advertisement

ಈಗ ಚಿತ್ರದ ಮೊದಲ ಹಾಡು ಭಾನುವಾರ (ಜು.30) ರಂದು ಬಿಡುಗಡೆಯಾಗುತ್ತಿದೆ. ನಾಯಕನ ಇಂಟ್ರೋಡಕ್ಷನ್‌ ಹಾಡನ್ನು ಅದ್ಧೂರಿಯಾಗಿ ಚಿತ್ರೀಕರಿಸಲಾಗಿದೆ. ಭೂಷಣ್‌ ನೃತ್ಯ ಸಂಯೋಜನೆ ಮಾಡಿರುವ ಈ ಹಾಡನ್ನು ಏಳು ಕಲರ್‌ಫ‌ುಲ್‌ ಸೆಟ್‌ನಲ್ಲಿ ಚಿತ್ರೀಕರಿಸಲಾಗಿದೆ. ಈ ಚಿತ್ರದ ಎಲ್ಲಾ ಹಾಡುಗಳಿಗೂ ಭೂಷಣ್‌ ಅವರೇ ಕೊರಿಯೋಗ್ರಫಿ ಮಾಡಿದ್ದಾರೆ.

“ವಾ… ವಾ… ವಾ… ವಾಮನ, ಇವನ ಮೈ ಮೇಲೆ ಬರುತಾನೆ ರಾವಣ… ಭಯವನ್ನು ಹುಟ್ಟಿಸೋ ಕಾಲ್ಗುಣ…’ ಔಟ್‌ ಅಂಡ್‌ ಔಟ್‌ ಮಾಸ್‌ ಹಾಡನ್ನು ಚಿತ್ರತಂಡ ಬಿಡುಗಡೆ ಮಾಡುತ್ತಿದೆ. ಚೇತನ್‌ ಕುಮಾರ್‌ ಈ ಹಾಡಿಗೆ ಸಾಹಿತ್ಯ ಬರೆದಿದ್ದು, ಅಜನೀಶ್‌ ಲೋಕನಾಥ್‌ ಸಂಗೀತ ಸಂಯೋಜಿಸಿದ್ದಾರೆ.

ಮಹೇಂದ್ರ ಸಿಂಹ ಛಾಯಾಗ್ರಹಣವಿದೆ. ಚಿತ್ರದಲ್ಲಿ ಧನ್ವೀರ್‌ಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ಅಭಿನಯಿಸಿದ್ದು, ತಾರಾ, ಸಂಪತ್‌, ಆದಿತ್ಯ ಮೆನನ್‌, ಅವಿನಾಶ್‌, ಅಚ್ಯುತ್‌ ಕುಮಾರ್‌, ಕಾಕ್ರೊಚ್‌ ಸುಧಿ, ಭೂಷಣ್‌ ಮುಂತಾದವು ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next